Saturday, 7th September 2024

ನಾಳೆಯಿಂದ ಭಾರತ -ಆಸ್ಟ್ರೇಲಿಯಾ 5 ಟಿ20 ಪಂದ್ಯಗಳ ಸರಣಿ ಆರಂಭ

ವಿಶಾಖಪಟ್ಟಣಂ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಐದು ಟಿ20 ಪಂದ್ಯಗಳ ಸರಣಿ ಶುರುವಾಗುತ್ತಿದೆ. ನಾಳೆ ಮೊದಲ ಪಂದ್ಯ ವಿಶಾಖಪಟ್ಟಣಂನ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು ಅಭಿಮಾನಿಗಳು ಕಾತರರಾಗಿದ್ದಾರೆ.

2007ರ ವಿಶ್ವಕಪ್​ಗೆ ಮಾಡಿದ ತಯಾರಿಯ ರೀತಿಯಲ್ಲೇ ಹೊಸ ತಂಡ ಕಟ್ಟಲು ಬಿಸಿಸಿಐ ಚಿಂತಿಸಿದಂತಿದೆ. ಇನ್ನು 8 ತಿಂಗಳ ಕಾಲಾವಕಾಶವಿದ್ದು ತಂಡದಲ್ಲಿ ಪ್ರಯೋಗಗಳನ್ನು ಮಾಡಿ ಹೊಸ ಟೀಮ್​ ಕಟ್ಟುವ ನಿರೀಕ್ಷೆ ಗೋಚರಿಸಿದೆ.

ಆಸ್ಟ್ರೇಲಿಯಾ ಏಕದಿನ ವಿಶ್ವಕಪ್​ನಲ್ಲಿ ಆಡಿರುವ ಪೈಕಿ 6 ಮಂದಿಯನ್ನು ಉಳಿಸಿಕೊಂಡು, 6 ಆಟಗಾರರನ್ನು ಬದಲಿಸಿದೆ. ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದೆ.

ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್​ ಕೀಪರ್​), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಶದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್, ಶ್ರೇಯಸ್​ ಅಯ್ಯರ್ (ಕೊನೆ ಎರಡು ಪಂದ್ಯದ ಉಪ ನಾಯಕ).

ಆಸ್ಟ್ರೇಲಿಯಾ: ಮ್ಯಾಥ್ಯೂ ಶಾರ್ಟ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಜೋಶ್ ಇಂಗ್ಲಿಸ್ (ವಿಕೆಟ್​ ಕೀಪರ್), ಮಾರ್ಕಸ್ ಸ್ಟೊಯ್ನಿಸ್, ಟಿಮ್ ಡೇವಿಡ್, ಆಯರನ್ ಹಾರ್ಡಿ, ಸೀನ್ ಅಬಾಟ್, ನಾಥನ್ ಎಲ್ಲಿಸ್, ಆಯಡಮ್ ಝಂಪಾ, ಸ್ಪೆನ್ಸರ್ ಜಾನ್ಸನ್, ಮ್ಯಾಥ್ಯೂ ವೇಡ್, ಆಶ್ಟನ್ ಟರ್ನರ್, ಜೇಸನ್ ಬೆಹ್ರೆಂಡಾರ್ಫ್

Leave a Reply

Your email address will not be published. Required fields are marked *

error: Content is protected !!