ನ್ಯೂ ಯಾರ್ಕ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಹೈವ್ವೋಲ್ಟೇಜ್ ಪಂದ್ಯದಲ್ಲಿ ಭಾನುವಾರ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಯಾಗಲಿವೆ.
ಈ ಹೈವೋಲ್ಟೇಜ್ ಪಂದ್ಯಕ್ಕೆ ನ್ಯೂ ಯಾರ್ಕ್’ನ ನಾಸೌ ಕೌಂಟಿ ಇಂಟರ್ ನ್ಯಾಷನಲ್ ಸ್ಟೇಡಿಯಂ ಆತಿಥ್ಯ ವಹಿಸಲಿದೆ.
ಪಂದ್ಯ ಭಾನುವಾರ ರಾತ್ರಿ 8 ಗಂಟೆಗೆ ಆರಂಭವಾಗಲಿದ್ದು, ಇಡೀ ಕ್ರಿಕೆಟ್ ಜಗತ್ತಿನ ಕಣ್ಣು ಭಾರತ ಮತ್ತು ಪಾಕ್ ಪಂದ್ಯದ ಮೇಲೆ ನೆಟ್ಟಿದೆ.
ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಟ್ಟು 7 ಬಾರಿ ಮುಖಾಮುಖಿಯಾಗಿದ್ದು, ಆರು ಬಾರಿ ಭಾರತ ಗೆಲುವು ಸಾಧಿಸಿದ್ದರೆ, 2021ರ ಟೂರ್ನಿಯಲ್ಲಿ ಪಾಕಿಸ್ತಾನ ಗೆದ್ದಿತ್ತು. ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಪಾಕಿಸ್ತಾನ, ಕೆನಡಾ, ಅಮೆರಿಕ ಮತ್ತು ಐರ್ಲೆಂಡ್ ತಂಡಗಳ ಜೊತೆ ಗ್ರೂಪ್ ‘ಎ’ನಲ್ಲಿ ಸ್ಥಾನ ಪಡೆದಿದೆ. ಭಾರತ ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಸೋಲಿಸಿ ಶುಭಾರಂಭ ಮಾಡಿದ್ದರೆ, ಪಾಕಿಸ್ತಾನ ತಂಡ ತನ್ನ ಮೊದಲ ಪಂದ್ಯದಲ್ಲೇ ಆತಿಥೇಯ ಅಮೆರಿಕ ವಿರುದ್ಧ ಸೋಲು ಕಂಡಿದೆ.
ಕಳೆದ ಬಾರಿಯ ಟಿ20 ವಿಶ್ವಕಪ್ನಲ್ಲಿ ರಣರೋಚಕ ಹೋರಾಟ ನಡೆಸಿದ್ದ ಉಭಯ ತಂಡಗಳು ಸಹ ಭರ್ಜರಿ ಪೈಪೋಟಿ ನೀಡುವ ನಿರೀಕ್ಷೆಯಿದೆ. ಅದರಲ್ಲೂ ನಸ್ಸೌ ಕೌಂಟಿ ಪಿಚ್ ಬೌಲರ್ಗಳಿಗೆ ಸಹಕಾರಿ ಎಂಬುದು ಈಗಾಗಲೇ ಸಾಬೀತಾಗಿದೆ. ಅತ್ತ ಪಾಕಿಸ್ತಾನ್ ತಂಡದಲ್ಲಿ ಅತ್ಯುತ್ತಮ ಬೌಲರ್ಗಳಿದ್ದರೆ, ಇತ್ತ ಭಾರತ ತಂಡದಲ್ಲಿ ಬಲಿಷ್ಠ ದಾಂಡಿಗರ ದಂಡೇ ಇದೆ. ಹೀಗಾಗಿ ಇಂದಿನ ಪಂದ್ಯವು ಬ್ಯಾಟರ್ ಮತ್ತು ಬೌಲರ್ಗಳ ನಡುವಣ ಅಸಲಿ ಕದನವಾಗಿ ಮಾರ್ಪಡಲಿದೆ.
ಭಾರತದ ಸಂಭಾವ್ಯ ಪ್ಲೇಯಿಂಗ್ XI:
1. ರೋಹಿತ್ ಶರ್ಮಾ (ನಾಯಕ)
2. ವಿರಾಟ್ ಕೊಹ್ಲಿ
3. ರಿಷಭ್ ಪಂತ್ (ವಿಕೆಟ್ ಕೀಪರ್)
4. ಸೂರ್ಯಕುಮಾರ್ ಯಾದವ್
5. ಹಾರ್ದಿಕ್ ಪಾಂಡ್ಯ
6. ಶಿವಂ ದುಬೆ
7. ರವೀಂದ್ರ ಜಡೇಜ
8. ಅಕ್ಷರ್ ಪಟೇಲ್
9. ಯುಜ್ವೇಂದ್ರ ಚಹಲ್
10. ಜಸ್ಪ್ರೀತ್ ಬುಮ್ರಾ
11. ಮೊಹಮ್ಮದ್ ಸಿರಾಜ್
ಟಿ20 ವಿಶ್ವಕಪ್’ನಲ್ಲಿ ಭಾರತ Vs ಪಾಕಿಸ್ತಾನ ಮುಖಾಮುಖಿ
2007: ಭಾರತಕ್ಕೆ ಜಯ
2007: ಭಾರತಕ್ಕೆ ಜಯ (ಫೈನಲ್)
2012: ಭಾರತಕ್ಕೆ ಜಯ
2014: ಭಾರತಕ್ಕೆ ಜಯ
2016: ಭಾರತಕ್ಕೆ ಜಯ
2021: ಪಾಕಿಸ್ತಾನಕ್ಕೆ ಜಯ
2022: ಭಾರತಕ್ಕೆ ಜಯ