ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IND vs PAK: ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಪಾಕ್

Asia Cup 2025: ಭಾರತ-ಪಾಕಿಸ್ತಾನ ಕ್ರಿಕೆಟ್‌ ಪಂದ್ಯ ವಿಶ್ವದ ಯಾವುದೇ ಕ್ರೀಡಾಂಗಣದಲ್ಲಿದ್ದರೂ, ಟಿಕೆಟ್‌ಗಳಿಗೆ ಹೆಚ್ಚಿನ ಬೇಡಿಕೆ ಇರುತ್ತದೆ. ಮಾರಾಟಕ್ಕಿಟ್ಟ ಕೆಲ ಗಂಟೆಗಳಲ್ಲೇ ಟಿಕೆಟ್‌ಗಳು ಖಾಲಿಯಾಗುತ್ತಿದ್ದವು. ಆದರೆ ಈ ಬಾರಿ ಪಂದ್ಯದ ಟಿಕೆಟ್‌ಗಳು ಸಂಪೂರ್ಣವಾಗಿ ಮಾರಾಟವಾಗಲಿಲ್ಲ. ಇದಕ್ಕೆ ಕಾರಣ ಕಳೆದ ಏಪ್ರಿಲ್‌ನಲ್ಲಿ ಪಹಲ್ಗಾಂನಲ್ಲಿ ನಡೆದಿದ್ದ ಭೀಕರ ಉಗ್ರ ದಾಳಿ.

ದುಬೈ: ಬುದ್ಧ ಎದುರಾಳಿ ಪಾಕಿಸ್ತಾನ(IND vs PAK) ಏಷ್ಯಾ ಕಪ್‌ ಟಿ20 ಟೂರ್ನಿಯಲ್ಲಿ(Asia Cup 2025) ಭಾರತ ವಿರುದ್ಧ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದೆ. ಭಾರತ ಬೌಲಿಂಗ್‌ ಆಹ್ವಾನ ಪಡೆಯತು. ಕಳೆದ ಏಪ್ರೀಲ್‌ನಲ್ಲಿ ಪಹಲ್ಗಾಂನಲ್ಲಿ ನಡೆದಿದ್ದ ಭೀಕರ ಉಗ್ರ ದಾಳಿ ಬಳಿಕ ಇತ್ತಂಡಗಳ ನಡುವೆ ನಡೆಯುತ್ತಿರುವ ಮೊದಲ ಕ್ರಿಕೆಟ್‌ ಪಂದ್ಯ ಇದಾಗಿದೆ. ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮ, ಬಾಬರ್‌ ಅಜಂ ಮತ್ತು ಮೊಹಮ್ಮದ್‌ ರಿಜ್ವಾನ್‌ ಈ ಬಾರಿ ತಂಡದಲ್ಲಿ ಇಲ್ಲವಾದರೂ ಉಭಯ ತಂಡಗಳಲ್ಲಿ ವಿಶ್ವ ದರ್ಜೆಯ ಯುವ ಶ್ರೇಷ್ಠ ಆಟಗಾರರಿದ್ದು, ಭಾರೀ ಪೈಪೋಟಿ ನಿರೀಕ್ಷಿಸಲಾಗಿದೆ.

ದುಬೈ ಕ್ರೀಡಾಂಗಣದ ಪಿಚ್‌ ಸ್ಪರ್ಧಾತ್ಮಕವಾಗಿದ್ದು, ಬ್ಯಾಟರ್‌ಗಳ ಜೊತೆ ಬೌಲರ್ಸ್‌ಗೂ ನೆರವು ನೀಡಬಲ್ಲದು. ಆದರೆ ರಾತ್ರಿ ವೇಳೆ ಮಂಜು ಬೀಳುವ ಕಾರಣ ಚೇಸಿಂಗ್ ತಂಡಕ್ಕೆ ಉಪಯೋಗವಾಗಲಿದೆ. ಆದರೆ ಅಚ್ಚರಿ ಎಂಬಂತೆ ಪಾಕಿಸ್ತಾನ ಬ್ಯಾಟಿಂಗ್‌ ಆಯ್ದುಕೊಂಡಿತು.

ಭಾರತ ತನ್ನ ಆಡುವ ಬಳಗದಲ್ಲಿ ಯಾವುದೇ ಬಲಾವಣೆ ಮಾಡಲಿಲ್ಲ. ಯುಎಇ ವಿರುದ್ಧದ ತನ್ನ ಮೊದಲ ಪಂದ್ಯದಲ್ಲಿ ಆಡಿದ ತಂಡವನ್ನೇ ಭಾರತ ಈ ಪಂದ್ಯಕ್ಕೂ ಕಣಕ್ಕಿಳಿಸಿತು. ಸ್ಪಿನ್-ಭರಿತ ಲೈನ್‌ಅಪ್‌ನೊಂದಿಗೆ ಆಡಲಿದೆ. ಪಾಕಿಸ್ತಾನ ಕೂಡ ಯಾವುದೇ ಬದಲಾವಣೆ ಮಾಡಲಿಲ್ಲ.

ಬ್ಯಾಟಿಂಗ್‌ನಲ್ಲಿ ಭಾರತವೇ ಬಲಿಷ್ಠವಾಗಿದೆ. ಶುಭ್‌ಮನ್‌ ಗಿಲ್‌, ಅಭಿಷೇಕ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌, ಸಂಜು ಸ್ಯಾಮ್ಸನ್, ತಿಲಕ್‌ ವರ್ಮಾರಂತಹ ಶ್ರೇಷ್ಠ ಬ್ಯಾಟರ್‌ಗಳಿದ್ದಾರೆ. ಪಾಕ್‌ ತಂಡ ಸೈಮ್‌ ಅಯೂಬ್, ಹಸನ್ ನವಾಜ್‌, ಫಖರ್‌ ಜಮಾನ್‌, ಮೊಹಮ್ಮದ್‌ ಹಾರಿಸ್‌ರನ್ನು ಹೆಚ್ಚಾಗಿ ಅವಲಂಬಿಸಿದೆ.

ಉಭಯ ಆಡುವ ಬಳಗ

ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸಂಜು ಸ್ಯಾಮ್ಸನ್ (ವಿ.ಕೀ.), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.

ಪಾಕಿಸ್ತಾನ: ಸೈಮ್‌, ಫರ್ಹಾನ್‌, ಹಾರಿಸ್‌, ಫಖರ್‌, ಸಲ್ಮಾನ್‌ ಆಘಾ(ನಾಯಕ), ಹಸನ್‌ ನವಾಜ್, ಮೊಹಮ್ಮದ್‌ ನವಾಜ್‌, ಫಹೀಮ್‌, ಶಾಹೀನ್‌, ಸುಫಿಯಾನ್‌, ಅಬ್ರಾರ್