Thursday, 12th December 2024

ಭಯೋತ್ಪಾದನೆಗೆ ತಡೆ ಬಿದ್ದರೆ ಕ್ರಿಕೆಟ್ ಸರಣಿ ಸಾಧ್ಯ: ಜೈಶಂಕರ್

ಮುಂಬೈ: ನಮ್ಮ ಆಲೋಚನೆ ಏನು ಎಂದು ಎಲ್ಲರಿಗೂ ತಿಳಿದಿದೆ ಎಂದು ಜೈಶಂಕರ್ ಹೇಳಿದ್ದು, ನೆರೆಯ ರಾಷ್ಟ್ರ ಪಾಕಿಸ್ತಾನವು ಭಯೋತ್ಪಾದನೆ ನಿರ್ಮೂಲನೆ ಮಾಡಿದರೆ ಮಾತ್ರ ಎರಡೂ ದೇಶಗಳ ನಡುವೆ ಕ್ರಿಕೆಟ್ ಸರಣಿ ಆಯೋಜಿಸಲು ಸಾಧ್ಯ ಎಂದು ವಿದೇಶಾಂಗ ಸಚಿವರು ಸ್ಪಷ್ಟಪಡಿಸಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಹೇಳಿಕೆಯಿಂದ ಕೋಪಗೊಂಡ ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ, ಭಾರತದಲ್ಲಿ ನಡೆಯ ಲಿರುವ 50 ಓವರ್ಗಳ ವಿಶ್ವಕಪ್ ಅನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಏಷ್ಯಾಕಪ್ ಪಾಕಿಸ್ತಾನದಲ್ಲಿ ನಡೆಯಲಿದೆ, ಆದರೆ ಭಾರತ ತಂಡವು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳುವುದು ಕಷ್ಟ ಎನ್ನಲಾಗಿದೆ. ಈ ನಡುವೆ ಕೆಲವು ತಿಂಗಳ ಹಿಂದೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಭಾರತ ತಂಡವು ಪಾಕಿಸ್ತಾನ ಪ್ರವಾಸಕ್ಕೆ ಹೋಗು ವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು.