ಅಹಮದಾಬಾದ್, ಎ.20: ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದ ರೋಹಿತ್ ಶರ್ಮಾ(Rohit Sharma) ಚೇತರಿಸಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ. ಮುಂಬೈ ಇಂಡಿಯನ್ಸ್(MI vs GT) ಇಂದು ಗುಜರಾತ್ ವಿರುದ್ಧ ಪಂದ್ಯವನ್ನಾಡಲಿದೆ. ಆರ್‌ಸಿಬಿ ವಿರುದ್ಧದ ಪಂದ್ಯದ ಸಮಯದಲ್ಲಿ ರೋಹಿತ್ ಗಾಯಗೊಂಡಿದ್ದರು. ಹೀಗಾಗಿ ಕಳೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದರು.
ರೋಹಿತ್, ನೆಟ್ಸ್‌ನಲ್ಲಿ ಬ್ಯಾಟಿಂಗ್ ನಡೆಸಿದರೂ, ಪಂದ್ಯಕ್ಕೂ ಮುನ್ನ ನಡೆಯುವ ಅಂತಿಮ ಅಭ್ಯಾಸ ಅವಧಿಯ ನಂತರ ಅವರು ಆಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಸದ್ಯ ಅವರು ಮುಖ್ಯ ಕೋಚ್ ಮಹೇಲಾ ಜಯವರ್ಧನೆ ಮತ್ತು ವೈದ್ಯಕೀಯ ತಂಡದ ನಿಗಾದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
"ರೋಹಿತ್ ಅಹಮದಾಬಾದ್‌ನಲ್ಲಿ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ವೈದ್ಯಕೀಯ ತಂಡ ಮತ್ತು ಮುಖ್ಯ ಕೋಚ್ ಮಹೇಲಾ ಜಯವರ್ಧನೆ ಅವರ ಮೌಲ್ಯಮಾಪನ ಮುಂದುವರೆದಿದೆ" ಎಂದು ಫ್ರಾಂಚೈಸಿ ಹೇಳಿಕೆಯಲ್ಲಿ ತಿಳಿಸಿದೆ.
ರೋಹಿತ್ ಅನುಪಸ್ಥಿತಿಯಲ್ಲಿ, ಮುಂಬೈ ತಂಡದಲ್ಲಿ ಕಳೆದ ಪಂದ್ಯದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಯಿತು. ಕ್ವಿಂಟನ್ ಡಿ ಕಾಕ್ ಅವರನ್ನು ರಯಾನ್ ರಿಕಲ್ಟನ್ ಜೊತೆಗೆ ಆರಂಭಿಕ ಬ್ಯಾಟಿಂಗ್‌ಗೆ ಕರೆತಂದರು. ಡಿ ಕಾಕ್ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು 112 ರನ್ ಗಳಿಸಿದರು.
ರೋಹಿತ್ ತಂಡಕ್ಕೆ ಮರಳಿದರೆ, ಕಳೆದ ಕೆಲವು ಪಂದ್ಯಗಳಲ್ಲಿ ರಿಕಲ್ಟನ್ ರನ್ ಗಳಿಸಲು ಕಷ್ಟಪಡುತ್ತಿರುವುದರಿಂದ ಡಿ ಕಾಕ್ ಜೊತೆಗೆ ಆರಂಭಿಕರಾಗಿ ಆಡುವ ನಿರೀಕ್ಷೆಯಿದೆ. ಆರಂಭಿಕ ಪಂದ್ಯದಲ್ಲಿ 81 ರನ್ ಗಳಿಸಿದ ನಂತರ, ರಿಕಲ್ಟನ್ 9,8, 37 ಮತ್ತು 2 ರನ್ ಗಳಿಸಿದ್ದಾರೆ. ಈ ಋತುವಿನಲ್ಲಿ ರೋಹಿತ್ ನಾಲ್ಕು ಪಂದ್ಯಗಳಿಂದ 137 ರನ್ ಗಳಿಸಿದ್ದಾರೆ. ಕಳೆದ ನಾಲ್ಕು ಪಂದ್ಯಗಳಲ್ಲಿ ಸೋತು ಕೇವಲ ಎರಡು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಮುಂಬೈ ತಂಡಕ್ಕೆ ಗುಜರಾತ್ ವಿರುದ್ಧ ಗೆಲುವು ಅನಿವಾರ್ಯವಾಗಿದೆ.
ಗುಜರಾತ್ ಸವಾಲಿಗೆ ಮುಂಬೈ ಸಜ್ಜು; ಸೋತರೆ ಪಾಂಡ್ಯ ಪಡೆಯ ಪ್ಲೇ ಆಫ್ ಹಾದಿ ಕಠಿಣ
ಸಂಭಾವ್ಯ ತಂಡಗಳು
ಗುಜರಾತ್ ಟೈಟಾನ್ಸ್
ಶುಭಮನ್ ಗಿಲ್ (ನಾಯಕ), ಬಿ. ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿ.ಕೀ.), ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡಾ, ಅಶೋಕ್ ಶರ್ಮಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್.
ಇಂಪ್ಯಾಕ್ಟ್ ಪ್ಲೇಯರ್: ಶಾರುಖ್ ಖಾನ್.
ಮುಂಬೈ ಇಂಡಿಯನ್ಸ್
ಕ್ವಿಂಟನ್ ಡಿ ಕಾಕ್ (ವಿ.ಕೀ.), ಸೂರ್ಯಕುಮಾರ್ ಯಾದವ್, ನಮನ್ ಧೀರ್, ತಿಲಕ್ ವರ್ಮಾ, ಶೆರ್ಫೇನ್ ರುದರ್ಫೋರ್ಡ್, ಹಾರ್ದಿಕ್ ಪಾಂಡ್ಯ (ನಾಯಕ), ಮಯಾಂಕ್ ರಾವತ್, ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ಅಶ್ವನಿ ಕುಮಾರ್, ಜಸ್ಪ್ರೀತ್ ಬುಮ್ರಾ.
ಇಂಪ್ಯಾಕ್ಟ್ ಪ್ಲೇಯರ್: ಅಲ್ಲಾ ಘಜನ್ಫರ್.