Champions Trophy: ಫೆ.15ಕ್ಕೆ ಭಾರತದ ಆಟಗಾರರು ದುಬೈಗೆ
ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಜಸ್‌ಪ್ರೀತ್ ಬುಮ್ರಾ(Jasprit Bumrah) ಚಾಂಪಿಯನ್ಸ್ ಟ್ರೋಫಿಯಲ್ಲಿ(Champions Trophy) ಆಡಲಿದ್ದಾರೊ ಇಲ್ಲವೊ ಎಂಬುದು (ಇಂದು) ಮಂಗಳವಾರ ಗೊತ್ತಾಗಲಿದೆ. ಸದ್ಯ ಬುಮ್ರಾ ಬೆಂಗಳೂರಿನ ಎನ್‌ಸಿಎಯಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದಾರೆ. ಈಗಾಗಲೇ ಅವರ ಗಾಯದ ಪ್ರಮಾಣದ ಬಗ್ಗೆ ಬಿಸಿಸಿಐಗೆ ವರದಿ ಸಲ್ಲಿಕೆಯಾಗಿದೆ.
![Champions Trophy: ಫೆ.15ಕ್ಕೆ ಭಾರತದ ಆಟಗಾರರು ದುಬೈಗೆ](https://cdn-vishwavani-prod.hindverse.com/media/original_images/Team_India_21.jpg)
![Profile](https://vishwavani.news/static/img/user.png)
ನವದೆಹಲಿ: ಫೆ.19ರಿಂದ ಆರಂಭಗೊಳ್ಳಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ(Champions Trophy) ಆಡುವುದಕ್ಕಾಗಿ ಭಾರತ ತಂಡದ(Team India) ಆಟಗಾರರು ಫೆ.15ರಂದು ದುಬೈಗೆ ಪ್ರಯಾಣಿಸಲಿದ್ದಾರೆ ಎಂದು ವರದಿಯಾಗಿದೆ. ಭಾರತ ಸದ್ಯ ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳ ಸರಣಿಯಲ್ಲಿ ಆಡುತ್ತಿದೆ. ಅಲ್ಲದೆ, ಭಾರತ ತಂಡ ಈ ಬಾರಿ ಟೂರ್ನಿಗೂ ಮುನ್ನ ಯಾವುದೇ ಅಭ್ಯಾಸ ಪಂದ್ಯ ಆಡುವುದಿಲ್ಲ ಎಂದು ಹೇಳಲಾಗಿದೆ.
ಫೆ.12ರಂದು ಇಂಗ್ಲೆಂಡ್ ವಿರುದ್ಧದ ತವರಿನ ಏಕದಿನ ಸರಣಿ ಕೊನೆಗೊಳ್ಳಲಿದೆ. ಇದಾಗಿ 2 ದಿನಗಳ ವಿಶ್ರಾಂತಿ ಬಳಿಕ ಟೀಮ್ ಇಂಡಿಯಾ ಆಟಗಾರರು ದುಬೈ ವಿಮಾನ ಏರಲಿದ್ದಾರೆ ಎಂದು ತಿಳಿದುಬಂದಿದೆ.
ಸಾಮಾನ್ಯವಾಗಿ ಐಸಿಸಿ ಟೂರ್ನಿಗೆ ಮುನ್ನ ಎಲ್ಲಾ ತಂಡಗಳು ಅಭ್ಯಾಸ ಪಂದ್ಯ ಆಡಲಿದೆ. ಆದರೆ ನಿರಂತರ ಕ್ರಿಕೆಟ್‌ನಿಂದಾಗಿ ಈ ಬಾರಿ ಭಾರತಕ್ಕೆ ಯಾವುದೇ ಅಭ್ಯಾಸ ಪಂದ್ಯ ನಿಗದಿಯಾಗಿಲ್ಲ ಎಂದು ತಿಳಿದುಬಂದಿದೆ. ಫೆ.20ಕ್ಕೆ ಬಾಂಗ್ಲಾದೇಶ ವಿರುದ್ಧ ರೋಹಿತ್ ಪಡೆ ಮೊದಲ ಪಂದ್ಯವಾಡಲಿದೆ. ಫೆ.23ಕ್ಕೆ ಪಾಕಿಸ್ತಾನ, ಮಾ.2ಕ್ಕೆ ನ್ಯೂಜಿಲೆಂಡ್ ವಿರುದ್ಧ ಸೆಣಸಾಡಲಿದೆ. ಟೂರ್ನಿಯಲ್ಲಿ ಆಡುವ 8 ತಂಡಗಳನ್ನು ತಲಾ 4ರಂತೆ 2 ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ರೌಂಡ್ ರಾಬಿನ್ ಲೀಗ್ ಬಳಿಕ ಪ್ರತಿ ಗುಂಪಿನ ಅಗ್ರ 2 ತಂಡಗಳು ಸೆಮಿಫೈನಲ್ಗೇರಲಿವೆ.
