ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs PAK: ಇಂದಿನ ಪಾಕ್‌ ವಿರುದ್ಧದ ಪಂದ್ಯಕ್ಕೆ ಹೇಗಿರಲಿದೆ ಭಾರತ ಆಡುವ ಬಳಗ?

ಕಳೆದ ಒಮಾನ್‌ ವಿರುದ್ಧದ ಪಂದ್ಯಕ್ಕೆ ವರುಣ್ ಚಕ್ರವರ್ತಿ ಮತ್ತು ಜಸ್‌ಪ್ರೀತ್‌ ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ಅವರ ಸ್ಥಾನದಲ್ಲಿ ಅರ್ಶ್‌ದೀಪ್‌ ಸಿಂಗ್‌ ಮತ್ತು ಹರ್ಷಿತ್‌ ರಾಣಾ ಅವಕಾಶ ಪಡೆದಿದ್ದರು. ಆದರೆ ಪಾಕ್‌ ವಿರುದ್ಧದ ಪಂದ್ಯಕ್ಕೆ ಬುಮ್ರಾ ಮತ್ತು ವರುಣ್‌ ಕಣಕ್ಕಿಳಿಯಲಿದ್ದು, ಹೀಗಾಗಿ ಭಾರತ ತನ್ನ ಆಡುವ ಬಳಗದಲ್ಲಿ 2 ಬದಲಾವಣೆ ಮಾಡಲಿದೆ.

ಇಂದಿನ ಪಾಕ್‌ ವಿರುದ್ಧದ ಪಂದ್ಯಕ್ಕೆ ಹೇಗಿರಲಿದೆ ಭಾರತ ಆಡುವ ಬಳಗ?

-

Abhilash BC Abhilash BC Sep 21, 2025 8:42 AM

ದುಬೈ: ಭಾನುವಾರ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಏಷ್ಯಾಕಪ್ 2025 ರ(Asia Cup 2025) ಸೂಪರ್ 4 ಹಂತದ ತನ್ನ ಮೊದಲ ಪಂದ್ಯದಲ್ಲಿ ಭಾರತ(IND vs PAK) ತಂಡ ಪಾಕಿಸ್ತಾನವನ್ನು ಎದುರಿಸಲಿದೆ. ಯುಎಇ, ಪಾಕಿಸ್ತಾನ ಮತ್ತು ಓಮನ್ ತಂಡಗಳನ್ನು ಸೋಲಿಸಿ ಗುಂಪು ಹಂತದಲ್ಲಿ ಹ್ಯಾಟ್ರಿಕ್ ಜಯಗಳಿಸಿರುವ ಸೂರ್ಯಕುಮಾರ್‌ ಯಾದವ್‌ ಬಳಗ ಮತ್ತೊಂದು ಗೆಲುವಿನ ತವಕದಲ್ಲಿದೆ. ಈ ಪಂದ್ಯಕ್ಕೆ ಭಾರತದ ಆಡುವ ಬಳಗ ಹೇಗಿರಲಿದೆ ಎಂಬ ಮಾಹಿತಿ ಇಲ್ಲಿದೆ.

ಕಳೆದ ಒಮಾನ್‌ ವಿರುದ್ಧದ ಪಂದ್ಯಕ್ಕೆ ವರುಣ್ ಚಕ್ರವರ್ತಿ ಮತ್ತು ಜಸ್‌ಪ್ರೀತ್‌ ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ಅವರ ಸ್ಥಾನದಲ್ಲಿ ಅರ್ಶ್‌ದೀಪ್‌ ಸಿಂಗ್‌ ಮತ್ತು ಹರ್ಷಿತ್‌ ರಾಣಾ ಅವಕಾಶ ಪಡೆದಿದ್ದರು. ಆದರೆ ಪಾಕ್‌ ವಿರುದ್ಧದ ಪಂದ್ಯಕ್ಕೆ ಬುಮ್ರಾ ಮತ್ತು ವರುಣ್‌ ಕಣಕ್ಕಿಳಿಯಲಿದ್ದು, ಹೀಗಾಗಿ ಭಾರತ ತನ್ನ ಆಡುವ ಬಳಗದಲ್ಲಿ 2 ಬದಲಾವಣೆ ಮಾಡಲಿದೆ. ಅಲ್ಲದೆ ರಾಣಾ ಮತ್ತು ಅರ್ಶ್‌ದೀಪ್‌ ದುಬಾರಿಯಾಗಿದ್ದರು.

ಬ್ಯಾಟಿಂಗ್‌ನಲ್ಲಿ ಭಾರತವೇ ಬಲಿಷ್ಠವಾಗಿದೆ. ಶುಭ್‌ಮನ್‌ ಗಿಲ್‌, ಅಭಿಷೇಕ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌, ಸಂಜು ಸ್ಯಾಮ್ಸನ್, ತಿಲಕ್‌ ವರ್ಮಾರಂತಹ ಶ್ರೇಷ್ಠ ಬ್ಯಾಟರ್‌ಗಳಿದ್ದಾರೆ. ಪಾಕ್‌ ತಂಡ ಸೈಮ್‌ ಅಯೂಬ್, ಹಸನ್ ನವಾಜ್‌, ಫಖರ್‌ ಜಮಾನ್‌, ಮೊಹಮ್ಮದ್‌ ಹಾರಿಸ್‌ರನ್ನು ಹೆಚ್ಚಾಗಿ ಅವಲಂಬಿಸಿದೆ.

ಭಾರತ ಸಂಭಾವ್ಯ ಆಡುವ ಬಳಗ

ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸಂಜು ಸ್ಯಾಮ್ಸನ್ (ವಿ.ಕೀ.), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.

ಇದನ್ನೂ ಓದಿ IND vs PAK: ಇಂದು 'ಸೂಪರ್‌ ಫೋರ್‌ ಸಂಡೇ'; ಬದ್ಧ ಎದುರಾಳಿ ಭಾರತ-ಪಾಕ್‌ ಮತ್ತೆ ಕಣಕ್ಕೆ