Friday, 13th December 2024

ಇಂದು ಭಾರತ-ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ

ಹೈದರಾಬಾದ್‌: ಇಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ತಂಡವು ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವನ್ನು ಆಡಲಿದೆ.

ಬಾಂಗ್ಲಾದೇಶ ವಿಶ್ವದಾಖಲೆಯ ದ್ವಿಶತಕದ ಹೊರತಾಗಿಯೂ ತಂಡದಿಂದ ಹೊರಗುಳಿ ದಿದ್ದ ವಿಕೆಟ್ ಕೀಪರ್- ಬ್ಯಾಟರ್ ಇಶಾನ್ ಕಿಶನ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡದ ಆಡುವ 11ರ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕೆಎಲ್ ರಾಹುಲ್ ಅವರ ಅಲಭ್ಯತೆಯು ಇಶಾನ್ ಕಿಶನ್‌ಗೆ ಅವಕಾಶ ದೊರೆದಂತಾಗಿದೆ. ಕಿಶನ್ ವಿಕೆಟ್‌ ಕೀಪರ್ ಗ್ಲೌಸ್ ಹಾಕಿಕೊಳ್ಳ ಬಹುದು. ಆದರೆ, ಇನ್ನಿಂಗ್ಸ್ ತೆರೆಯುವುದು ಅಸಾಧ್ಯವಾಗಿದೆ.

ಶ್ರೀಲಂಕಾ ವಿರುದ್ಧ ಅರಂಭಿಕರಾಗಿ ಮಿಂಚಿದ್ದ ಶುಭ್ಮನ್ ಗಿಲ್ ಮತ್ತು ನಾಯಕ ರೋಹಿತ್ ಶರ್ಮಾ ಭಾರತದ ಇನ್ನಿಂಗ್ಸ್ ತೆರೆಯ ಲಿದ್ದಾರೆ. ಹೀಗಾಗಿ ಇಶಾನ್ ಕಿಶನ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಆರಂಭಿಕ ಸಂಯೋಜನೆಯಲ್ಲಿ ಯಾವುದೇ ಬದಲಾವಣೆಗಳನ್ನು ನಿರೀಕ್ಷಿಸಲಾಗುವುದಿಲ್ಲ. ಇಶಾನ್ ಕಿಶನ್ ಅವರು ಆಡಿದ 10 ಏಕದಿನ ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಮೂರು ಬಾರಿ ಬ್ಯಾಟ್ ಮಾಡಿದ್ದಾರೆ, ಆದ್ದರಿಂದ ಹೊಂದಾಣಿಕೆ ಸಮಸ್ಯೆಯಾಗುವುದಿಲ್ಲ.

ತಂಡದಲ್ಲಿ ಎರಡನೇ ವಿಕೆಟ್ ಕೀಪರ್ ಆಗಿರುವ ಕೆಎಸ್ ಭರತ್ ಅವರು ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ಅವಕಾಶ ಪಡೆದಿರುವುದರಿಂದ ಬೆಂಚ್ ಕಾಯಿಸುವ ಸಾಧ್ಯತೆಯಿದೆ. ವಿಶ್ವಕಪ್ ವರ್ಷದಲ್ಲಿ ಪ್ರತಿ ಏಕದಿನ ಪಂದ್ಯವು ಮಹತ್ವದ್ದಾಗಿದೆ.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಶ್ರೀಲಂಕಾ ವಿರುದ್ಧ ಪ್ರದರ್ಶಿಸಿದ ಫಾರ್ಮ್ ಅನ್ನು ನ್ಯೂಜಿಲೆಂಡ್ ವಿರುದ್ಧವೂ ಮುಂದುವರೆಸಬೇಕಿದೆ.

ಸಂಭಾವ್ಯ ಆಡುವ 11ರ ಬಳಗ

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಇಶಾನ್ ಕಿಶನ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ/ ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್, ಹೆನ್ರಿ ಶಿಪ್ಲೆರ್ಸನ್.

Read E-Paper click here