Gautam Gambhir: ಕುಟುಂಬ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ; ಕೋಚ್ ಗಂಭೀರ್
ಗೌತಮ್ ಗಂಭೀರ್ ಅವರು ಪತ್ನಿ ಹಾಗೂ ಪುತ್ರಿಯರ ಸಮೇತರಾಗಿ ತಿರುಪತಿಗೆ ಭೇಟಿ ನೀಡಿರುವ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್‌ಐ ‘ಎಕ್ಸ್’ನಲ್ಲಿ ಹಂಚಿಕೊಂಡಿದೆ. ಎರಡು ದಿನಗಳ ಹಿಂದಷ್ಟೇ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ(Siddhivinayak temple) ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.


ತಿರುಪತಿ: ಇಂಗ್ಲೆಂಡ್ ಪ್ರವಾಸಕ್ಕೂ(england test series) ಮುನ್ನ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್(Gautam Gambhir) ಟೆಂಪಲ್ ರನ್ ಶುರು ಮಾಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ(Siddhivinayak temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಭಾನುವಾರ ತಿರುಮಲದ ಪ್ರಸಿದ್ಧ ವೆಂಕಟೇಶ್ವರ(Tirumala Tirupati Temple) ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಗೌತಮ್ ಗಂಭೀರ್ ಅವರು ಪತ್ನಿ ಹಾಗೂ ಪುತ್ರಿಯರ ಸಮೇತರಾಗಿ ತಿರುಪತಿಗೆ ಭೇಟಿ ನೀಡಿರುವ ವಿಡಿಯೊವನ್ನು ಸುದ್ದಿಸಂಸ್ಥೆ ಎಎನ್‌ಐ ‘ಎಕ್ಸ್’ನಲ್ಲಿ ಹಂಚಿಕೊಂಡಿದೆ.
ಭಾರತದ ಇಂಗ್ಲೆಂಡ್ ಪ್ರವಾಸವು ಜೂನ್ 20 ರಂದು ಲೀಡ್ಸ್‌ನ ಹೆಡಿಂಗ್ಲಿಯಲ್ಲಿ ಆರಂಭಿಕ ಟೆಸ್ಟ್‌ನೊಂದಿಗೆ ಆರಂಭವಾಗಲಿದೆ. ಎಡ್ಜ್‌ಬಾಸ್ಟನ್, ಲಾರ್ಡ್ಸ್, ಓಲ್ಡ್ ಟ್ರಾಫರ್ಡ್ ಮತ್ತು ಕೆನ್ನಿಂಗ್ಟನ್ ಓವಲ್ ಉಳಿದ ನಾಲ್ಕು ಟೆಸ್ಟ್‌ಗಳನ್ನು ಆಯೋಜಿಸಲಿವೆ. ಈಗಾಗಲೇ ಇಂಗ್ಲೆಂಡ್ ಲಯನ್ಸ್ ವಿರುದ್ಧ ಆರಂಭಗೊಳ್ಳಲಿರುವ 2 ಪಂದ್ಯಗಳ ಸರಣಿಗೆ ಭಾರತ ‘ಎ’ ತಂಡ(India Squad) ಪ್ರಕಟಗೊಂಡಿದೆ. ಅಭಿಮನ್ಯು ಈಶ್ವರನ್(Abhimanyu Easwaran ) ನಾಯಕರಾಗಿದ್ದಾರೆ. ತಂಡದಲ್ಲಿ ಭಾರತ ಟೆಸ್ಟ್ ತಂಡದ ಕಾಯಂ ಸದಸ್ಯರಾದ ಯಶಸ್ವಿ ಜೈಸ್ವಾಲ್, ನಿತೀಶ್ ರೆಡ್ಡಿ, ಧೃವ್ ಜುರೆಲ್‌ಗೆ ಸ್ಥಾನ ನೀಡಲಾಗಿದೆ.
Gautam Gambhir visited Sri Venkateswara Swamy Temple in Tirumala. 🙏❤️ pic.twitter.com/ceNfwfJZN2
— Mufaddal Vohra (@mufaddal_vohra) May 18, 2025
ಭಾರತ ಎ ತಂಡದೊಂದಿಗೆ ಗಂಭೀರ್ ಕೂಡ ಇಂಗ್ಲೆಂಡ್‌ಗೆ ತೆರಳಲಿದ್ದಾರೆ ಎನ್ನಲಾಗಿದೆ. ಮುಂಚಿತವಾಗಿಯೇ ಇಂಗ್ಲೆಂಡ್ ಪರಿಸ್ಥಿತಿಯನ್ನು ಅಧ್ಯಯನ ಮಾಡುವುದು, ಮೀಸಲು ಕ್ರಿಕೆಟಿಗರ ಪ್ರತಿಭೆಗಳನ್ನು ತಿಳಿದುಕೊಳ್ಳುವುದು ಗಂಭೀರ್ ಉದ್ದೇಶ ಎನ್ನಲಾಗಿದೆ. ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಟೆಸ್ಟ್‌ಗೆ ನಿವೃತ್ತಿ ಹೇಳಿದ ಕಾರಣ ಯುವ ಆಟಗಾರರೊಂದಿಗೆ ಗಂಭೀರ್ ಇಂಗ್ಲೆಂಡ್ ಸವಾಲು ಎದುರಿಸಬೇಕಿದೆ.
ಭಾರತ 'ಎ' ತಂಡ
ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಕರುಣ್ ನಾಯರ್, ಧೃವ್ ಜುರೆಲ್, ನಿತೀಶ್ ರೆಡ್ಡಿ, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ಮಾನವ್ ಸುಥಾರ್, ತನುಷ್ ಕೋಟ್ಯಾನ್, ಮುಕೇಶ್ ಕುಮಾರ್, ಆಕಾಶ್ ದೀಪ್, ಹರ್ಷಿತ್ ರಾಣಾ, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್, ಋತುರಾಜ್ ಗಾಯಕ್ವಾಡ್, ಸರ್ಫರಾಜ್ ಖಾನ್, ತುಷಾರ್ ದೇಶಪಾಂಡೆ, ಹರ್ಷ್ ದುಬೆ.