IPL 2025 Points Table: ಡೆಲ್ಲಿ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಗುಜರಾತ್
ಇಂದು ನಡೆಯುವ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಗೆದ್ದರೆ ಮತ್ತೆ ಅಗ್ರಸ್ಥಾನ ವಶಪಡಿಸಿಕೊಳ್ಳಲಿದೆ. ಗುಜರಾತ್ ವಿರುದ್ಧ ಸೋಲು ಕಂಡ ರಾಜಸ್ಥಾನ್ ರಾಯಲ್ಸ್ ತಂಡ ಏಳನೇ ಸ್ಥಾನದಲ್ಲಿಯೇ ಉಳಿದಿದೆ. ಆಡಿದ ಐದು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದಿರುವ ಹೈದರಾಬಾದ್ ತಂಡ ಕೊನೆಯ ಸ್ಥಾನದಲ್ಲಿದೆ.


ಬೆಂಗಳೂರು: ಬುಧವಾರ ನಡೆದ ಐಪಿಎಲ್(IPL 2025) ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್(GT vs RR) ವಿರುದ್ಧ 58 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ ಗುಜರಾತ್ ಟೈಟಾನ್ಸ್ ತಂಡ ಅಂಕಪಟ್ಟಿಯಲ್ಲಿ(IPL 2025 Points Table) ಅಗ್ರಸ್ಥಾನಕ್ಕೇರಿದೆ. ಅಗ್ರಸ್ಥಾನಿಯಾಗಿದ್ದ ಡೆಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದಿದೆ. ಇಂದು ನಡೆಯುವ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಗೆದ್ದರೆ ಮತ್ತೆ ಅಗ್ರಸ್ಥಾನ ವಶಪಡಿಸಿಕೊಳ್ಳಲಿದೆ. ಗುಜರಾತ್ ವಿರುದ್ಧ ಸೋಲು ಕಂಡ ರಾಜಸ್ಥಾನ್ ರಾಯಲ್ಸ್ ತಂಡ ಏಳನೇ ಸ್ಥಾನದಲ್ಲಿಯೇ ಉಳಿದಿದೆ.
ಆರ್‌ಸಿಬಿ ಸದ್ಯ ಮೂರನೇ ಸ್ಥಾನದಲ್ಲಿದ್ದು ಇಂದು ನಡೆಯುವ ತವರಿನ ಪಂದ್ಯದಲ್ಲಿ ಗೆದ್ದರೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರುವ ಅವಕಾಶ ಸಿಗಲಿದೆ. ಆಡಿದ ಐದು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದಿರುವ ಹೈದರಾಬಾದ್ ತಂಡ ಕೊನೆಯ ಸ್ಥಾನದಲ್ಲಿದೆ.
ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ವಿಭಾಗದಲ್ಲಿ ಯಾವುದೇ ಬದಲಾವಣೆ ಸಂಭವಿಸಿಲ್ಲ. ನಿಕೋಲಸ್ ಪೂರನ್ ಆರೆಂಜ್ ಕ್ಯಾಪ್ ಪಡೆದರೆ, ನೂರ್ ಅಹ್ಮದ್ ಪರ್ಪಲ್ ಕ್ಯಾಪ್ ಹೊಂದಿದ್ದಾರೆ.
IPL 2025 POINTS TABLE. 📈
— Mufaddal Vohra (@mufaddal_vohra) April 9, 2025
- Gill's Gujarat Titans are Table Toppers. pic.twitter.com/6I5F03q9KN
ಬುಧವಾರ ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ ತಂಡ, ಸಾಯಿ ಸುದರ್ಶನ್ ( 82) ಅವರ ಸ್ಪೋಟಕ ಬ್ಯಾಟಿಂಗ್ ಬಲದಿಂದ ತನ್ನ ಪಾಲಿನ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 217 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಎದುರಾಳಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 218 ರನ್‌ಗಳ ಸವಾಲಿನ ಗುರಿಯನ್ನು ನೀಡಿತು. ಬಳಿಕ ಗುರಿ ಹಿಂಬಾಲಿಸಿದ್ದ ರಾಜಸ್ಥಾನ್ ರಾಯಲ್ಸ್ ತಂಡ, ಪ್ರಸಿದ್ಧ್ ಕೃಷ್ಣ (24ಕ್ಕೆ 3) ಸೇರಿದಂತೆ ಜಿಟಿ ಬೌಲರ್‌ಗಳ ದಾಳಿಗೆ ನಲುಗಿ 19.2 ಓವರ್‌ಗಳಿಗೆ 159 ರನ್‌ಗಳಿಗೆ ಆಲ್‌ಔಟ್ ಆಯಿತು. ಆ ಮೂಲಕ 58 ರನ್‌ಗಳಿಂದ ಹೀನಾಯ ಸೋಲು ಅನುಭವಿಸಿತು.