Sunday, 8th September 2024

ಭಾರತ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ: ಗಿಲ್‌ ಔಟ್‌

ಚೆನ್ನೈ: ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ 227 ರನ್‌ಗಳಿಂದ ಭಾರತ ತಂಡ ಸೋತಿತ್ತು. ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್ ಪ್ರವೇಶಿಸಬೇಕಾದರೆ ಭಾರತ ಕ್ರಿಕೆಟ್ ತಂಡವು ಕಠಿಣ ಹಾದಿಯಲ್ಲಿ ಸಾಗುವ ಒತ್ತಡದಲ್ಲಿದೆ.

ಸದ್ಯ ಬ್ಯಾಟಿಂಗ್‌ ಆರಂಭಿಸಿರುವ ಭಾರತ 10 ಓವರ್‌ಗಳಲ್ಲಿ 37 ರನ್‌ ಗಳಿಸಿ 1 ವಿಕೆಟ್‌ ಕಳೆದುಕೊಂಡಿದೆ. ಶುಭಮನ್‌ ಗಿಲ್‌, ಒಲಿ ಸ್ಟೋನ್ಸ್‌ ಎಸೆದ ಎರಡನೇ ಓವರ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದಿದ್ದಾರೆ

Leave a Reply

Your email address will not be published. Required fields are marked *

error: Content is protected !!