ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಸಿಕ್ಸರ್‌ ದಾಖಲೆ ಬರೆದ ಹಿಟ್‌ಮ್ಯಾನ್‌ ರೋಹಿತ್‌

ಆರಂಭಿಕನಾಗಿ ಕಣಕ್ಕಿಳಿದ ರೋಹಿತ್‌ 17ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡು 50 ಎಸೆತ ಎದುರಿಸಿ 81 ರನ್‌ ಬಾರಿಸಿದರು. ಅವರ ಈ ಇನಿಂಗ್ಸ್‌ನಲ್ಲಿ 9 ಬೌಂಡರಿ ಹಾಗೂ 4 ಸಿಕ್ಸರ್‌ ಸಿಡಿಯಿತು. 4 ಸಿಕ್ಸರ್‌ ಬಾರಿಸುತ್ತಿದ್ದಂತೆ ರೋಹಿತ್‌ ಐಪಿಎಲ್‌ನಲ್ಲಿ 300 ಸಿಕ್ಸರ್‌ ಬಾರಿಸಿದ 2ನೇ ಆಟಗಾರನೆಂಬ ಹಿರಿಮೆಗೆ ಪಾತ್ರರಾದರು.

ಸಿಕ್ಸರ್‌ ದಾಖಲೆ ಬರೆದ ಹಿಟ್‌ಮ್ಯಾನ್‌ ರೋಹಿತ್‌

Profile Abhilash BC May 31, 2025 8:30 AM

ಮುಲ್ಲಾನ್‌ಪುರ್‌: 5 ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡ ಶುಕ್ರವಾರ ನಡೆದಿದ್ದ ಎಲಿಮಿನೇಟರ್‌(GT vs MI Eliminator) ಪಂದ್ಯದಲ್ಲಿ(IPL 2025) ಗುಜರಾತ್‌ ಟೈಟಾನ್ಸ್‌ ತಂಡವನ್ನು 20 ರನ್‌ ಅಂತರದಿಂದ ಮಣಿಸಿ 2ನೇ ಕ್ವಾಲಿಫೈಯರ್‌ ಪಂದ್ಯಕ್ಕೆ ಎಂಟ್ರಿ ಕೊಟ್ಟಿದೆ. ಭಾನುವಾರ ನಡೆಯುವ ಈ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ಸವಾಲು ಎದುರಿಸಲಿದೆ. ಇಲ್ಲಿ ಗೆದ್ದ ತಂಡ ಜೂ.3 ರಂದು ಆರ್‌ಸಿಬಿ ವಿರುದ್ಧ ಫೈನಲ್‌ ಆಡಲಿದೆ. ಎಲಿಮಿನೇಟರ್‌ ಪಂದ್ಯದಲ್ಲಿ ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್‌ ಶರ್ಮ ಸಿಕ್ಸರ್‌ಗಳ ಮೂಲಕ ದಾಖಲೆಯೊಂದನ್ನು ಬರೆದಿದ್ದಾರೆ.

ಆರಂಭಿಕನಾಗಿ ಕಣಕ್ಕಿಳಿದ ರೋಹಿತ್‌ 17ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡು 50 ಎಸೆತ ಎದುರಿಸಿ 81 ರನ್‌ ಬಾರಿಸಿದರು. ಅವರ ಈ ಇನಿಂಗ್ಸ್‌ನಲ್ಲಿ 9 ಬೌಂಡರಿ ಹಾಗೂ 4 ಸಿಕ್ಸರ್‌ ಸಿಡಿಯಿತು. 4 ಸಿಕ್ಸರ್‌ ಬಾರಿಸುತ್ತಿದ್ದಂತೆ ರೋಹಿತ್‌ ಐಪಿಎಲ್‌ನಲ್ಲಿ 300 ಸಿಕ್ಸರ್‌ ಬಾರಿಸಿದ 2ನೇ ಆಟಗಾರನೆಂಬ ಹಿರಿಮೆಗೆ ಪಾತ್ರರಾದರು. ದಾಖಲೆ ಕ್ರಿಸ್‌ ಗೇಲ್‌ (357) ಹೆಸರಿನಲ್ಲಿದೆ. ಸಿಕ್ಸರ್‌ ಮಾತ್ರವಲ್ಲದೆ ಐಪಿಎಲ್‌ನಲ್ಲಿ 7 ಸಾವಿರ ರನ್‌ ಪೂರ್ತಿಗೊಳಿಸಿದ 2ನೇ ಆಟಗಾರ ಎಂಬ ಮೈಲಿಗಲ್ಲು ನಿರ್ಮಿಸಿದರು. ವಿರಾಟ್‌ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅದಕ್ಕೆ ತಕ್ಕಂತೆ ಆರಂಭಿಕ ಜೋಡಿ ರೋಹಿತ್ (81) ಮತ್ತು ಜಾನಿ ಬೆಸ್ಟೊ (47) ಮೊದಲ ವಿಕೆಟ್‌ ಜತೆಯಾಟದಲ್ಲಿ 84 ರನ್ ಸೇರಿಸಿದರು. ಈ ಜತೆಯಾಟದಿಂದ ಮುಂಬೈ ತಂಡವು 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 228 ರನ್ ಗಳಿಸಿತು. ಗುರಿ ಬೆನ್ನಟ್ಟಿದ್ದ ಗುಜರಾತ್ ತಂಡಕ್ಕೆ 20 ಓವರ್‌ಗಳಲ್ಲಿ 6 ವಿಕೆಟ್‌ಗಳಿಗೆ 208 ರನ್‌ ಗಳಿಸಲಷ್ಟೇ ಸಾಧ್ಯವಾಯಿತು.

ಚೇಸಿಂಗ್‌ ವೇಳೆ ಸಾಯಿ ಸುದರ್ಶನ್ (80) ಮತ್ತು ವಾಷಿಂಗ್ಟನ್ ಸುಂದರ್ (48) ಹೊರತುಪಡಿಸಿ ಉಳಿದ ಬ್ಯಾಟರ್‌ಗಳಿಂದ ನಿರೀಕ್ಷಿತ ಪ್ರದರ್ಶನ ಕಂಡು ಬಾರದ್ದು ತಂಡದ ಸೋಲಿಗೆ ಪ್ರಮುಖ ಕಾರಣ.ಈ ಜೋಡಿ ಮೂರನೇ ವಿಕೆಟ್ ಜೊತೆಯಾಟದಲ್ಲಿ 84 ರನ್ ಸೇರಿಸಿದರು. ಆದರೆ ಆ ಬಳಿಕ ಬಂದ ಬ್ಯಾಟರ್‌ಗಳು ಸತತವಾಗಿ ವಿಕೆಟ್‌ ಕಳೆದುಕೊಂಡರು. ನಾಯಕ ಶುಭಮನ್‌ ಗಿಲ್‌ ಕನಿಷ್ಠ 25 ರನ್‌ ಬಾರಿಸುತ್ತಿದ್ದರೂ ತಂಡ ಆರಾಮವಾಗಿ ಗೆಲುವು ಸಾಧಿಸುತ್ತಿತ್ತು. ಆದರೆ ಗಿಲ್‌ ಕೇವಲ ಒಂದು ರನ್‌ಗೆ ಸೀಮಿತರಾದರು.

ಇದನ್ನೂ ಓದಿ IPL 2025: ʻಈ ಒಂದು ಕಾರಣದಿಂದಲೇ ವಿರಾಟ್‌ ಕೊಹ್ಲಿಯ ಮೇಲೆ ನನಗೆ ಗೌರವ ಜಾಸ್ತಿʼ: ಎಬಿಡಿ!