IPL 2025 Points Table: ಸತತ 2 ಗೆಲುವು; ದ್ವಿತೀಯ ಸ್ಥಾನಕ್ಕೇರಿದ ಪಂಜಾಬ್
IPL 2025: ಪಂಜಾಬ್ ವಿರುದ್ಧ ಸೋತ ಲಕ್ನೋ ಸೂಪರ್ ಜೈಂಟ್ಸ್ ತಂಡ 6ನೇ ಸ್ಥಾನಕ್ಕೆ ಕುಸಿಯುತು. ಈ ಹಿಂದೆ ದ್ವಿತೀಯ ಸ್ಥಾನಿಯಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮೂರನೇ, ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ಕ್ರಮವಾಗಿ 4 ಮತ್ತು 5ನೇ ಸ್ಥಾನ ಪಡೆದಿದೆ. ಹಾಲಿ ಚಾಂಪಿಯನ್ ಕೆಕೆಆರ್ ಕೊನೆಯ ಸ್ಥಾನದಲ್ಲಿದೆ.


ಬೆಂಗಳೂರು: ಮಂಗಳವಾರ ನಡೆದಿದ್ದ ಐಪಿಎಲ್‌ನ(IPL 2025) 13ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್(LSG vs PBKS) ವಿರುದ್ಧ 8 ವಿಕೆಟ್ ಅಂತರದ ಗೆಲುವು ಸಾಧಿಸಿ ತನ್ನ ಅಜೇಯ ಗೆಲುವಿನ ಓಟವನ್ನು ಮುಂದುವರಿಸಿತ್ತು. ಪಂಜಾಬ್ ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ(IPL 2025 Points Table) ಪ್ರಗತಿ ಸಾಧಿಸಿ ಇದೀಗ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಆರ್‌ಸಿಬಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಇಂದು ನಡೆಯುವ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ ಅಗ್ರಸ್ಥಾನ ಇನ್ನಷ್ಟು ಗಟ್ಟಿಗೊಳ್ಳಲಿದೆ. ಸೋತರೆ ದ್ವಿತೀಯ ಸ್ಥಾನಕ್ಕೆ ಕುಸಿಯಲಿದೆ. ಆಗ ಪಂಜಾಬ್ ಅಗ್ರಸ್ಥಾನಕ್ಕೇರಲಿದೆ.
ಪಂಜಾಬ್ ವಿರುದ್ಧ ಸೋತ ಲಕ್ನೋ ಸೂಪರ್ ಜೈಂಟ್ಸ್ ತಂಡ 6ನೇ ಸ್ಥಾನಕ್ಕೆ ಕುಸಿಯುತು. ಈ ಹಿಂದೆ ದ್ವಿತೀಯ ಸ್ಥಾನಿಯಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮೂರನೇ, ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ಕ್ರಮವಾಗಿ 4 ಮತ್ತು 5ನೇ ಸ್ಥಾನ ಪಡೆದಿದೆ.
ಇದನ್ನೂ ಓದಿ IPL 2025: 27 ಕೋಟಿ ರೂ ಕೊಟ್ಟಿದ್ದೇಕೆ? 2 ರನ್‌ಗೆ ವಿಕೆಟ್ ಒಪ್ಪಿಸಿದ ರಿಷಭ್ ಪಂತ್ ವಿರುದ್ದ ಫ್ಯಾನ್ಸ್ ಗರಂ!
ನಿಕೋಲಸ್ ಪೂರನ್(189 ರನ್) ಆರೆಂಜ್ ಕ್ಯಾಪ್ ತಮ್ಮ ಬಳಿಯೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಪಂಜಾಬ್ ವಿರುದ್ಧ 44 ರನ್ ಬಾರಿಸಿದ್ದರು. ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ 149 ರನ್ ಬಾರಿಸಿ ದ್ವಿತೀಯ ಸ್ಥಾನದಲ್ಲಿದ್ದಾರೆ.
ಪರ್ಪಲ್ ಕ್ಯಾಪ್ ವಿಭಾಗದಲ್ಲಿ ಯಾವುದೇ ಬದಲಾವಣೆ ಸಂಭವಿಸಿಲ್ಲ. ಚೆನ್ನೈ ತಂಡದ ನೂರ್ ಅಹ್ಮದ್ ಬಳಿಯೇ ಇದೆ. ಅವರು 9 ವಿಕೆಟ್ ಕಿತ್ತಿದ್ದಾರೆ. ಡೆಲ್ಲಿ ತಂಡದ ಮಿಚೆಲ್ ಸ್ಟಾರ್ಕ್ 8 ವಿಕೆಟ್ ಕಿತ್ತು ದ್ವಿತೀಯ ಸ್ಥಾನದಲ್ಲಿದ್ದಾರೆ.
IPL 2025 POINTS TABLE. 📈
— Mufaddal Vohra (@mufaddal_vohra) April 1, 2025
- PBKS in the Top 2. 🔥 pic.twitter.com/qA5pjrpFLb