ಕೋಲ್ಕತಾ: ಸೆಪ್ಟೆಂಬರ್ 9ರಿಂದ 28ರವರೆಗೆ ಯುಎಇಯಲ್ಲಿ ಏಷ್ಯಾಕಪ್ ಟಿ20 ಟೂರ್ನಿ(Sourav Ganguly) ನಡೆಯಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಚೇರ್ಮನ್ ಮೊಹ್ಸಿನ್ ನಖ್ವಿ ಈಗಾಗಲೇ ಘೋಷಿಸಿದ್ದಾರೆ. ಅಂದರಂತೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ(IND vs PAK) ತಂಡಗಳು ಸೆಪ್ಟೆಂಬರ್ 14ರಂದು ಮುಖಾಮುಖಿ ಆಗಲಿವೆ. ಭಾರತೀಯ ಅಭಿಮಾನಿಗಳು ಪಾಕ್ ವಿರುದ್ಧ ಭಾರತ ಪಂದ್ಯ ಆಡಬಾರದು ಎಂದು ಆಗ್ರಹಿಸಿದ್ದಾರೆ. ಆದರೆ ಮಾಜಿ ನಾಯಕ ಸೌರವ್ ಗಂಗೂಲಿ ಪಾಕ್ ವಿರುದ್ಧ ಕ್ರಿಕೆಟ್ ಆಡುದಕ್ಕೆ ಬೆಂಬಲ ಸೂಚಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಗಂಗೂಲಿ, ʼಭಾರತ ಮತ್ತು ಪಾಕಿಸ್ತಾನ ತಮ್ಮ ಕ್ರಿಕೆಟ್ ಸಂಬಂಧವನ್ನು ಮುಂದುವರಿಸಬೇಕು. ಆದರೆ ಭಯೋತ್ಪಾದನೆ ನಡೆಯಬಾರದುʼಎಂದು ಗಂಗೂಲಿ ಹೇಳಿದರು.
ಭಾರತ ಮತ್ತು ಪಾಕಿಸ್ತಾನ ತಂಡಗಳು ಯುಎಇ ಮತ್ತು ಒಮಾನ್ ಜತೆಗೆ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ. ಸೆಪ್ಟೆಂಬರ್ 14 ರಂದು ಪರಸ್ಪರ ಸೆಣಸಾಡಲಿದೆ. ಸೂಪರ್ ಫೋರ್ ಹಂತಕ್ಕೆ ಅರ್ಹತೆ ಪಡೆದರೆ ಸೆಪ್ಟೆಂಬರ್ 21 ರಂದು ಮತ್ತೆ ಸೆಣಸಾಡುವ ಸಾಧ್ಯತೆ ಇದೆ. ಎರಡೂ ತಂಡಗಳು ಫೈನಲ್‌ಗೆ ತಲುಪಿದರೆ, ಭಾರತ ಮತ್ತು ಪಾಕಿಸ್ತಾನ ತಂಡಗಳು ಮತ್ತೊಂದು ಮುಖಾಮುಖಿಯಾಗುವ ಸಾಧ್ಯತೆ ಇದೆ.
ಇತ್ತೀಚೆಗೆ ಮಾಜಿ ಆಟಗಾರರ ವಿಶ್ವ ಲೆಜೆಂಡ್ಸ್ ಚಾಂಪಿಯನ್‌ಷಿಪ್ ಟೂರ್ನಿಯಲ್ಲಿ ಭಾರತ ತಂಡದ ಕೆಲ ಆಟಗಾರರು ಪಾಕಿಸ್ತಾನದ ಜತೆಗೆ ಆಡಲು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಪಂದ್ಯವನ್ನು ರದ್ದುಗೊಳಿಸಲಾಗಿತ್ತು. ಹೀಗಾಗಿ ಏಷ್ಯಾ ಕಪ್‌ನಲ್ಲಿಯೂ ಭಾರತ ತಂಡ ಪಾಕ್ ವಿರುದ್ಧ ಆಡಬಾರದು ಎನ್ನುವುದು ದೇಶವಾಸಿಗಳ ಆಗ್ರಹ. ಹಾಲಿ ಚಾಂಪಿಯನ್ ಭಾರತ ತಂಡ ಸೆ.10ರಂದು ಯುಎಇ ವಿರುದ್ಧ ತನ್ನ ಮೊದಲ ಪಂದ್ಯ ಆಡಲಿದೆ. 3ನೇ ಲೀಗ್ ಪಂದ್ಯದಲ್ಲಿ ಸೆ. 19ರಂದು ಓಮನ್ ವಿರುದ್ಧ ಆಡಲಿದೆ.
ಇದನ್ನೂ ಓದಿ IND vs PAK: ಇನ್ನು ಮುಂದೆ ವಿಶ್ವಕಪ್ ಗ್ರೂಪ್ ಹಂತದಲ್ಲಿ ಭಾರತ-ಪಾಕ್ ಪಂದ್ಯ ನಡೆಯುವುದು ಅನುಮಾನ!