ಸಿಡ್ನಿ: ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿಯೂ(IND vs AUS 3rd ODI) ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಮಿಚೆಲ್ ಮಾರ್ಷ್ ಬ್ಯಾಟಿಂಗ್ ಆಯ್ದುಕೊಂಡರು. ಹ್ಯಾಟ್ರಿಕ್ ಟಾಸ್ ಸೋಲು ಕಂಡ ಭಾರತ ಬೌಲಿಂಗ್ ಆಹ್ವಾನ ಪಡೆಯಿತು. ಭಾರತ ಸತತ 18ನೇ ಬಾರಿಗೆ ಟಾಸ್ ಸೋತ ಕೆಟ್ಟ ದಾಖಲೆ ತನ್ನ ಹೆಸರಿಗೆ ಸೇರಿಸಿಕೊಂಡಿದೆ.
ಏಕದಿನ ಕ್ರಿಕೆಟ್‌ನಲ್ಲಿ ಭಾರತ ಹಿಂದೆಂದೂ ಆಸೀಸ್‌ಗೆ ಕ್ಲೀನ್‌ಸ್ವೀಪ್ ಸಾಧಿಸಲು ಅವಕಾಶ ನೀಡಿಲ್ಲ. ಹೀಗಾಗಿ ಚೊಚ್ಚಲ ಬಾರಿಗೆ ದ್ವಿಪಕ್ಷೀಯ ಸರಣಿಯಲ್ಲಿ ಭಾರತ ಎದುರು ಕ್ಲೀನ್‌ಸ್ವೀಪ್ ಸಾಧಿಸಲು ಆಸೀಸ್ ಹೋರಾಡಲಿದೆ. ಸರಣಿ ವೈಟ್‌ವಾಷ್‌ನಿಂದ ಪಾರಾಗುವ ಕಠಿಣ ಪರೀಕ್ಷೆಯೊಂದಿಗೆ ಭಾರತ ಕಣಕ್ಕಿಳಿದಿದೆ.
ಆಸ್ಟ್ರೇಲಿಯಾದಲ್ಲಿ ಮುಂದಿನ ಎರಡು ವರ್ಷ ಭಾರತ ಯಾವುದೇ ಏಕದಿನ ಸರಣಿ ಆಡದಿರುವುದರಿಂದ ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಪಾಲಿಗೆ ಇದು ಆಸೀಸ್‌ನಲ್ಲಿ ಬಹುತೇಕ ಕೊನೇ ಪಂದ್ಯ ಎನಿಸಿದೆ.
ಇದನ್ನೂ ಓದಿ IPL 2026: ಐಪಿಎಲ್ 2026 ಹರಾಜಿಗೂ ಮುನ್ನ ಧೋನಿಯನ್ನು ಬಿಡುಗಡೆ ಮಾಡಲು ಮುಂದಾದ ಸಿಎಸ್‌ಕೆ
ಎರಡು ಬದಲಾವಣೆ
ಭಾರತ ಕೊನೆಗೂ ಈ ಪಂದ್ಯದಲ್ಲಿ ಎರಡು ಬದಲಾವಣೆ ಮಾಡಿತು. ಕುಲ್‌ದೀಪ್ ಯಾದವ್ ಮತ್ತು ಕನ್ನಡಿಗ ಪ್ರಸಿದ್ಧ್ ಕೃಷ್ಣ ಆಡುವ ಬಳಗದಲ್ಲಿ ಅವಕಾಶ ಪಡೆದರು. ಇವರಿಗಾಗಿ ಅರ್ಶ್‌ದೀಪ್ ಸಿಂಗ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಜಾಗ ಬಿಟ್ಟರು. ಆಸ್ಟ್ರೇಲಿಯಾ ಒಂದು ಬದಲಾವಣೆ ಮಾಡಿತು. ಜೇವಿಯರ್ ಬಾರ್ಟ್ಲೆಟ್ ಬದಲು ನಥಾನ್ ಎಲ್ಲಿಸ್ ಆಡಲಿಳಿದರು.
ಉಭಯ ಆಡುವ ಬಳಗ
ಭಾರತ: ರೋಹಿತ್ ಶರ್ಮಾ, ಶುಭಮನ್ ಗಿಲ್(ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್(ವಿ.ಕೀ.), ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್(ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ(ವಿ. ಕೀ.), ಕೂಪರ್ ಕಾನೊಲಿ, ಮಿಚೆಲ್ ಓವನ್, ನಾಥನ್ ಎಲ್ಲಿಸ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್.