Thursday, 12th December 2024

ಆಸ್ಟ್ರೇಲಿಯಾ ವಿರುದ್ಧದ ಸರಣಿ: ಎರಡು ಪಂದ್ಯಗಳಿಗೆ ಟೀಮ್ ಇಂಡಿಯಾ ತಂಡ ಪ್ರಕಟ

ಮುಂಬೈ: ವಿಶ್ವಕಪ್ ಸನಿಹದಲ್ಲಿರುವಾಗ ಈ ಸರಣಿಯಲ್ಲಿ ಟೀಮ್ ಇಂಡಿಯಾದ ಹಲವು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು ಕೆಎಲ್ ರಾಹುಲ್‌ಗೆ ನಾಯಕತ್ವ ನೀಡಲಾಗಿದೆ.

ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯಗೆ ಈ ಸರಣಿಯಿಂದ ವಿಶ್ರಾಂತಿ ನೀಡಲಾ ಗಿದೆ. ಹಾಗಾಗಿ ವಿಶ್ವಕಪ್‌ಗೆ ಆಯ್ಕೆ ಮಾಡಿ ಮಾಡಿರುವ ತಂಡದಲ್ಲಿ ಸ್ಥಾನ ಪಡೆಯದ ಕೆಲ ಆಟಗಾರರಿಗೂ ಅವಕಾಶ ದೊರೆತಿದೆ. ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ವಾಶಿಂಗ್ಟನ್ ಸುಂದರ್, ಪ್ರಸಿಧ್ಧ್ ಕೃಷ್ಣ ಹಾಗೂ ಆರ್ ಅಶ್ವಿನ್ ಈ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ತಂಡ ಹೀಗಿದೆ: ಕೆಎಲ್ ರಾಹುಲ್ (ನಾಯಕ & ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಮ್ಯಾನೇಜ್‌ಮೆಂಟ್ ನಿರ್ಧರಿಸಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಸೆಪ್ಟೆಂಬರ್ 22ಕ್ಕೆ ಆರಂಭವಾಗಲಿದೆ. ಎರಡನೇ ಪಂದ್ಯ 24ಕ್ಕೆ ನಡೆದರೆ 27ಕ್ಕೆ ಮೂರನೇ ಪಂದ್ಯ ನಡೆಯಲಿದೆ.