ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಐಪಿಎಲ್‌ ಪಂದ್ಯಾವಳಿ ಆರಂಭಕ್ಕೂ ಮುನ್ನ ನೀವು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳು

ಲೀಗ್ ಹಂತದ ಪಂದ್ಯಗಳು ಮೇ 18ಕ್ಕೆ ಮುಕ್ತಾಯವಾಗಲಿವೆ. ಇನ್ನು ಪ್ಲೇ ಆಫ್ ಪಂದ್ಯಗಳಿಗೆ ಹೈದರಾಬಾದ್ ಹಾಗೂ ಕೋಲ್ಕತಾ ಆತಿಥ್ಯ ವಹಿಸಲಿದೆ. ಮೊದಲ ಕ್ವಾಲಿ ಫೈಯರ್ ಹಾಗೂ ಎಲಿಮಿನೇಟರ್ ಪಂದ್ಯಗಳು ಹೈದರಾಬಾದ್‌ನಲ್ಲಿ ನಡೆದರೆ, ಎರಡನೇ ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯಕ್ಕೆ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಲಿದೆ. ಮೇ 25ರಂದು ಫೈನಲ್ ಪಂದ್ಯ ನಡೆಯಲಿದೆ.

ಈ ಬಾರಿಯ ಐಪಿಎಲ್‌ ಕುರಿತು ನೀವು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳು

Profile Abhilash BC Mar 18, 2025 11:41 AM

ಕೋಲ್ಕತಾ: ವಿಶ್ವದ ಶ್ರೀಮಂತ ಟಿ20 ಟೂರ್ನಿ ಎಂಬ ಹೆಗ್ಗಳಿಕೆಯ ಇಂಡಿಯನ್​ ಪ್ರೀಮಿಯರ್​ ಲೀಗ್(IPL 2025)​ 18ನೇ ಆವೃತ್ತಿಗೆ ಮಾರ್ಚ್​ 22ರ ಶನಿವಾರದಂದು ಕೋಲ್ಕತಾದ ಈಡನ್​ ಗಾರ್ಡನ್ಸ್​ ಸ್ಟೇಡಿಯಂನಲ್ಲಿ(Eden Gardens) ಚಾಲನೆ ಸಿಗಲಿದ್ದು, ಹಾಲಿ ಚಾಂಪಿಯನ್​ ಕೋಲ್ಕತ ನೈಟ್​ರೈಡರ್ಸ್​ ಮತ್ತು ಆರ್​ಸಿಬಿ(KKR vs RCB) ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಾರಿಯ ಟೂರ್ನಿಯ ವಿಶೇಷತೆ ಏನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

13 ತಾಣಗಳಲ್ಲಿ ಪಂದ್ಯ

ಈ ಬಾರಿ ಐಪಿಎಲ್ ಟೂರ್ನಿ ದೇಶದ ವಿವಿಧ 13 ನಗರಗಳಲ್ಲಿ ಒಟ್ಟು 74 ಪಂದ್ಯಗಳು ನಡೆಯಲಿವೆ. 10 ಐಪಿಎಲ್ ತಂಡಗಳು ತಮ್ಮ ತವರಿನ ಮೈದಾನದಲ್ಲಿ ಕ್ರಿಕೆಟ್ ಆಡುವುದು ಮಾತ್ರವಲ್ಲದೇ ತಮ್ಮ ತವರಿನಾಚೆ ಅಂದರೆ ವಿಶಾಖಪಟ್ಟಣಂ, ಗುವಾಹಟಿ ಹಾಗೂ ಧರ್ಮಶಾಲಾ ಮೈದಾನದಲ್ಲಿಯೂ ಕೆಲವು ಐಪಿಎಲ್ ಪಂದ್ಯಗಳನ್ನು ಆಡಲಿವೆ. ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ತಮ್ಮ ಪಾಲಿನ ಕೆಲವು ಪಂದ್ಯಗಳನ್ನು ಈ ಮೂರು ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನು ಆಡಲಿವೆ.

ಲೀಗ್‌ ಪಂದ್ಯಗಳು

ಲೀಗ್ ಹಂತದ ಪಂದ್ಯಗಳು ಮೇ 18ಕ್ಕೆ ಮುಕ್ತಾಯವಾಗಲಿವೆ. ಇನ್ನು ಪ್ಲೇ ಆಫ್ ಪಂದ್ಯಗಳಿಗೆ ಹೈದರಾಬಾದ್ ಹಾಗೂ ಕೋಲ್ಕತಾ ಆತಿಥ್ಯ ವಹಿಸಲಿದೆ. ಮೊದಲ ಕ್ವಾಲಿ ಫೈಯರ್ ಹಾಗೂ ಎಲಿಮಿನೇಟರ್ ಪಂದ್ಯಗಳು ಹೈದರಾಬಾದ್‌ನಲ್ಲಿ ನಡೆದರೆ, ಎರಡನೇ ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯಕ್ಕೆ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಲಿದೆ. ಮೇ 25ರಂದು ಫೈನಲ್ ಪಂದ್ಯ ನಡೆಯಲಿದೆ.

