IPL 2025 Points Table: ಕೆಕೆಆರ್ ಗೆಲುವಿನಿಂದ ಅಂಕಪಟ್ಟಿಯಲ್ಲಿ ಕುಸಿತ ಕಂಡ ಆರ್‌ಸಿಬಿ
IPL 2025: ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕ್ರಮವಾಗಿ 5 ಮತ್ತು 6ನೇ ಸ್ಥಾನದಲ್ಲಿದೆ. ಇಂದು ಡಬಲ್ ಹೆಡರ್ ಪಂದ್ಯ ನಡೆಯಲಿದ್ದು, ಹಗಲು ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಅಗ್ರಸ್ಥಾನಿ ಗುಜರಾತ್ ಸೆಣಸಾಟ ನಡೆಸಿದರೆ, ರಾತ್ರಿಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಪಂಜಾಬ್ ತಂಡದ ಸವಾಲು ಎದುರಿಸಲಿದೆ.


ಚೆನ್ನೈ: 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ತಂಡ ಶುಕ್ರವಾರ ನಡೆದ ಐಪಿಎಲ್(IPL 2025) ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್(KKR vs CSK) ವಿರುದ್ಧ 8 ವಿಕೆಟ್ ಅಂತರದ ಹೀನಾಯ ಸೋಲು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಕುಸಿತ ಕಂಡಿದೆ. ಆಡಿದ 6 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದಿರುವ ಚೆನ್ನೈ 9ನೇ ಸ್ಥಾನದಲ್ಲಿದೆ. ಗೆಲುವು ಸಾಧಿಸಿದ ಕೆಕೆಆರ್ ಭಾರೀ ಜಿಗಿತದೊಂದಿಗೆ ಮೂರನೇ ಸ್ಥಾನಕ್ಕೇರಿದೆ. ಆರ್‌ಸಿಬಿ ಒಂದು ಸ್ಥಾನದ ನಷ್ಟದೊಂದಿಗೆ ನಾಲ್ಕನೇ ಸ್ಥಾನ ಪಡೆದಿದೆ. ಅಗ್ರ ಎರಡು ಸ್ಥಾನಗಳಲ್ಲಿ ಯಾವುದೇ ಬದಲಾವಣೆ ಸಂಭವಿಸಿಲ್ಲ. ಗುಜರಾತ್ ಮೊದಲ ಸ್ಥಾನಿಯಾಗಿದ್ದರೆ, ಡೆಲ್ಲಿ ಎರಡನೇ ಸ್ಥಾನದಲ್ಲಿದೆ.
ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕ್ರಮವಾಗಿ 5 ಮತ್ತು 6ನೇ ಸ್ಥಾನದಲ್ಲಿದೆ. ಇಂದು ಡಬಲ್ ಹೆಡರ್ ಪಂದ್ಯ ನಡೆಯಲಿದ್ದು, ಹಗಲು ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಅಗ್ರಸ್ಥಾನಿ ಗುಜರಾತ್ ಸೆಣಸಾಟ ನಡೆಸಿದರೆ, ರಾತ್ರಿಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಪಂಜಾಬ್ ತಂಡದ ಸವಾಲು ಎದುರಿಸಲಿದೆ.
ಇದನ್ನೂ ಓದಿ IPL 2025: ಅಶ್ವಿನ್ ದಾಖಲೆ ಮುರಿದ ಭುವನೇಶ್ವರ್ ಕುಮಾರ್
ಪರ್ಪಲ್ ಕ್ಯಾಪ್ ಹೋಲ್ಡರ್ ನೂರ್ ಅಹ್ಮದ್ ತಮ್ಮ ವಿಕೆಟ್‌ಗಳ ಸಂಖ್ಯೆಯನ್ನು ಹನ್ನೆರಡಕ್ಕೆ ಏರಿಸಿದ್ದಾರೆ. ಆರೆಂಜ್ ಕ್ಯಾಪ್ ಲಕ್ನೋ ತಂಡದ ಎಡಗೈ ಬ್ಯಾಟರ್ ನಿಕೋಲಸ್ ಪೂರನ್ ಬಳಿ ಇದೆ. ಅವರು ಸದ್ಯ 5 ಪಂದ್ಯಗಳಿಂದ 288 ರನ್ ಕಲೆಹಾಕಿದ್ದಾರೆ.
ಅಂಕಪಟ್ಟಿ ಹೀಗಿದೆ
IPL 2025 POINTS TABLE. 📈
— Mufaddal Vohra (@mufaddal_vohra) April 11, 2025
- KKR moves to No.3. 👏 pic.twitter.com/4IiP57xzK9
ಶುಕ್ರವಾರ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿದ್ದ ಐಪಿಎಲ್‌ನ 25ನೇ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಚೆನ್ನೈ ಬ್ಯಾಟಿಂಗ್ ಮರೆತವರಂತೆ ಆಡುವ ಮೂಲಕ 9 ವಿಕೆಟ್‌ಗೆ ಕೇವಲ 103 ರನ್ ಗಳಿಸಲಷ್ಟೇ ಶಕ್ತವಾಯಿತು. ಜವಾಬಿತ್ತ ಕೆಕೆಆರ್ ಈ ಸಣ್ಣ ಮೊತ್ತವನ್ನು 10.1 ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್ ನಷ್ಟಕ್ಕೆ 107 ರನ್ ಬಾರಿಸಿ ಅಧಿಕಾರಯುತ ಗೆಲುವು ಸಾಧಿಸಿತು. ಕೆಕೆಆರ್ ಪರ ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಆಲ್‌ರೌಂಡರ್ ಪ್ರದರ್ಶನ ತೋರಿದ ವಿಂಡೀಸ್‌ನ ಸುನೀಲ್ ನರೈನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.