ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಇಂಗ್ಲೆಂಡ್ ವಿರುದ್ಧ ಟಿ20 ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮುಂಬೈನ ಸಿದ್ಧಿವಿನಾಯಕ ದೇವಾಲಯಕ್ಕೆ ಭೇಟಿ ನೀಡಿದ ಟೀಮ್‌ ಇಂಡಿಯಾ

T20 World Cup Semi-Final: ತಿಲಕ್ ಅವರ ಫಾರ್ಮ್ ಮತ್ತು ಕಡಿಮೆ ಸ್ಟ್ರೈಕ್ ರೇಟ್‌ನಿಂದಾಗಿ ಪಂದ್ಯಾವಳಿಗೆ ಕಳಪೆ ಆರಂಭ ಸಿಕ್ಕಿದ್ದರೂ, ಜಿಂಬಾಬ್ವೆ ಪಂದ್ಯದಲ್ಲಿ ಅವರು ವೇಗವಾಗಿ 44 ರನ್ ಗಳಿಸಿದರು. ವೆಸ್ಟ್ ಇಂಡೀಸ್ ವಿರುದ್ಧ ಭಾರತದ ಗೆಲುವಿನಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು, ಕೇವಲ 15 ಎಸೆತಗಳಲ್ಲಿ 27 ರನ್ ಗಳಿಸಿದರು.

ಸಿದ್ಧಿವಿನಾಯಕ ದೇವಾಲಯಕ್ಕೆ ಭೇಟಿ ನೀಡಿದ ಟೀಮ್‌ ಇಂಡಿಯಾ

Axar Patel, Ishan Kishan visit Siddhivinayak Temple in Mumbai -

Abhilash BC
Abhilash BC Mar 5, 2026 5:00 PM

ಮುಂಬಯಿ, ಮಾ.5: ಇಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 2026 ರ ಟಿ 20 ವಿಶ್ವಕಪ್ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ಕ್ರಿಕೆಟ್ ತಂಡದ ಸದಸ್ಯರು ಮುಂಬೈನ ಶ್ರೀ ಸಿದ್ಧಿವಿನಾಯಕ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಸೆಮಿಫೈನಲ್ ಪಂದ್ಯಕ್ಕೂ ಮುನ್ನ ದೇವಾಲಯದಲ್ಲಿ ದರ್ಶನ ಪಡೆದ ಆಟಗಾರರಲ್ಲಿ ಕ್ರಿಕೆಟಿಗರಾದ ಅಕ್ಷರ್ ಪಟೇಲ್, ಇಶಾನ್ ಕಿಶನ್ ಮತ್ತು ಅಭಿಷೇಕ್ ಶರ್ಮಾ, ನಾಯಕ ಸೂರ್ಯಕುಮಾರ್‌ ಯಾದವ್‌ ಮತ್ತು ತಿಲಕ್‌ ವರ್ಮಾ ಸೇರಿದ್ದಾರೆ.

ಇಂಗ್ಲೆಂಡ್‌ ವಿರುದ್ಧ ಉತ್ತಮವಾಗಿ ಆಡುವಂತಾಗಲಿ ಎಂದು ಆಟಗಾರರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಅಭಿಷೇಕ್‌ ಶರ್ಮ ಇದುವರೆಗೂ ನಿರೀಕ್ಷಿತ ಬ್ಯಾಟಿಂಗ್‌ ಪ್ರದರ್ಶನ ತೋರಿಲ್ಲ. ನಾಯಕ ಸೂರ್ಯಕುಮಾರ್ ಈ ಪಂದ್ಯಾವಳಿಯ ಆರಂಭಿಕ ಪಂದ್ಯದವಾಗ ಅಮೆರಿಕ ವಿರುದ್ಧ ಅರ್ಧಶತಕ ಬಾರಿಸಿದ್ದು ಬಿಟ್ಟರೆ ಆ ಬಳಿಕ ದೊಡ್ಡ ಮೊತ್ತ ಬಾರಿಸಿಲ್ಲ.

