ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆದ ಧೋನಿ-ಜಡೇಜಾ ಜೋಡಿ

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ವಿಕೆಟ್‌ ಕೀಪರ್‌ ದಿನೇಶ್‌ ಕಾರ್ತಿಕ್‌ 182 ಬ್ಯಾಟ್ಸ್‌ಮನ್‌ಗಳನ್ನು ಔಟ್‌ ಮಾಡುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಆರ್‌ಸಿಬಿ ಸಿಗ್ಗಜ ಎಬಿ ಡಿ ವಿಲಿಯರ್ಸ್‌ 126 ಬ್ಯಾಟ್ಸ್‌ಮನ್‌ಗಳನ್ನು ಬಲಿ ಪಡೆದು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಲಕ್ನೋ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಮಹೇಂದ್ರ ಸಿಂಗ್‌ ಧೋನಿ ಮತ್ತು ರವೀಂದ್ರ ಜಡೇಜಾ ಐಪಿಎಲ್‌ ಟೂರ್ನಿಯಲ್ಲಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಸೋಮವಾರ ನಡೆದಿದ್ದ ಪಂದ್ಯದಲ್ಲಿ ಜಡೇಜಾ ಬೌಲಿಂಗ್‌ನಲ್ಲಿ ಧೋನಿ ಸ್ಟಂಪಿಂಗ್‌ ಮಾಡುವ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಒಂಬತ್ತು ಸ್ಟಂಪಿಂಗ್‌ಗಳನ್ನು ಸಾಧಿಸಿದ ಮೊದಲ ಬೌಲರ್-ವಿಕೆಟ್ ಕೀಪರ್ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಚೆನ್ನೈ ತಂಡದ ಬೌಲಿಂಗ್‌ ಇನ್ನಿಂಗ್ಸ್‌ನ 14 ನೇ ಓವರ್‌ನಲ್ಲಿ ಜಡೇಜಾ ಬೌಲಿಂಗ್‌ನಲ್ಲಿ ಆಯುಷ್ ಬಡೋನಿ ಅವರನ್ನು ಧೋನಿ ಸ್ಟಂಪಿಂಗ್ ಮಾಡುವ ಮೂಲಕ ಈ ಮೈಲಿಗಲ್ಲು ಸಾಧಿಸಿದರು. ಪ್ರಗ್ಯಾನ್ ಓಜಾ ಮತ್ತು ಆಡಮ್ ಗಿಲ್‌ಕ್ರಿಸ್ಟ್ ಜೋಡಿ (8) ದ್ವಿತೀಯ ಸ್ಥಾನದಲ್ಲಿದ್ದಾರೆ. ಅಶ್ವಿನ್‌ ಜತೆಗೂಡಿ ಧೋನಿ 8 ಬಾರಿ ಸ್ಟಂಪಿಂಗ್ ಮಾಡಿದ್ದಾರೆ.

ಧೋನಿ ಈ ಸ್ಟಂಪಿಂಗ್‌ ಮೂಲಕ ಮತ್ತೊಂದು ದಾಖಲೆಯನ್ನು ಕೂಡ ತಮ್ಮ ಹೆಸರಿಗೆ ಸೇರಿಸಿಕೊಂಡರು. ಐಪಿಎಲ್‌ನಲ್ಲಿ ವಿಕೆಟ್‌ ಹಿಂದೆ 200 ಬಲಿಗಳನ್ನು(154 ಕ್ಯಾಚ್‌ +ಸ್ಟಂಪಿಂಗ್‌) ಪಡೆದ ಮೊದಲ ಕೀಪರ್‌ ಎನಿಸಿಕೊಂಡರು.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ವಿಕೆಟ್‌ ಕೀಪರ್‌ ದಿನೇಶ್‌ ಕಾರ್ತಿಕ್‌ 182 ಬ್ಯಾಟ್ಸ್‌ಮನ್‌ಗಳನ್ನು ಔಟ್‌ ಮಾಡುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. ಆರ್‌ಸಿಬಿ ದಿಗ್ಗಜ ಎಬಿ ಡಿ ವಿಲಿಯರ್ಸ್‌ 126 ಬ್ಯಾಟ್ಸ್‌ಮನ್‌ಗಳನ್ನು ಬಲಿ ಪಡೆದು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಸೋಲಿನಿಂದ ಹೊರ ಬಂದ ಚೆನ್ನೈ

ಸತತ 5 ಕಂಗೆಟ್ಟಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಸೋಮವಾರ ನಡೆದಿದ್ದ ಐಪಿಎಲ್‌ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ 5 ವಿಕೆಟ್‌ ಅಂತರದ ಗೆಲುವು ಸಾಧಿಸಿ ಗೆಲುವಿನ ಹಳಿ ಏರುವಲ್ಲಿ ಯಶಸ್ವಿಯಾಯಿತು.

ಇದನ್ನೂ ಓದಿ IPL 2025: ಜಂಪಾ ಬದಲಿಗೆ ಸನ್​ರೈಸರ್ಸ್​ ತಂಡ ಸೇರಿದ ಕನ್ನಡಿಗ ಆರ್​. ಸ್ಮರಣ್

ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಲಕ್ನೋ ತಂಡ ರಿಷಭ್‌ ಪಂತ್‌ ಅವರ ಅರ್ಧಶತಕದ ಬಲದಿಂದ ತನ್ನ ಪಾಲಿನ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 166 ರನ್‌ಗಳನ್ನು ಕಲೆ ಹಾಕಿತು. ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್‌ ಕಿಂಗ್ಸ್‌, ರಚಿನ್‌ ರವೀಂದ್ರ (37), ಶಿವಂ ದುಬೆ (43*) ಹಾಗೂ ಎಂಎಸ್‌ ಧೋನಿ (26*) ಅವರ ಬ್ಯಾಟಿಂಗ್‌ ಬಲದಿಂದ 19.3 ಓವರ್‌ಗಳಿಗೆ 5 ವಿಕೆಟ್‌ಗಳ ನಷ್ಟಕ್ಕೆ 168 ರನ್‌ಗಳನ್ನು ಗಳಿಸಿ 5 ವಿಕೆಟ್‌ಗಳ ಗೆಲುವು ಪಡೆಯಿತು.