ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಭಾರತ
IND vs NZ 3rd Odi: ಕಿವೀಸ್ ತಂಡ ಈ ಬಾರಿ ಭಾರತದಲ್ಲಿ ಏಕದಿನ ಸರಣಿ ಗೆಲುವಿನ ಬರ ನೀಗಿಸಿಕೊಳ್ಳುವ ವಿಶ್ವಾಸದಲ್ಲಿದೆ. ತಂಡ 1989ರಿಂದಲೂ ಭಾರತ ಪ್ರವಾಸ ಕೈಗೊಳ್ಳುತ್ತಿದೆ. ಆದರೆ ಒಮ್ಮೆಯೂ ಸರಣಿ ಜಯಿಸಿಲ್ಲ. 2024ರಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದಿದ್ದ ನ್ಯೂಜಿಲೆಂಡ್, ಈ ಬಾರಿ ಏಕದಿನ ಸರಣಿಯನ್ನೂ ಕೈವಶಪಡಿಸಿಕೊಳ್ಳುವ ಗುರಿ ಇಟ್ಟುಕೊಂಡಿದೆ.
India vs New Zealand live score -
ಇಂದೋರ್, ಜ.18: ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿದೆ. ಭಾರತ ಈ ಪಂದ್ಯದಕ್ಕೆ ಒಂದು ಬದಲಾವಣೆ ಮಾಡಿಕೊಂಡಿತು. ಪ್ರಸಿದ್ಧ್ ಕೃಷ್ಣ ಅವರನ್ನು ಕೈಬಿಟ್ಟು ಎಡಗೈ ವೇಗಿ ಅರ್ಶ್‌ದೀಪ್ ಸಿಂಗ್‌ಗೆ ಅವಕಾಶ ನೀಡಿತು.
ಕಿವೀಸ್ ತಂಡ ಈ ಬಾರಿ ಭಾರತದಲ್ಲಿ ಏಕದಿನ ಸರಣಿ ಗೆಲುವಿನ ಬರ ನೀಗಿಸಿಕೊಳ್ಳುವ ವಿಶ್ವಾಸದಲ್ಲಿದೆ. ತಂಡ 1989ರಿಂದಲೂ ಭಾರತ ಪ್ರವಾಸ ಕೈಗೊಳ್ಳುತ್ತಿದೆ. ಆದರೆ ಒಮ್ಮೆಯೂ ಸರಣಿ ಜಯಿಸಿಲ್ಲ. 2024ರಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದಿದ್ದ ನ್ಯೂಜಿಲೆಂಡ್, ಈ ಬಾರಿ ಏಕದಿನ ಸರಣಿಯನ್ನೂ ಕೈವಶಪಡಿಸಿಕೊಳ್ಳುವ ಗುರಿ ಇಟ್ಟುಕೊಂಡಿದೆ.
ಹೋಳ್ಕರ್ ಕ್ರಿಕೆಟ್ ಕ್ರೀಡಾಂಗಣವು ಬ್ಯಾಟಿಂಗ್‌ಗೆ ಹೆಸರುವಾಸಿ. ಮೊದಲು ಬ್ಯಾಟಿಂಗ್ ಮಾಡುವ ತಂಡವು ಕನಿಷ್ಠ 340-350 ರನ್ ಗಳಿಸಲು ನೋಡಬೇಕು. ಏಕೆಂದರೆ ಇದಕ್ಕಿಂತ ಕಡಿಮೆ ಮೊತ್ತವನ್ನು ರಕ್ಷಿಸುವುದು ಬೌಲರ್‌ಗಳಿಗೆ ಕಷ್ಟಕರ. ಪಿಚ್ ಸಮತಟ್ಟಾಗಿದ್ದು, ಸಣ್ಣ ಬೌಂಡರಿಗಳನ್ನು ಹೊಂದಿದೆ. ಜೊತೆಗೆ ಇಬ್ಬನಿಯ ಕಾಟ ಇರುವ ಕಾರಣ ಟಾಸ್ ಗೆದ್ದ ಭಾರತ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
A look at #TeamIndia's Playing XI for the decider 🙌
— BCCI (@BCCI) January 18, 2026
Updates ▶️ https://t.co/KR2ertVmpx#INDvNZ | @IDFCFIRSTBank pic.twitter.com/EtixO5NZg3
ಉಭಯ ತಂಡಗಳು
ನ್ಯೂಜಿಲ್ಯಾಂಡ್: ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಹೇ(ವಿ.ಕೀ.), ಮೈಕೆಲ್ ಬ್ರೇಸ್‌ವೆಲ್(ನಾಯಕ), ಜಕಾರಿ ಫೌಲ್ಕ್ಸ್, ಕೈಲ್ ಜೇಮಿಸನ್, ಕ್ರಿಸ್ಟಿಯನ್ ಕ್ಲಾರ್ಕ್, ಜೇಡೆನ್ ಲೆನ್ನಾಕ್ಸ್.
ಭಾರತ: ರೋಹಿತ್ ಶರ್ಮಾ, ಶುಭಮನ್ ಗಿಲ್(ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿ.ಕೀ.), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ
ಪ್ರಾಸಾರ: ಸ್ಟಾರ್‌ಸ್ಪೋರ್ಟ್ಸ್, ಜಿಯೋ ಹಾಟ್‌ಸ್ಟಾರ್