ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Asia Cup 2025 final: ಏಷ್ಯಾಕಪ್‌ಗಾಗಿ ಇಂದು ಇಂಡೋ-ಪಾಕ್ ಫೈನಲ್ ಫೈಟ್‌; ಪಾಂಡ್ಯ ಅಲಭ್ಯ?

India vs Pakistan: ಸ್ನಾಯು ಸೆಳೆತಕ್ಕೆ ಒಳಗಾಗಿರುವ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಫೈನಲ್‌ಗೆ ಅಲಭ್ಯರಾಗುವ ಆತಂಕವಿದೆ. ಅವರ ಲಭ್ಯತೆ ಬಗ್ಗೆ ಪಂದ್ಯದ ದಿನ ಬೆಳಗ್ಗೆ ನಿರ್ಧರಿಸುವುದಾಗಿ ಬೌಲಿಂಗ್‌ ಕೋಚ್‌ ಮಾರ್ಕೆಲ್‌ ಹೇಳಿದ್ದಾರೆ. ಒಂದು ವೇಳೆ ಪಾಂಡ್ಯ ಹೊರಬಿದ್ದರೆ ಅರ್ಶ್‌ದೀಪ್‌ಗೆ ಅವಕಾಶ ಸಿಗಲಿದೆ.

ಪಾಕ್‌ ವಿರುದ್ಧದ ಹೈವೋಲ್ಟೇಜ್ ಫೈನಲ್‌ ಪಂದ್ಯಕ್ಕೆ ಭಾರತ ಪರ 2 ಬಲಾವಣೆ

-

Abhilash BC Abhilash BC Sep 28, 2025 8:20 AM

ದುಬೈ: ಏಷ್ಯಾಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಸಾಂಪ್ರದಾಯಿಕ ಎದುರಾಳಿಗಳಾದ ಹಾಲಿ ಚಾಂಪಿಯನ್ ಭಾರತ(India vs Pakistan) ಹಾಗೂ ಪಾಕಿಸ್ತಾನ ತಂಡಗಳ ನಡುವಣ ಹೈವೋಲ್ಟೇಜ್‌ ಫೈನಲ್(Asia Cup 2025 final) ಪಂದ್ಯಕ್ಕೆ ಕ್ಷಣಗಣೆ ಆರಂಭವಾಗಿದೆ. ಇಂದು ರಾತ್ರಿ 8 ಗಂಟೆಗೆ ದುಬೈ ಅಂಗಳದಲ್ಲಿ ಇತ್ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಹಿಂದಿನ ಎರಡು ಮುಖಾಮುಖಿ ಬಳಿಕ ಮೈದಾನದ ಒಳಗೆ ಹಾಗೂ ಹೊರಗಿನ ಘಟನೆಗಳಿಂದ ಉಭಯ ತಂಡಗಳಗೂ ಇದು ಪ್ರತಿಷ್ಠೆಯ ಪಂದ್ಯವಾಗಿದೆ.

ಭಾರತದ ಆಡುವ 11ರ ಬಳಗದಲ್ಲಿ ಬದಲಾವಣೆ ಮಾಡುವುದು ಖಾತ್ರಿ. ಹಿಂದಿನ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಪ್ರಧಾನ ವೇಗಿ ಜಸ್‌ಪ್ರೀತ್ ಬುಮ್ರಾ ಹಾಗೂ ಆಲ್‌ರೌಂಡರ್‌ ಶಿವಂ ದುಬೆ ಮರಳಿ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಹರ್ಷಿತ್ ರಾಣಾ ಹಾಗೂ ಆರ್ಷದೀಪ್ ಸಿಂಗ್ ಸ್ಥಾನ ಬಿಟ್ಟುಕೊಡಬೇಕಿದೆ.

ಸ್ನಾಯು ಸೆಳೆತಕ್ಕೆ ಒಳಗಾಗಿರುವ ಆಲ್ರೌಂಡರ್‌ ಹಾರ್ದಿಕ್‌ ಪಾಂಡ್ಯ ಫೈನಲ್‌ಗೆ ಅಲಭ್ಯರಾಗುವ ಆತಂಕವಿದೆ. ಅವರ ಲಭ್ಯತೆ ಬಗ್ಗೆ ಪಂದ್ಯದ ದಿನ ಬೆಳಗ್ಗೆ ನಿರ್ಧರಿಸುವುದಾಗಿ ಬೌಲಿಂಗ್‌ ಕೋಚ್‌ ಮಾರ್ಕೆಲ್‌ ಹೇಳಿದ್ದಾರೆ. ಒಂದು ವೇಳೆ ಪಾಂಡ್ಯ ಹೊರಬಿದ್ದರೆ ಅರ್ಶ್‌ದೀಪ್‌ಗೆ ಅವಕಾಶ ಸಿಗಲಿದೆ. ಅವರು ಕಳೆದ ಲಂಕಾ ವಿರುದ್ಧದ ಪಂದ್ಯದಲ್ಲಿ ಉತ್ತಮ ಬೌಲಿಂಗ್‌ ಪ್ರದರ್ಶನ ತೋರಿದ್ದರು.

ಸಂಭಾವ್ಯ ತಂಡಗಳು

ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸಂಜು ಸ್ಯಾಮ್ಸನ್ (ವಿ.ಕೀ.), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ/ಅರ್ಶ್‌ದೀಪ್‌ ಸಿಂಗ್‌, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.

ಪಾಕಿಸ್ತಾನ: ಸಾಹಿಬ್ಜಾದಾ ಫರ್ಹಾನ್, ಫಖರ್ ಜಮಾನ್, ಸೈಮ್ ಅಯೂಬ್, ಸಲ್ಮಾನ್ ಅಘಾ (ನಾಯಕ), ಹುಸೇನ್ ತಲತ್, ಮೊಹಮ್ಮದ್ ಹ್ಯಾರಿಸ್ (ವಿ.ಕೀ.), ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಹಾರಿಸ್ ರೌಫ್, ಅಬ್ರಾರ್ ಅಹ್ಮದ್.

ಪಂದ್ಯ ಆರಂಭ: ರಾತ್ರಿ 8ಕ್ಕೆ.

ನೇರ ಪ್ರಸಾರ: ಸೋನಿ ಸ್ಪೋರ್ಟ್ಸ್‌/ಸೋನಿ ಲಿವ್‌