ಆಯಂಟಿಗುವಾ: ಬಾಂಗ್ಲಾದೇಶ ವಿರುದ್ಧ ಶನಿವಾರ ನಡೆಯುವ ಸೂಪರ್-8 ಪಂದ್ಯಕ್ಕೆ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಸಾಧ್ಯತೆ ಇದೆ.
ಬಾಂಗ್ಲಾ ಎದುರಿನ ಪಂದ್ಯದಲ್ಲಿ ಶಿವಂ ದುಬೆ ಅವರನ್ನು ಬೆಂಚ್ ಕಾಯಿಸುವುದು ಬಹುತೇಖ ಖಚಿತ.
ಐಪಿಎಲ್ನಲ್ಲಿ ಬಿರುಸಿನ ಬ್ಯಾಟಿಂಗ್ ಮೂಲಕ ಅರ್ಧಶತಕ ಬಾರಿಸಿ ಗಮನಸೆಳೆದಿದ್ದ ದುಬೆ, ಟಿ20 ವಿಶ್ವಕಪ್ನಲ್ಲಿ ರನ್ ಗಳಿಸಲು ಪರದಾಟ ನಡೆಸುತ್ತಿದ್ದಾರೆ. ಹೀಗಾಗಿ ಇವರನ್ನು ಕೈ ಬಿಟ್ಟು ಹೊಡಿ-ಬಡಿ ಆಟಕ್ಕೆ ಹೆಸರುವಾಸಿ ಸಂಜು ಸ್ಯಾಮ್ಸನ್ ಅಥವಾ ಯಶಸ್ವಿ ಜೈಸ್ವಾಲ್ ಅವರನ್ನು ಆಡಿಸುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ ಯಶಸ್ವಿ ಜೈಸ್ವಾಲ್ಗೆ ಇಂದಿನ ಪಂದ್ಯದಲ್ಲಿ ಅವಕಾಶ ಸಿಗುವುದು ಖಚಿತ ಎನ್ನಲಾಗಿತ್ತಿದೆ. ನಾಯಕ ರೋಹಿತ್ ಮತ್ತು ಕೊಹ್ಲಿ ಜೋಡಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ವಿಫಲರಾಗಿದ್ದಾರೆ. ಹೀಗಾಗಿ ಕೊಹ್ಲಿ ಬದಲು ರೋಹಿತ್ ಮತ್ತು ಜೈಸ್ವಾಲ್ ಆರಂಭಿಕರಾಗಿ ಆಡುವ ಸಾಧ್ಯತೆ ಇದೆ. ಜೈಸ್ವಾಲ್ ವಿಂಡೀಸ್ ನೆಲದಲ್ಲಿ ಉತ್ತಮ ಬ್ಯಾಟಿಂಗ್ ದಾಖಲೆ ಕೂಡ ಹೊಂದಿದ್ದಾರೆ. ತಮ್ಮ ಚೊಚ್ಚಲ ಟೆಸ್ಟ್ನಲ್ಲಿಯೇ ಶತಕ ಬಾರಿಸಿ ಮಿಂಚಿದ್ದರು. ಹಕವು ಮಾಜಿ ಆಟಗಾರರು ಕೂಡ ಕೊಹ್ಲಿಯನ್ನು ಆರಂಭಿಕನಾಗಿ ಆಡಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಜೈಸ್ವಾಲ್ ಅವಕಾಶ ಪಡೆಯಬಹುದು.
ತಂಡ
ರೋಹಿತ್ ಶರ್ಮ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್.