India Squad: ಭಾರತ ‘ಎ’ ತಂಡದಲ್ಲಿ ಸ್ಥಾನ ಪಡೆದ ಕನ್ನಡಿಗ ಕರುಣ್ ನಾಯರ್
ಕರುಣ್ ಕೂಡ 3 ಅಥವಾ 4ನೇ ಕ್ರಮಾಂಕದಲ್ಲಿ ಆಡಲು ಸೂಕ್ತ ಬ್ಯಾಟರ್ ಆಗಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿಯಿಂದ ತೆರವಾದ ಸ್ಥಾನಕ್ಕೆ ಇವರು ಸೂಕ್ತ ಆಟಗಾರನಾಗಬಲ್ಲರು. 2016ರಲ್ಲಿ ಕರುಣ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ತ್ರಿಶತಕ ಗಳಿಸಿದ್ದರು. ಆದರೆ 2017ರ ನಂತರ ಅವರಿಗೆ ಮತ್ತೆ ಟೆಸ್ಟ್ ತಂಡದಲ್ಲಿ ಆಡುವ ಅವಕಾಶ ಸಿಕ್ಕಿಲ್ಲ.

ಮುಂಬಯಿ: ಇಂಗ್ಲೆಂಡ್ ಲಯನ್ಸ್ ವಿರುದ್ಧ ಆರಂಭಗೊಳ್ಳಲಿರುವ 2 ಪಂದ್ಯಗಳ ಸರಣಿಗೆ ಭಾರತ ‘ಎ’ ತಂಡ(India Squad) ಪ್ರಕಟಗೊಂಡಿದ್ದು, ತಂಡದಲ್ಲಿ ಕರ್ನಾಟಕದ ಕರುಣ್ ನಾಯರ್(Karun Nair)ಗೆ ಸ್ಥಾನ ನೀಡಲಾಗಿದೆ. ಮೇ 30ರಿಂದ ಸರಣಿ ಆರಂಭವಾಗಲಿದೆ. ಅಭಿಮನ್ಯು ಈಶ್ವರನ್(Abhimanyu Easwaran ) ನಾಯಕರಾಗಿದ್ದಾರೆ. ತಂಡದಲ್ಲಿ ಭಾರತ ಟೆಸ್ಟ್ ತಂಡದ ಕಾಯಂ ಸದಸ್ಯರಾದ ಯಶಸ್ವಿ ಜೈಸ್ವಾಲ್, ನಿತೀಶ್ ರೆಡ್ಡಿ, ಧೃವ್ ಜುರೆಲ್‌ಗೆ ಸ್ಥಾನ ನೀಡಲಾಗಿದೆ. ರಣಜಿ ಟೂರ್ನಿ ಆಡಲು ಅಸಡ್ಡೆ ತೋರಿ ಭಾರತ ತಂಡದಿಂದ ಹೊರಬಿದ್ದಿದ್ದ ಇಶಾನ್ ಕಿಶನ್‌ಗೂ ಮತ್ತೆ ಅವಕಾಶ ನೀಡಲಾಗಿದೆ.
ಶುಭ್‌ಮನ್ ಗಿಲ್ ಹಾಗೂ ಭಾರೀ ನಿರೀಕ್ಷೆ ಮೂಡಿಸಿರುವ ಸಾಯಿ ಸುದರ್ಶನ್ 2ನೇ ಪಂದ್ಯಕ್ಕೆ ಆಯ್ಕೆಗೆ ಲಭ್ಯರಿರಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ರಣಜಿ ಮತ್ತು ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಗಳಲ್ಲಿ ರನ್ ಹೊಳೆಯನ್ನೇ ಹರಿಸಿದ್ದ ಕನ್ನಡಿಗ ಕರುಣ್ ನಾಯರ್ ಭಾರತ ‘ಎ’ ತಂಡದ ಪರ ಉತ್ತಮ ಪ್ರದರ್ಶನ ತೋರಿದರೆ ಮುಖ್ಯ ತಂಡಕ್ಕೆ ಆಯ್ಕೆಯಾಗುವ ಸುವರ್ಣ ಅವಕಾಶ ಅವರ ಮುಂದಿದೆ.
ಕರುಣ್ ಕೂಡ 3 ಅಥವಾ 4ನೇ ಕ್ರಮಾಂಕದಲ್ಲಿ ಆಡಲು ಸೂಕ್ತ ಬ್ಯಾಟರ್ ಆಗಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿಯಿಂದ ತೆರವಾದ ಸ್ಥಾನಕ್ಕೆ ಇವರು ಸೂಕ್ತ ಆಟಗಾರನಾಗಬಲ್ಲರು. 2016ರಲ್ಲಿ ಕರುಣ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ತ್ರಿಶತಕ ಗಳಿಸಿದ್ದರು. ಆದರೆ 2017ರ ನಂತರ ಅವರಿಗೆ ಮತ್ತೆ ಟೆಸ್ಟ್ ತಂಡದಲ್ಲಿ ಆಡುವ ಅವಕಾಶ ಸಿಕ್ಕಿಲ್ಲ.
ಇದನ್ನೂ ಓದಿ IPL 2025: ಐಪಿಎಲ್ ಉಳಿದ ಪಂದ್ಯ ಆಡದಂತೆ ವಿದೇಶಿ ಆಟಗಾರರಿಗೆ ಮನವಿ ಮಾಡಿದ ಆಸೀಸ್ ವೇಗಿ
ಭಾರತ 'ಎ' ತಂಡ
ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಕರುಣ್ ನಾಯರ್, ಧೃವ್ ಜುರೆಲ್, ನಿತೀಶ್ ರೆಡ್ಡಿ, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ಮಾನವ್ ಸುಥಾರ್, ತನುಷ್ ಕೋಟ್ಯಾನ್, ಮುಕೇಶ್ ಕುಮಾರ್, ಆಕಾಶ್ ದೀಪ್, ಹರ್ಷಿತ್ ರಾಣಾ, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್, ಋತುರಾಜ್ ಗಾಯಕ್ವಾಡ್, ಸರ್ಫರಾಜ್ ಖಾನ್, ತುಷಾರ್ ದೇಶಪಾಂಡೆ, ಹರ್ಷ್ ದುಬೆ.