ಕೂಟದ ಮಾದರಿ ಹೇಗೆ?

10 ತಂಡಗಳು ತಲಾ 5 ತಂಡಗಳಂತೆ 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಒಂದು ಗುಂಪಿನಲ್ಲಿರುವ ಪ್ರತಿ ತಂಡವೂ, ಮತ್ತೊಂದು ಗುಂಪಿನಲ್ಲಿರುವ ತಂಡಗಳ ಜತೆ ಎರಡು ಪಂದ್ಯಗಳನ್ನು ಆಡಲಿದೆ. ಇದರಲ್ಲಿ ಒಂದು ಪಂದ್ಯವನ್ನು ತನ್ನದೇ ನೆಲದಲ್ಲಿ, ಮತ್ತೊಂದು ಪಂದ್ಯವನ್ನು ಎದುರಾಳಿ ನೆಲದಲ್ಲಿ ಆಡಲಿದೆ. ಇದಲ್ಲದೆ ಪ್ರತಿ ತಂಡವೂ ತಮ್ಮ ಗುಂಪಿನಲ್ಲಿರುವ ಇತರ 4 ತಂಡಗಳ ಜತೆ ತಲಾ ಒಂದು ಪಂದ್ಯ ಆಡಲಿದೆ. ಅಂಕಪಟ್ಟಿಯಲ್ಲಿ ಮೊದಲ 4 ಸ್ಥಾನಗಳನ್ನು ಪಡೆಯುವ ತಂಡಗಳು ಪ್ಲೇ ಆಫ್‌ಗೆ ಸ್ಥಾನ ಪಡೆಯಲಿದೆ. ಮೊದಲ 2 ಸ್ಥಾನ ಪಡೆದ ತಂಡಗಳು ಮೊದಲ ಕ್ವಾಲಿಫೈಯರ್‌ ಆಡಲಿದ್ದು, ಗೆದ್ದ ತಂಡ ಫೈನಲ್‌ ಪ್ರವೇಶಿಸಲಿದೆ. 3 ಮತ್ತು 4ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ ಪಂದ್ಯ ಆಡಲಿದೆ. ಇದರಲ್ಲಿ ಗೆದ್ದ ತಂಡ ಮೊದಲ ಪ್ಲೇ ಆಫ್‌ನಲ್ಲಿ ಸೋತ ತಂಡಗೊಂದಿಗೆ 2ನೇ ಕ್ವಾಲಿಫೈರ್‌ ಆಡಲಿದೆ. ಇಲ್ಲಿ ಗೆದ್ದ ತಂಡ ಫೈನಲ್‌ಗೆ ಅರ್ಹತೆ ಪಡೆಯಲಿದೆ.

ಇದನ್ನೂ ಓದಿ IPL 2025: ಅತಿ ಹೆಚ್ಚು ಕ್ಯಾಚ್‌ ಪಡೆದ ಟಾಪ್‌-5 ಆಟಗಾರರು

ಈ ಬಾರಿ 12 ಡಬಲ್ ಹೆಡರ್ (ದಿನಕ್ಕೆ 2 ಪಂದ್ಯ) ಪಂದ್ಯಗಳು ಇರಲಿದೆ. ಹಗಲು ಪಂದ್ಯ 3.30ಕ್ಕೆ ಮತ್ತು ರಾತ್ರಿಯ ಪಂದ್ಯಗಳು 7.30ಕ್ಕೆ ಆರಂಭವಾಗಲಿವೆ.



ಭಾಗವಹಿಸುವ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಚೆನ್ನೈ ಸೂಪರ್ ಕಿಂಗ್ಸ್

ಮುಂಬೈ ಇಂಡಿಯನ್ಸ್

ಕೋಲ್ಕತ್ತ ನೈಟ್ ರೈಡರ್ಸ್

ಸನ್‌ರೈಸರ್ಸ್ ಹೈದರಾಬಾದ್

ರಾಜಸ್ಥಾನ ರಾಯಲ್ಸ್

ಡೆಲ್ಲಿ ಕ್ಯಾಪಿಟಲ್ಸ್

ಲಖನೌ ಸೂಪರ್‌ಜೈಂಟ್ಸ್

ಗುಜರಾತ್ ಟೈಟನ್ಸ್

ಪಂಜಾಬ್ ಕಿಂಗ್ಸ್