ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಕೆಕೆಆರ್‌ ತಂಡ ಸೇರಿದ ಶಿವಂ ಶುಕ್ಲಾ ಯಾರು?

29 ವರ್ಷದ ಶಿವಂ ಶುಕ್ಲಾ ಮಧ್ಯಪ್ರದೇಶ ಟಿ20 ಲೀಗ್‌ನ ಉದ್ಘಾಟನಾ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅಲ್ಲಿ ಅವರು ಐದು ವಿಕೆಟ್‌ಗಳು ಸೇರಿದಂತೆ ಒಟ್ಟು 10 ವಿಕೆಟ್‌ಗಳನ್ನು ಪಡೆದು ಪರ್ಪಲ್ ಕ್ಯಾಪ್ ಗೆದ್ದಿದ್ದರು. 2024-25ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ, ಅವರು ಮಧ್ಯಪ್ರದೇಶ ಪರ ಎಂಟು ವಿಕೆಟ್‌ಗಳನ್ನು ಕಬಳಿಸಿದ್ದರು.

ಕೆಕೆಆರ್‌ ತಂಡ ಸೇರಿದ ಶಿವಂ ಶುಕ್ಲಾ ಯಾರು?

Profile Abhilash BC May 18, 2025 3:52 PM

ಕೋಲ್ಕತಾ: ವೆಸ್ಟ್‌ ಇಂಡೀಸ್‌ ತಂಡದ ಆಲ್‌ರೌಂಡರ್‌ ರೋಮನ್ ಪೋವೆಲ್‌ ಉಳಿದ ಐಪಿಎಲ್‌ ಪಂದ್ಯಗಳಲ್ಲಿ ಆಡದಿರಲು ನಿರ್ಧರಿಸಿರುವ ಕಾರಣ ಅವರ ಸ್ಥಾನಕ್ಕೆ ಮಧ್ಯಪ್ರದೇಶದ ಸ್ಪಿನ್ನರ್ ಶಿವಂ ಶುಕ್ಲಾ ಅವರನ್ನು ಕೆಕೆಆರ್‌ ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿದೆ. ಈ ವಿಚಾರವನ್ನು ಕೋಲ್ಕತಾ ನೈಟ್‌ರೈಡರ್ಸ್‌ ಭಾನುವಾರ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ. ಪೋವೆಲ್‌ ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ಭಾರತಕ್ಕೆ ಮರಳಲು ನಿರಾಕರಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದುಗೊಂಡ ಕಾರಣ ಕೆಕೆಆರ್ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ.

ಯಾರು ಈ ಶಿವಂ ಶುಕ್ಲಾ?

29 ವರ್ಷದ ಶಿವಂ ಶುಕ್ಲಾ ಮಧ್ಯಪ್ರದೇಶ ಟಿ20 ಲೀಗ್‌ನ ಉದ್ಘಾಟನಾ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅಲ್ಲಿ ಅವರು ಐದು ವಿಕೆಟ್‌ಗಳು ಸೇರಿದಂತೆ ಒಟ್ಟು 10 ವಿಕೆಟ್‌ಗಳನ್ನು ಪಡೆದು ಪರ್ಪಲ್ ಕ್ಯಾಪ್ ಗೆದ್ದಿದ್ದರು. 2024-25ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ, ಅವರು ಮಧ್ಯಪ್ರದೇಶ ಪರ ಎಂಟು ವಿಕೆಟ್‌ಗಳನ್ನು ಕಬಳಿಸಿದ್ದರು. ಇದರಲ್ಲಿ ಸೌರಾಷ್ಟ್ರ ವಿರುದ್ಧ ನಾಲ್ಕು ವಿಕೆಟ್‌ಗಳ ಗೊಂಚಲು ಸೇರಿತ್ತು. ಮೇ 25 ರಂದು ಕೆಕೆಆರ್‌ನ ಕೊನೆಯ ಪಂದ್ಯದಲ್ಲಿ ಈ ತಂಡದ ವಿರುದ್ಧ ಆಡಬಹುದು.

ಕೆಕೆಆರ್‌ಗೆ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸುತ್ತಿದ್ದರೆ ಪ್ಲೇ-ಆಫ್‌ ರೇಸ್‌ನಲ್ಲಿ ಉಳಿಯುವ ಅವಕಾಶವಿತ್ತು. ಆದರೆ ತಂಡದ ಈ ಆಸೆಗೆ ಮಳೆ ತಣ್ಣೀರೆರಚಿತು. 6.15ರಿಂದ 7.30ರ ವರೆಗೂ ಧಾರಾಕಾರವಾಗಿ ಸುರಿದ ಮಳೆ ಆ ಬಳಿಕ ನಿಧಾನಗೊಂಡಿತು. ಸುಮಾರು 8 ಗಂಟೆ ಸಮಯದಲ್ಲಿ ಮೈದಾನಕ್ಕೆ ಹೊದಿಸಿದ್ದ ಹೊದಿಕೆಗಳನ್ನು ತೆಗೆಯಲು ಮೈದಾನ ಸಿಬ್ಬಂದಿ ಸಿದ್ಧತೆ ನಡೆಸಿದರು. 4ನೇ ಅಂಪೈರ್‌ ಮೈದಾನಕ್ಕಿಳಿದು ಪರಿಶೀಲನೆ ನಡೆಸಿ ಬಳಿಕ ಪಿಚ್‌ ಕ್ಯುರೇಟರ್‌ ಜೊತೆ ಚರ್ಚೆ ನಡೆಸಿದರು. ಆದರೆ ಮತ್ತೆ ಮಳೆ ಜೋರಾದ ಕಾರಣ ಸುಮಾರು 10.30 ರ ವೇಳೆಗೆ ಪಂದ್ಯವನ್ನು ರದ್ದು ಎಂದು ಘೋಷಿಸಲಾಯಿತು.

ಇದನ್ನೂ ಓದಿ IPL 2025 Final: ಫೈನಲ್‌ ಕೋಲ್ಕತಾದಿಂದ ಸ್ಥಳಾಂತರಿಸುವುದು ಸುಲಭವಿಲ್ಲ; ಗಂಗೂಲಿ

ಪಂದ್ಯ ರದ್ದಾದ ಕಾರಣ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ ಮೊದಲ ಬಾರಿಗೆ ಮೈದಾನಕ್ಕಿಳಿಯಲಿದ್ದಾರೆ ಎಂಬ ಕಾರಣಕ್ಕೆ, ಅವರಿಗೆ ಗೌರವ ಸೂಚಿಸುವ ಉದ್ದೇಶದಿಂದ ಮೈದಾನಕ್ಕೆ ಬಂದಿದ್ದ ಸಾವಿರಾರು ಅಭಿಮಾನಿಗಳಿಗೂ ನಿರಾಸೆಯಾಯಿತು.