ವಿಶಾಖಪಟ್ಟಣಂ ಪಿಚ್ ಯಾರಿಗೆ ಸಹಕಾರಿ?; ಸಾಂಭವ್ಯ ಆಡುವ ಬಳಗ ಹೀಗಿದೆ
India vs South Africa 3rd ODI: ಇಲ್ಲಿನ ಪಿಚ್‌ನಲ್ಲಿ ಇದುವರೆಗೆ 300ಕ್ಕೂ ಹೆಚ್ಚು ಗುರಿ ಬೆನ್ನಟ್ಟಲಾಗಿಲ್ಲ. ಆದ್ದರಿಂದ ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಈ ಪಿಚ್ ಹೆಚ್ಚು ಸಹಕಾರಿಯಾಗಲಿದೆ. ಪಂದ್ಯ ನಡೆಯುವ ಶನಿವಾರ ಹವಾಮಾನವು 28°C ತಾಪಮಾನವಿದ್ದು, ಮಳೆಯ ಸಾಧ್ಯತೆ ತೀರಾ ಕಡಿಮೆಯಿದೆ.
ವಿಶಾಖಪಟ್ಟಣಂ ಸ್ಟೇಡಿಯಂ -
ವಿಶಾಖಪಟ್ಟಣಂ, ಡಿ.5: ಭಾರತ ಮತ್ತು ದಕ್ಷಿಣ ಆಫ್ರಿಕಾ(India vs South Africa 3rd ODI) ನಡುವೆ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿ 1-1 ರಿಂದ ಸಮಬಲಗೊಂಡಿದೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 17 ರನ್‌ಗಳಿಂದ ರಾಂಚಿಯಲ್ಲಿ ಗೆಲುವು ದಾಖಲಿಸಿತ್ತು. ಇನ್ನು ರಾಯ್‌ಪುರದಲ್ಲಿ ನಡೆದಿದ್ದ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 4 ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು. ಹೀಗಾಗಿ ಮೂರನೇ ಪಂದ್ಯ ಉಭಯ ತಂಡಗಳಿಗೂ ನಿರ್ಣಾಯಕವಾಗಿದ್ದು, ಗೆಲ್ಲುವ ತಂಡ ಸರಣಿ ಪಡೆದುಕೊಳ್ಳಲಿದೆ. ಸರಣಿ ನಿರ್ಣಾಯಕ ಪಂದ್ಯ ಡಿಸೆಂಬರ್ 6ರಂದು ವಿಶಾಖಪಟ್ಟಣದ ಡಾ. ವೈ. ಎಸ್. ರಾಜಶೇಖರ ರೆಡ್ಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.
ಪಿಚ್ ರಿಪೊರ್ಟ್
ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ ಕ್ರೀಡಾಂಗಣವು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದೆ. ಭಾರತೀಯ ಬ್ಯಾಟರ್‌ಗಳಾದ ವಿರಾಟ್ ಕೊಹ್ಲಿ, ಋತುರಾಜ್ ಗಾಯಕ್ವಾಡ್ ಹಾಗೂ ನಾಯಕ ಕೆ ಎಲ್ ರಾಹುಲ್ ಭರ್ಜರಿ ಫಾರ್ಮ್‌ನಲ್ಲಿರುವುದರಿಂದ ಬಿಗ್ ಸ್ಕೋರ್ ದಾಖಲಿಸುವ ಸಾಧ್ಯತೆಯಿದೆ. ಆದಾಗ್ಯೂ, ಬೌಲರ್‌ಗಳು ಬೌನ್ಸ್ ಮತ್ತು ವೇಗ ಪಡೆಯಬಹುದು. ಇನ್ನು ಈ ಪಿಚ್‌ನಲ್ಲಿ ಇದುವರೆಗೆ 300ಕ್ಕೂ ಹೆಚ್ಚು ಗುರಿ ಬೆನ್ನಟ್ಟಲಾಗಿಲ್ಲ. ಆದ್ದರಿಂದ ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಈ ಪಿಚ್ ಹೆಚ್ಚು ಸಹಕಾರಿಯಾಗಲಿದೆ. ಪಂದ್ಯ ನಡೆಯುವ ಶನಿವಾರ ಹವಾಮಾನವು 28°C ತಾಪಮಾನವಿದ್ದು, ಮಳೆಯ ಸಾಧ್ಯತೆ ತೀರಾ ಕಡಿಮೆಯಿದೆ.
ಇದನ್ನೂ ಓದು IND vs SA: ಕೊಹ್ಲಿ, ಗಾಯಕ್ವಾಡ್ ಶತಕಗಳು ವ್ಯರ್ಥ, ಭಾರತಕ್ಕೆ ತಿರುಗೇಟು ನೀಡಿದ ದಕ್ಷಿಣ ಆಫ್ರಿಕಾ!
ಮುಖಾಮುಖಿ
ಓಟ್ಟು ಪಂದ್ಯ: 96
ಭಾರತ; 41 ಗೆಲುವು
ದಕ್ಷಿಣ ಆಫ್ರಿಕಾ; 52 ಗೆಲುವು
ರದ್ದು; 3
ಸಾಂಭವ್ಯ ಆಡುವ ಬಳಗ
ಭಾರತ: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, (ನಾಯಕ) ಋತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ನಿತೀಶ್ ಕುಮಾರ್ ರೆಡ್ಡಿ.
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್(ವಿ.ಕೀ.), ಐಡೆನ್ ಮಾರ್ಕ್ರಾಮ್, ಟೆಂಬಾ ಬವುಮಾ(ನಾಯಕ), ಮ್ಯಾಥ್ಯೂ ಬ್ರೀಟ್ಜ್ಕೆ, ಟೋನಿ ಡಿ ಜೋರ್ಜಿ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಕೇಶವ್ ಮಹಾರಾಜ್, ನಾಂದ್ರೆ ಬರ್ಗರ್, ಲುಂಗಿ ಎನ್‌ಗಿಡಿ.
ನೇರ ಪ್ರಸಾರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್/ಜಿಯೋ-ಹಾಟ್‌ಸ್ಟಾರ್
ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ.