ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪಾಕಿಸ್ತಾನದ ನಂತರ ಈ ಸಾಧನೆಗೈದ ವಿಶ್ವದ 2ನೇ ತಂಡವಾಗಿ ಹೊರಹೊಮ್ಮಿದ ಭಾರತ

NZ vs IND 2nd T20I: ಪ್ರಸ್ತುತ 2026ನೇ ಕ್ಯಾಲೆಂಡರ್ ವರ್ಷದಲ್ಲಿ, ಭಾರತ ಇದುವರೆಗೆ 36 ಟಿ20 ಅಂತರರಾಷ್ಟ್ರೀಯ (T20I) ಪಂದ್ಯಗಳನ್ನು ಆಡಿದೆ ಮತ್ತು ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯವು ಅವರ 37ನೇ ಪಂದ್ಯವಾಗಿದೆ.

New Zealand vs India 2nd T20I

ಕ್ರೈಸ್ಟ್‌ಚರ್ಚ್‌, ಅ.24: ನ್ಯೂಜಿಲೆಂಡ್‌ ವಿರುದ್ಧ ಎರಡನೇ ಟಿ20ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಭಾರತ ತಂಡ ದಾಖಲೆಯೊಂದನ್ನು ನಿರ್ಮಿಸಿದೆ. 300 ಅಂ.ರಾ. ಟಿ20 ಪಂದ್ಯವನ್ನಾಡಿದ ವಿಶ್ವದ ಎರಡನೇ ತಂಡ ಎನಿಸಿಕೊಂಡಿತು. ದಾಖಲೆ ಪಾಕಿಸ್ತಾನದ ಹೆಸರಿನಲ್ಲಿದೆ.

ಅತಿ ಹೆಚ್ಚು ಟಿ20 ಪಂದ್ಯಗಳನ್ನು ಆಡಿದ ತಂಡಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಪಾಕಿಸ್ತಾನ ತಂಡ ಇದುವರೆಗೆ 304 ಟಿ20 ಐಗಳಲ್ಲಿ ಕಾಣಿಸಿಕೊಂಡಿದೆ.

ಪ್ರಸ್ತುತ 2026ನೇ ಕ್ಯಾಲೆಂಡರ್ ವರ್ಷದಲ್ಲಿ, ಭಾರತ ಇದುವರೆಗೆ 36 ಟಿ20 ಅಂತರರಾಷ್ಟ್ರೀಯ (T20I) ಪಂದ್ಯಗಳನ್ನು ಆಡಿದೆ ಮತ್ತು ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯವು ಅವರ 37ನೇ ಪಂದ್ಯವಾಗಿದೆ. ಈ ವರ್ಷ ಭಾರತವು ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 24 ಬಾರಿ ಗೆಲುವು ಸಾಧಿಸಿದೆ. ಅಲ್ಲದೆ, 2026ರಲ್ಲಿ ಈ ಎರಡೂ ತಂಡಗಳ ನಡುವೆ ನಡೆದ ಏಳು ಪಂದ್ಯಗಳ ಪೈಕಿ ಆರು ಬಾರಿ ಭಾರತವು ನ್ಯೂಜಿಲೆಂಡ್ ತಂಡವನ್ನು ಸೋಲಿಸಿದೆ.

ಟಿ20ಐಗಳಲ್ಲಿ ಅತಿ ಹೆಚ್ಚು ಪಂದ್ಯಗಳು

ಪಾಕಿಸ್ತಾನ- 304

ಭಾರತ- 300*

ನ್ಯೂಜಿಲೆಂಡ್- 269*

ವೆಸ್ಟ್ ಇಂಡೀಸ್- 260

ಶ್ರೀಲಂಕಾ- 243



ಪಂದ್ಯದಲ್ಲಿ, ಟಾಸ್ ಗೆದ್ದ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಬೌಲಿಂಗ್ ಮಾಡಲು ನಿರ್ಧರಿಸಿತು. ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆಗಳನ್ನು ಮಾಡಿಕೊಂಡಿತು. ಗಾಯಗೊಂಡ ಇಶಾನ್ ಕಿಶನ್ ಅವರ ಬದಲಿಗೆ ವೈಭವ್ ಸೂರ್ಯವಂಶಿ ತಂಡವನ್ನು ಸೇರಿದರೆ, ಮಯಾಂಕ್ ಯಾದವ್ ಅವರ ಸ್ಥಾನಕ್ಕೆ ಪ್ರಿನ್ಸ್ ಯಾದವ್ ಅವಕಾಶ ಪಡೆದರು.

ಟಿ20 ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ತಿಲಕ್‌ ವರ್ಮಾ

ಭಾರತದ ಪ್ಲೇಯಿಂಗ್ XI: ಸಂಜು ಸ್ಯಾಮ್ಸನ್(ವಿ.ಕೀ.), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಶ್ರೇಯಸ್ ಅಯ್ಯರ್(ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಶ್ದೀಪ್ ಸಿಂಗ್, ಪ್ರಿನ್ಸ್ ಯಾದವ್.

ನ್ಯೂಜಿಲೆಂಡ್ ಪ್ಲೇಯಿಂಗ್ XI: ಫಿನ್ ಅಲೆನ್, ಟಿಮ್ ಸೈಫರ್ಟ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಬೆವನ್ ಜಾಕೋಬ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಮ್ಯಾಟ್ ಹೆನ್ರಿ, ಜಾಕೋಬ್ ಡಫಿ, ಲಾಕಿ ಫರ್ಗುಸನ್.