IPL 2025 Points Table: ಡಬಲ್ ಹೆಡರ್ ಪಂದ್ಯದ ಬಳಿಕ ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ
ಪರ್ಪಲ್ ಕ್ಯಾಪ್ ವಿಭಾಗದಲ್ಲಿ ಬದಲಾವಣೆ ಸಂಭವಿಸಿದೆ. ನೂರ್ ಅಹ್ಮದ್ ಅವರನ್ನು ಹಿಂದಿಕ್ಕಿ ಗುಜರಾತ್ ತಂಡದ, ಕನ್ನಡಿಗ ಪ್ರಸಿದ್ಧ್ ಕೃಷ್ಣ ಒಟ್ಟು 14 ವಿಕೆಟ್ ಪಡೆಯುವ ಮೂಲಕ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಶನಿವಾರ ನಡೆದಿದ್ದ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕೃಷ್ಣ 4 ವಿಕೆಟ್ ಕಿತ್ತು ಮಿಂಚಿದ್ದರು.


ಜೈಪುರ: ಶನಿವಾರ ನಡೆದಿದ್ದ ಐಪಿಎಲ್(IPL 2025)ನ ಡಬಲ್ ಹೆಡರ್ ಪಂದ್ಯದ ಬಳಿಕ ಅಂಕಪಟ್ಟಿಯಲ್ಲಿ(IPL 2025 Points Table) ಭಾರೀ ಬದಲಾವಣೆಯಾಗಿದೆ. ದಿನದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್(Delhi Capitals) ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್(Gujarat Titans) ತಂಡ ಅಗ್ರಸ್ಥಾನ ಪಡೆದರೆ, ಸೋಲು ಕಂಡ ಡೆಲ್ಲಿ ಕ್ಯಾಪಿಟಲ್ಸ್ ದ್ವಿತೀಯ ಸ್ಥಾನಕ್ಕೆ ಕುಸಿಯಿತು. ರಾತ್ರಿಯ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ 2 ರನ್‌ಗಳ ರೋಚಕ ಗೆಲುವು ಸಾಧಿಸಿದ ಲಕ್ನೋ ಸೂಪರ್‌ಜೈಂಟ್ಸ್ ತಂಡ ನಾಲ್ಕನೇ ಸ್ಥಾನಕ್ಕೇರಿತು. ಸೋತ ರಾಜಸ್ಥಾನ್ ಈ ಹಿಂದಿನಂತೆ 8ನೇ ಸ್ಥಾನದಲ್ಲೇ ಮುಂದುವರಿಯಿತು.
ಗುಜರಾತ್ ಮತ್ತು ಲಕ್ನೋ ಗೆಲುವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5ನೇ ಸ್ಥಾನಕ್ಕೆ ಕುಸಿದಿದೆ. ಪಂಜಾಬ್ ಕಿಂಗ್ಸ್ ಮೂರನೇ ಸ್ಥಾನದಲ್ಲಿದೆ. ಕೆಕೆಆರ್ ಮತ್ತು ಮುಂಬೈ ತಂಡ ಕ್ರಮವಾಗಿ 6 ಮತ್ತು 7ನೇ ಸ್ಥಾನದಲ್ಲಿದೆ. ಇಂದು(ಭಾನುವಾರ ಕೂಡ 2 ಪಂದ್ಯಗಳು ನಡೆಯಲಿದೆ. ದಿನದ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಪಂಜಾಬ್ ಸೆಣಸಾಟ ನಡೆಸಿದರೆ, ರಾತ್ರಿ ಪಂದ್ಯದಲ್ಲಿ ಚೆನ್ನೈ ಮತ್ತು ಮುಂಬೈ ಕಾದಾಟ ನಡೆಸಲಿದೆ.
ಪರ್ಪಲ್ ಕ್ಯಾಪ್ ವಿಭಾಗದಲ್ಲಿ ಬದಲಾವಣೆ ಸಂಭವಿಸಿದೆ. ನೂರ್ ಅಹ್ಮದ್ ಅವರನ್ನು ಹಿಂದಿಕ್ಕಿ ಗುಜರಾತ್ ತಂಡದ, ಕನ್ನಡಿಗ ಪ್ರಸಿದ್ಧ್ ಕೃಷ್ಣ ಒಟ್ಟು 14 ವಿಕೆಟ್ ಪಡೆಯುವ ಮೂಲಕ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ. ಶನಿವಾರ ನಡೆದಿದ್ದ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕೃಷ್ಣ 4 ವಿಕೆಟ್ ಕಿತ್ತು ಮಿಂಚಿದ್ದರು.
ಅಂಕಪಟ್ಟಿ ಹೀಗಿದೆ
ಗೆಲ್ಲುವ ಪಂದ್ಯ ಸೋತ ರಾಜಸ್ಥಾನ್
ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಶನಿವಾರ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಲಕ್ನೋ ತಂಡ, ಐಡೆನ್ ಮಾರ್ಕ್ರಮ್ ಹಾಗೂ ಆಯುಷ್ ಬದೋನಿ ಅರ್ಧಶತಕಗಳ ಬಲದಿಂದ ತನ್ನ ಪಾಲಿನ 20 ಓವರ್‌ಗಳಿಗೆ 5 ವಿಕೆಟ್ ನಷ್ಟಕ್ಕೆ 180 ರನ್‌ಗಳನ್ನು ಕಲೆ ಹಾಕಿತು. ಗುರಿ ಬೆನ್ನಟ್ಟಿದ ರಾಜಸ್ಥಾನ್ 17ನೇ ಓವರ್‌ವರೆಗೂ ಪಂದ್ಯವನ್ನು ಸುಲಭವಾಗಿ ಗೆಲ್ಲಬಹುದಾದ ಅವಕಾಶವನ್ನು ಹೊಂದಿತ್ತು. ಆದರೆ 18 ಮತ್ತು 20ನೇ ಓವರ್‌ನಲ್ಲಿ ಆವೇಶ್ ಖಾನ್ ಪರಿಣಾಮಕಾರಿ ಬೌಲಿಂಗ್ ನಡೆಸಿ ರಾಜಸ್ಥಾನ್ ತಂಡವನ್ನು ಕಟ್ಟಿ ಹಾಕಿದರು. ಕೇವಲ 2 ರನ್ ಅಂತರದಿಂದ ರಾಜಸ್ಥಾನ್ ಸೋಲು ಕಂಡಿತು.
ಇದನ್ನೂ ಓದಿ IPL 2025: ಗೆಲ್ಲುವ ಪಂದ್ಯವನ್ನು ಲಖನೌ ಸೂಪರ್ ಜಯಂಟ್ಸ್‌ಗೆ ಬಿಟ್ಟು ಕೊಟ್ಟ ರಾಜಸ್ಥಾನ್ ರಾಯಲ್ಸ್!