IPL 2025: ಐಪಿಎಲ್ ಮೇಲೆ ಮತ್ತೆ ಫಿಕ್ಸಿಂಗ್ ಕರಿನೆರಳು; ಎಚ್ಚರಿಕೆ ನೀಡಿದ ಬಿಸಿಸಿಐ
Match Fixing Threat To IPL 2025: ಹೈದರಾಬಾದ್‌ನ ಉದ್ಯಮಿಯೊಬ್ಬರು ಮ್ಯಾಚ್ ಫಿಕ್ಸಿಂಗ್‌ಗೆ ಯತ್ನಿಸುತ್ತಿದ್ದು ಪಂದ್ಯಾವಳಿಯಲ್ಲಿ ಭಾಗವಹಿಸುವವರೊಂದಿಗೆ ಆಟಗಾರರೊಂದಿಗೆ ಮತ್ತು ಫ್ರಾಂಚೈಸಿ ಮಾಲಕರೊಂದಿಗೆ ಸ್ನೇಹ ಬೆಳೆಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಈ ಉದ್ಯಮಿಗೆ ಬುಕ್ಕಿಗಳೊಂದಿಗೂ ಸಂಪರ್ಕವಿದೆ ಎಂದು ತಿಳಿದುಬಂದಿದೆ.


ಮುಂಬಯಿ: ಇಂಡಿಯನ್ ಪ್ರೀಮಿಯರ್ ಲೀಗ್(IPL 2025) ಕ್ರಿಕೆಟ್ ಟೂರ್ನಿಯ ಮೇಲೆ ಮತ್ತೆ ಮ್ಯಾಚ್ ಫಿಕ್ಸಿಂಗ್(Match Fixing Threat To IPL 2025) ಕರಿನೆರಳು ಆವರಿಸಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಬಿಸಿಸಿಐ(BCCI), ಎಲ್ಲ 10 ತಂಡಗಳ ಮಾಲಿಕರು, ಕೋಚ್, ಆಟಗಾರರು ಮತ್ತು ಸಿಬ್ಬಂದಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಫಿಕ್ಸಿಂಗ್ ಪ್ರಕರಣದ ಅಡಿಯಲ್ಲಿ 2 ವರ್ಷಗಳ ಕಾಲ ಐಪಿಎಲ್‌ನಿಂದ ಬ್ಯಾನ್ ಆಗಿತ್ತು. ಇದೀಗ ಐಪಿಎಲ್ 2025 ಕ್ಕೂ ಮ್ಯಾಚ್ ಫಿಕ್ಸಿಂಗ್ ಭೀತಿ ಎದುರಾಗಿದೆ.
ಹೈದರಾಬಾದ್‌ನ ಉದ್ಯಮಿಯೊಬ್ಬರು ಮ್ಯಾಚ್ ಫಿಕ್ಸಿಂಗ್‌ಗೆ ಯತ್ನಿಸುತ್ತಿದ್ದು ಪಂದ್ಯಾವಳಿಯಲ್ಲಿ ಭಾಗವಹಿಸುವವರೊಂದಿಗೆ ಆಟಗಾರರೊಂದಿಗೆ ಮತ್ತು ಫ್ರಾಂಚೈಸಿ ಮಾಲಕರೊಂದಿಗೆ ಸ್ನೇಹ ಬೆಳೆಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಈ ಉದ್ಯಮಿಗೆ ಬುಕ್ಕಿಗಳೊಂದಿಗೂ ಸಂಪರ್ಕವಿದೆ ಎಂದು ತಿಳಿದುಬಂದಿದೆ.
ಫಿಕ್ಸಿಂಗ್‌ಗೆ ಪ್ರಯತ್ನ ನಡೆಸುತ್ತಿರುವ ವಿಚಾರವನ್ನು ಭ್ರಷ್ಟಾಚಾರ ನಿಗ್ರಹ ಮತ್ತು ಭದ್ರತಾ ಘಟಕ(ಎಸಿಎಸ್‌ಯು) ಬಿಸಿಸಿಐಗೆ ಮಾಹಿತಿ ನೀಡಿತ್ತು. ಈ ಬೆನ್ನಲ್ಲೇ ಉದ್ಯಮಿ ಯಾರನ್ನಾದರು ಭೇಟಿಯಾದರೆ ತಕ್ಷಣವೇ ಮಾಹಿತಿ ನೀಡುವಂತೆ ಬಿಸಿಸಿಐ ಸೂಚಿಸಿದೆ.
ಇದನ್ನೂ ಓದಿ IPL 2025 Points Table: ಸೂಪರ್ ಗೆಲುವಿನೊಂದಿಗೆ ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್
2 ತಂಡಗಳ ಭೇಟಿ!
ಕ್ರಿಕ್‌ಬಝ್ ವರದಿ ಪ್ರಕಾರ ಬುಕ್ಕಿಗಳ ಜತೆ ಸಂಪರ್ಕದಲ್ಲಿರುವ ಈ ಉದ್ಯಮಿ, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡದ ಆಟಗಾರರನ್ನು ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ಉದ್ಯಮಿ ವಿರುದ್ಧ 2019ರಲ್ಲಿ ಇಂಡಿಯನ್ ಸೂಪರ್ ಲೀಗ್(ಐಎಸ್‌ಎಲ್) ಫುಟ್ಬಾಲ್ ಟೂರ್ನಿಯಲ್ಲಿ ಫಿಕ್ಸಿಂಗ್ ಮಾಡಲು ಯತ್ನಿಸಿದ್ದ ಬಗ್ಗೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದರೂ ಆರೋಪ ಸಾಬೀತಾಗಿರಲಿಲ್ಲ.
2013ರಲ್ಲಿ ಫಿಕ್ಸಿಂಗ್ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದ ಶ್ರೀಶಾಂತ್, ಅಜಿತ್ ಚಾಂಡಿಲಾ, ಅಂಕಿತ್ ಚೌಹಾಣ್ ಬಂಧನಕ್ಕೊಳಗಾಗಿ ಐಪಿಎಲ್‌ನಿಂದ ನಿಷೇಧಕ್ಕೊಳಗಾಗಿದ್ದರು. ಬಳಿಕ 2016 ಮತ್ತು 2017ರ ಆವೃತ್ತಿಯಿಂದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು 2 ವರ್ಷ ನಿಷೇಧ ಶಿಕ್ಷೆಗೆ ಗುರಿಯಾಗಿತ್ತು.