IPL 2025 Points Table: ಕೊನೆಯ ಸ್ಥಾನದಿಂದ ಭಾರೀ ಜಿಗಿತ ಕಂಡ ಕೆಕೆಆರ್
IPL 2025: ಶುಕ್ರವಾರ ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜಯಂಟ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ತಲಾ ಮೂರು ಪಂದ್ಯಗಳನ್ನು ಆಡಿ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಇದೀಗ ಎರಡನೇ ಗೆಲುವಿನ ನಿರೀಕ್ಷೆಯೊಂದಿಗೆ ಕಣಕ್ಕಿಳಿಯಲಿವೆ.


ಕೋಲ್ಕತಾ: ಸನ್‌ರೈಸರ್ಸ್ ಹೈದರಾಬಾದ್(Sunrisers Hyderabad) ವಿರುದ್ಧ 80 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದ ಹಾಲಿ ಚಾಂಪಿಯನ್ ಕೆಕೆಆರ್(KKR vs SRH) ತಂಡ ಅಂಕಪಟ್ಟಿಯಲ್ಲಿ(IPL 2025 Points Table) ಭಾರೀ ಪ್ರಗತಿ ಸಾಧಿಸಿದೆ. ಕೊನೆಯ ಸ್ಥಾನದಿಂದ 5ನೇ ಸ್ಥಾನಕ್ಕೆ ಬಂದು ನಿಂತಿದೆ. ಸೋಲು ಕಂಡ ಹೈದರಾಬಾದ್ ಕೊನೆಯ ಸ್ಥಾನಕ್ಕೆ ಕುಸಿದಿದೆ. ಪಂಜಾಬ್ ಕಿಂಗ್ಸ್ ಅಗ್ರಸ್ಥಾನ, ಡೆಲ್ಲಿ ಕ್ಯಾಪಿಟಲ್ಸ್ ದ್ವಿತೀಯ ಸ್ಥಾನದಲ್ಲೇ ಮುಂದುವರಿದಿದೆ. ಸದ್ಯ 5 ತಂಡಗಳು ನಾಲ್ಕು ಅಂಕ ಹೊಂದಿದೆ.
ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್‌ನಲ್ಲಿ ಯಾವುದೇ ಬದಲಾವಣೆ ಸಂಭವಿಸಿಲ್ಲ. ನಿಕೋಲಸ್ ಪೂರನ್ ಬಳಿ ಆರೆಂಜ್ ಕ್ಯಾಪ್, ನೂರ್ ಅಹ್ಮದ್ ಬಳಿ ಪರ್ಪಲ್ ಕ್ಯಾಪ್ ಇದೆ.
ನೂತನ ಅಂಕಪಟ್ಟಿ
IPL 2025 POINTS TABLE. 📈
— Mufaddal Vohra (@mufaddal_vohra) April 3, 2025
- SRH slips to No.10 now. 🤯 pic.twitter.com/liu3UGMXtk
ಇಂದು ಲಕ್ನೋ-ಮುಂಬೈ ಕಾದಾಟ
ಶುಕ್ರವಾರ ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜಯಂಟ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ತಲಾ ಮೂರು ಪಂದ್ಯಗಳನ್ನು ಆಡಿ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಇದೀಗ ಎರಡನೇ ಗೆಲುವಿನ ನಿರೀಕ್ಷೆಯೊಂದಿಗೆ ಕಣಕ್ಕಿಳಿಯಲಿವೆ.
ಟೂರ್ನಿಯಲ್ಲಿ ತನ್ನ ಆರಂಭಿಕ ಎರಡು ಪಂದ್ಯಗಳನ್ನು ಸೋತಿದ್ದ ಐದು ಬಾರಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್, ಕೊನೆಯ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಗೆಲುವು ಪಡೆದಿತ್ತು. ಇನ್ನು ರಿಷಭ್ ಪಂತ್ ನಾಯಕತ್ವದ ಲಖನೌ ಸೂಪರ್ ಜಯಂಟ್ಸ್ ತಂಡ ತವರಿನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲು ಅನುಭವಿಸಿತ್ತು. ಇದೀಗ ತವರು ಅಂಗಣದಲ್ಲಿ ಮುಂಬೈ ಎದುರು ಶಕ್ತಿಯುತವಾಗಿ ಕಮ್‌ಬ್ಯಾಕ್ ಮಾಡಲು ಎಲ್‌ಎಸ್‌ಜಿ ಯೋಜನೆಯನ್ನು ಹಾಕಿಕೊಂಡಿದೆ.
ಇದನ್ನೂ ಓದಿ IPL 2025: ಮೊಹಮ್ಮದ್ ಸಿರಾಜ್‌ರನ್ನು ಕೈ ಬಿಟ್ಟು ಆರ್‌ಸಿಬಿ ತಪ್ಪು ಮಾಡಿದೆ ಎಂದ ವೀರೇಂದ್ರ ಸೆಹ್ವಾಗ್!
ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ ಲಕ್ನೋ ಸೂಪರ್ ಜಯಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಆರು ಬಾರಿ ಕಾದಾಟ ನಡೆಸಿವೆ. ಇದರಲ್ಲಿ ಎಲ್‌ಎಸ್‌ಜಿ ಐದು ಬಾರಿ ಗೆಲುವು ಪಡೆದಿದೆ. ಇನ್ನು ಮುಂಬೈ ಕೇವಲ ಒಂದು ಬಾರಿ ಗೆದ್ದಿದೆ. 2024ರ ಐಪಿಎಲ್ ಟೂರ್ನಿಯಲ್ಲಿ ಕೊನೆಯ ಬಾರಿ ಮುಖಾಮುಖಿಯಲ್ಲಿ ಮುಂಬೈ ಎದುರು ಲಖನೌ ತಂಡ 18 ರನ್‌ಗಳಿಂದ ಗೆಲುವು ಪಡೆದಿತ್ತು.