ಜೈಪುರ, ಮೇ 2: ಹಾಲಿ ಆವೃತ್ತಿಯ ಐಪಿಎಲ್(IPL 2026) ಟೂರ್ನಿಯಲ್ಲಿ ಸ್ವಲ್ಪ ಅಸ್ಥಿರ ಪ್ರದರ್ಶನ ನೀಡಿದ ನಂತರ, ಡೆಲ್ಲಿ ಕ್ಯಾಪಿಟಲ್ಸ್(RR vs DC) ತಂಡ ಶುಕ್ರವಾರ ರಾಜಸ್ಥಾನ ರಾಯಲ್ಸ್ ತಂಡವನ್ನು ಏಳು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಗೆಲುವಿನ ಹಾದಿಗೆ ಮರಳಿದೆ. ಜತೆಗೆ ಅಂಕಪಟ್ಟಿ(IPL 2026 Points Table)ಯಲ್ಲಿಯೂ ಜಿಗಿತ ಕಂಡಿದೆ.
ಆಡಿದ 9 ಪಂದ್ಯಗಳಲ್ಲಿ 4 ಗೆಲುವು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸದ್ಯ 6ನೇ ಸ್ಥಾನದಲ್ಲಿದೆ. ಸೋಲು ಕಂಡ ರಾಜಸ್ಥಾನ್ ರಾಯಲ್ಸ್ ನಾಲ್ಕನೇ ಸ್ಥಾನದಲ್ಲೇ ಉಳಿದುಕೊಂಡಿದೆ. ತಂಡ 10 ಪಂದ್ಯಗಳನ್ನು ಆಡಿದೆ. ಏಕೈಕ ಸೋಲು ಕಂಡಿರುವ ಪಂಜಾಬ್ ಕಿಂಗ್ಸ್ 13 ಅಂಕದೊಂದಿಗೆ ಅಗ್ರಸ್ಥಾನಿಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಿಯಾಗಿದೆ.
ಆರೆಂಜ್ ಕ್ಯಾಪ್
ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ ಬೃಹತ್ ಮೊತ್ತದ ಚೇಸಿಂಗ್ ವೇಳೆ 40 ಎಸೆತಗಳಲ್ಲಿ 75 ರನ್ ಗಳಿಸಿದ ಕೆ.ಎಲ್ ರಾಹುಲ್ ತಮ್ಮ ಈ ಬ್ಯಾಟಿಂಗ್ ಪ್ರದರ್ಶನದಿಂದ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡರು. ಅವರು ಈಗ 433ರನ್ ಗಳಿಸಿದ್ದಾರೆ. ಅಭಿಷೇಕ್ ಶರ್ಮ(425) ಈ ರೇಸ್‌ನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ಪರ್ಪಲ್ ಕ್ಯಾಪ್
ಜೋಫ್ರಾ ಆರ್ಚರ್ ಪರ್ಪಲ್ ಕ್ಯಾಪ್ ಹೊಂದಿರುವವರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಡೆಲ್ಲಿ ವಿರುದ್ಧ ಅವರು ತಮ್ಮ ಉತ್ತಮ ಫಾರ್ಮ್ ಅನ್ನು ಮುಂದುವರೆಸಿದರು ಮತ್ತು ಕೊನೆಯ ಓವರ್‌ಗಳಲ್ಲಿ ಕೆಎಲ್ ರಾಹುಲ್ ಅವರ ನಿರ್ಣಾಯಕ ವಿಕೆಟ್ ಪಡೆದರು. ಆದರೆ ಅದು ರಾಜಸ್ಥಾನ್ ರಾಯಲ್ಸ್‌ಗೆ ಗೆಲುವಿನ ರೇಖೆಯನ್ನು ದಾಟಲು ಸಾಕಾಗಲಿಲ್ಲ. ಪರ್ಪಲ್ ಕ್ಯಾಪ್ ಸದ್ಯ ಆರ್‌ಸಿಬಿಯ ಭುವನೇಶ್ವರ್ ಕುಮಾರ್ ಬಳಿ ಇದೆ. ಅವರು 17 ವಿಕೆಟ್ ಕಿತ್ತಿದ್ದಾರೆ.
CSK vs MI: ಮುಂಬೈಗೆ ಮಾಡು ಇಲ್ಲವೇ ಮಡಿ ಪಂದ್ಯ; ಚೆನ್ನೈ ಎದುರಾಳಿ
ಇಂದಿನ ಪಂದ್ಯ
ಶನಿವಾರದ ಇಂಡಿಯನ್ ಪ್ರೀಮಿಯರ್ ಲೀಗ್‌ನ 44ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿವೆ. ಮುಂಬೈ 6 ಸೋಲಿನೊಂದಿಗೆ 9ನೇ ಸ್ಥಾನದಲ್ಲಿದ್ದರೆ, 5 ಸೋಲು ಕಂಡು 6ನೇ ಸ್ಥಾನದಲ್ಲಿದೆ. ಇತ್ತಂಡಗಳು ತಲಾ 8 ಪಂದ್ಯಗಳನ್ನು ಆಡಿವೆ. ಗಾಯಾದಿಂದ ಚೇತರಿಕೆ ಕಂಡಿರುವ ದಿಗ್ಗಜರಾದ ರೋಹಿತ್ ಶರ್ಮ ಮತ್ತು ಎಂ.ಎಸ್ ಧೋನಿ ಈ ಪಂದ್ಯದಲ್ಲಿ ಆಡುವ ಸಾಧ್ಯತೆ ಅಧಿಕ.
ಮುಖಾಮುಖಿ
ಮುಂಬೈ ಇಂಡಿಯನ್ಸ್- 22 ಗೆಲುವು
ಚೆನ್ನೈ ಸೂಪರ್ ಕಿಂಗ್ಸ್- 20 ಗೆಲುವು