ತಿಲಕ್ ಅವರ ಫಾರ್ಮ್ ಮತ್ತು ಕಡಿಮೆ ಸ್ಟ್ರೈಕ್ ರೇಟ್‌ನಿಂದಾಗಿ ಪಂದ್ಯಾವಳಿಗೆ ಕಳಪೆ ಆರಂಭ ಸಿಕ್ಕಿದ್ದರೂ, ಜಿಂಬಾಬ್ವೆ ಪಂದ್ಯದಲ್ಲಿ ಅವರು ವೇಗವಾಗಿ 44 ರನ್ ಗಳಿಸಿದರು. ವೆಸ್ಟ್ ಇಂಡೀಸ್ ವಿರುದ್ಧ ಭಾರತದ ಗೆಲುವಿನಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು, ಕೇವಲ 15 ಎಸೆತಗಳಲ್ಲಿ 27 ರನ್ ಗಳಿಸಿದರು.

ಇಂದಿನ ಇಂಗ್ಲೆಂಡ್‌ ವಿರುದ್ಧದ ಸೆಮಿ ಪಂದ್ಯದಲ್ಲಿ ವಿಶೇಷ ದಾಖಲೆ ಬರೆಯಲು ಸಜ್ಜಾದ ಬುಮ್ರಾ

ಕಳೆದ ಎರಡು ಪಂದ್ಯಗಳಲ್ಲಿ ದುಬಾರಿಯಾಗಿರುವ ಸ್ಪಿನ್ನರ್‌ ವರುಣ್‌ ಚಕ್ರವರ್ತಿ ಮತ್ತು ಅರ್ಶ್‌ದೀಪ್‌ ಸಿಂಗ್‌ ಅವರನ್ನು ಈ ಪಂದ್ಯದಿಂದ ಕೈಬಿಟ್ಟು ಅವರ ಸ್ಥಾನದಲ್ಲಿ ಕುಲ್‌ದೀಪ್‌ ಯಾದವ್‌ ಮತ್ತು ಮೊಹಮ್ಮದ್‌ ಸಿರಾಜ್‌ ಅವಕಾಶ ಪಡೆಯುವ ಸಾಧ್ಯತೆ ಅಧಿಕ. ಉಭಯ ಆಟಗಾರರು ಈ ಮೈದಾನದಲ್ಲಿ ಉತ್ತಮ ದಾಖಲೆಯನ್ನು ಕೂಡ ಹೊಂದಿದ್ದಾರೆ.



ಸಂಭಾವ್ಯ ತಂಡಗಳು

ಇಂಗ್ಲೆಂಡ್: ಫಿಲ್ ಸಾಲ್ಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜಾಕೋಬ್ ಬೆಥೆಲ್, ಟಾಮ್ ಬ್ಯಾಂಟನ್, ಹ್ಯಾರಿ ಬ್ರೂಕ್ (ನಾಯಕ), ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್, ಜೇಮೀ ಓವರ್ಟನ್, ಜೋಫ್ರಾ ಆರ್ಚರ್, ಆದಿಲ್ ರಶೀದ್.

ಭಾರತ: ಅಭಿಷೇಕ್‌ ಶರ್ಮ, ಸಂಜು ಸ್ಯಾಮ್ಸನ್‌ (ವಿಕೆಟ್‌ ಕೀಪರ್‌), ಇಶಾನ್‌ ಕಿಶನ್‌, ತಿಲಕ್‌ ವರ್ಮಾ, ಸೂರ್ಯಕುಮಾರ್‌ ಯಾದವ್‌ (ನಾಯಕ), ಹಾರ್ದಿಕ್‌ ಪಾಂಡ್ಯ, ಶಿವಂ ದುಬೆ, ಅಕ್ಷರ್‌ ಪಟೇಲ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌, ಕುಲ್‌ದೀಪ್‌ ಯಾದವ್‌.