ಬುಮ್ರಾ ಭವಿಷ್ಯ ಇಂದು ನಿರ್ಧಾರ
ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಜಸ್‌ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿದ್ದಾರೊ ಇಲ್ಲವೊ ಎಂಬುದು (ಇಂದು) ಮಂಗಳವಾರ ಗೊತ್ತಾಗಲಿದೆ. ಸದ್ಯ ಬುಮ್ರಾ ಬೆಂಗಳೂರಿನ ಎನ್‌ಸಿಎಯಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದಾರೆ. ಈಗಾಗಲೇ ಅವರ ಗಾಯದ ಪ್ರಮಾಣದ ಬಗ್ಗೆ ಬಿಸಿಸಿಐಗೆ ವರದಿ ಸಲ್ಲಿಕೆಯಾಗಿದೆ.
ಇದನ್ನೂ ಓದಿ IND vs ENG: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದಲೂ ಜಾಕೋಬ್ ಬೆಥೆಲ್ ಔಟ್: ಜೋಸ್ ಬಟ್ಲರ್!
ಕೆಲ ವರದಿಗಳ ಪ್ರಕಾರ, ಬುಮ್ರಾ ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಕೆಲ ಪಂದ್ಯಗಳಿಗೆ ಗೈರಾಗಳಿದ್ದಾರೆ ಎನ್ನಲಾಗಿದೆ. ಇನ್ನು ಕೆಲ ಮೂಲಗಳ ಪ್ರಕಾರ ಬುಮ್ರಾ ಫಿಟ್ ಆಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಎಲ್ಲ ಪ್ರಶ್ನೆಗಳಿಗೂ ಇಂದು ಉತ್ತರ ಸಿಗಲಿದೆ. ಒಂದು ವೇಳೆ ಬೂಮ್ರಾ ತಂಡದಿಂದ ಹೊರಗುಳಿದರೆ ಅವರ ಬದಲು ಹರ್ಷಿತ್ ರಾಣಾ ಆಯ್ಕೆಯಾಗುವ ಸಾಧ್ಯತೆಯಿದೆ.
ವೇಳಾಪಟ್ಟಿ
ಫೆ.19 ಪಾಕಿಸ್ತಾನ-ನ್ಯೂಜಿಲ್ಯಾಂಡ್, ಸ್ಥಳ: ಕರಾಚಿ
ಫೆ. 20 ಬಾಂಗ್ಲಾದೇಶ-ಭಾರತ, ಸ್ಥಳ: ದುಬೈ
ಫೆ. 21 ಅಫ್ಘಾನಿಸ್ತಾನ-ದ. ಆಫ್ರಿಕಾ, ಸ್ಥಳ: ಕರಾಚಿ
ಫೆ. 22 ಆಸ್ಟ್ರೆಲಿಯಾ-ಇಂಗ್ಲೆಂಡ್, ಸ್ಥಳ: ಲಾಹೋರ್
ಫೆ. 23 ಭಾರತ-ಪಾಕಿಸ್ತಾನ,ಸ್ಥಳ: ದುಬೈ
ಫೆ. 24 ಬಾಂಗ್ಲಾದೇಶ-ನ್ಯೂಜಿಲ್ಯಾಂಡ್, ಸ್ಥಳ: ರಾವಲ್ಪಿಂಡಿ
ಫೆ. 25 ಅಸ್ಟ್ರೆಲಿಯಾ-ದ. ಆಫ್ರಿಕಾ,ಸ್ಥಳ: ರಾವಲ್ಪಿಂಡಿ
ಫೆ. 26 ಅಫ್ಘಾನಿಸ್ತಾನ-ಇಂಗ್ಲೆಂಡ್,ಸ್ಥಳ: ಲಾಹೋರ್
ಫೆ. 27 ಪಾಕಿಸ್ತಾನ-ಬಾಂಗ್ಲಾದೇಶ,ಸ್ಥಳ: ರಾವಲ್ಪಿಂಡಿ
ಫೆ. 28 ಅಫ್ಘಾನಿಸ್ತಾನ-ಆಸ್ಟ್ರೆಲಿಯಾ,ಸ್ಥಳ: ಲಾಹೋರ್
ಮಾ. 1 ದಕ್ಷಿಣ ಆಫ್ರಿಕಾ-ಇಂಗ್ಲೆಂಡ್,ಸ್ಥಳ: ಕರಾಚಿ
ಮಾ. 2 ಭಾರತ-ನ್ಯೂಜಿಲ್ಯಾಂಡ್, ಸ್ಥಳ: ದುಬೈ
ಮಾ. 4 ಸೆಮಿಫೈನಲ್-1, ಸ್ಥಳ: ದುಬೈ
ಮಾ. 5 ಸೆಮಿಫೈನಲ್-2, ಸ್ಥಳ: ಲಾಹೋರ್
ಮಾ. 9 ಫೈನಲ್ -ಸ್ಥಳ: ದುಬೈ/ಲಾಹೋರ್