Sunday, 16th June 2024

ಭಾರತ ಟಾಸ್ ಗೆದ್ದು, ಬೌಲಿಂಗ್‌ ಆಯ್ಕೆ

ಲಂಡನ್‌: ಮೊದಲ ಏಕದಿನ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು, ಬೌಲಿಂಗ್‌ ಆರಿಸಿ ಕೊಂಡಿದೆ. ಭಾರತ ತಂಡವು ಇಂಗ್ಲೆಂಡ್ ಪ್ರವಾಸದಲ್ಲಿ ಟೆಸ್ಟ್ ಸರಣಿ ಡ್ರಾಗೊಳಿಸಿ, ಟಿ20 ಪಂದ್ಯವನ್ನು 2-1 ಅಂತರದಿಂದ ಗೆದ್ದಿದೆ.

ಕಳೆದ ಎರಡೂವರೆ ವರ್ಷಗಳಿಂದ ಕಳಪೆ ಫಾರ್ಮ್‌ನಿಂದ ನಿರಾಸೆ ಮೂಡಿಸುತ್ತಿರುವ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಆಡುತ್ತಿಲ್ಲ.
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ, ಸೂರ್ಯಕುಮಾರ್ ಯಾದವ್ ಅಥವಾ ಶ್ರೇಯಸ್ ಅಯ್ಯರ್ ೩ನೇ ಸ್ಥಾನದಲ್ಲಿ ಕಣಕ್ಕಿಳಿಯ ಲಿದ್ದಾರೆ. ಸೂರ್ಯಕುಮಾರ್ ಯಾದವ್ ಅವರು ಮೂರನೇ ಟಿ20 ಪಂದ್ಯದಲ್ಲಿ ಶತಕ ಸಿಡಿಸಿದ್ದರಿಂದ ಉತ್ತಮ ಫಾರ್ಮ್‌ನಲ್ಲಿದ್ದಾರೆ.

ಮೂರನೇ ಟಿ20 ಪಂದ್ಯದಲ್ಲಿ ಪುಟಿದೆದ್ದ ಇಂಗ್ಲೆಂಡ್, ಆ ವೇಗವನ್ನು ಕಾಪಾಡಿಕೊಳ್ಳಲು ನೋಡುತ್ತಿದೆ. ಬೆನ್ ಸ್ಟೋಕ್ಸ್ ಮತ್ತು ಜೋ ರೂಟ್ ಸೇರ್ಪಡೆಯೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಸ್ವಲ್ಪ ಸ್ಥಿರತೆಯನ್ನು ನಿರೀಕ್ಷಿಸಬಹುದು ಮತ್ತು ಜಾನಿ ಬೈರ್‌ಸ್ಟೋವ್ ಅವರ ಸ್ಫೋಟಕ ಬ್ಯಾಟಿಂಗ್ ನೋಡಬಹುದು.

ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ.

ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ/ ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ/ರೀಸ್ ಟೋಪ್ಲಿ, ಮ್ಯಾಟ್ ಪಾರ್ಕಿನ್ಸನ್.

error: Content is protected !!