Wednesday, 11th December 2024

ಇನ್ನಿಂಗ್ಸ್ ಡಿಕ್ಲೇರ್: ಭಾರತದ ಗೆಲುವಿಗೆ ಕಠಿಣ ಗುರಿ ನೀಡಿದ ಆಸೀಸ್‌

ಸಿಡ್ನಿ: ಪ್ರವಾಸಿ ಭಾರತ ವಿರುದ್ಧದ ಮೂರನೇ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 312 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು, ಭಾರತದ ಗೆಲುವಿಗೆ 407 ರನ್ ಗಳ ಕಠಿಣ ಗುರಿ ನೀಡಿದೆ. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 94 ರನ್ ಮುನ್ನಡೆ ಪಡೆದಿತ್ತು.

ಸ್ಟೀವನ್ ಸ್ಮಿತ್ (81) ಮತ್ತು ಮರ್ನಸ್ ಲ್ಯಾಬುಶೆನ್ (73) ಮತ್ತು ಗ್ರೀನ್ (84) ಅವರ ಭರ್ಜರಿ ಬ್ಯಾಟಿಂಗ್‌ನಿಂದಾಗಿ ಎರಡನೇ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 6 ವಿಕೆಟ್ ನಷ್ಟಕ್ಕೆ 312 ರನ್ ಗಳಿಸಿತು. ಟಿಮ್ ಪೈನ್ (ನಾಟೌಟ್ 39) ಗಳಿಸಿ ಕ್ರೀಸ್‌ನಲ್ಲಿದ್ದರು. ಗ್ರೀನ್ ವಿಕೆಟ್ ಪತನದೊಂದಿಗೆ ಆಸ್ಟ್ರೇಲಿಯಾ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.

ಭಾರತದ ಪರ ಅಶ್ವಿನ್ (95ಕ್ಕೆ 2) ಮತ್ತು ನವದೀಪ್ ಸೈನಿ (54ಕ್ಕೆ 2) ಯಶಸ್ವಿ ಬೌಲರ್‌ಗಳೆನಿಸಿದರು. ಮುಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ತಲಾ ಒಂದು ವಿಕೆಟ್ ಕಿತ್ತರು.