ರಾಯ್ಪುರ, ಮೇ 12: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಬುಧವಾರ(ಮೇ 13) ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 57 ನೇ ಪಂದ್ಯದಲ್ಲಿ, ಪ್ರಚಂಡ ಫಾರ್ಮ್‌ನಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಆಡುವ ಮೂಲಕ ಪ್ಲೇಆಫ್‌ಗೆ ಅರ್ಹತೆ ಪಡೆಯು ಗುರಿಯೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಈ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯದ ಸಂಭಾವ್ಯ ತಂಡಗಳು, ಪಿಚ್ ರಿಪೋರ್ಟ್ ಮತ್ತು ಮುಖಾಮುಖಿಯ ಅಂಕಿ-ಅಂಶಗಳ ಕಿರು ವರದಿ ಇಲ್ಲಿದೆ.
ಪಿಚ್ ರಿಪೋರ್ಟ್
2016 ರಲ್ಲಿ ಆರ್‌ಸಿಬಿ ಕೊನೆಯ ಬಾರಿಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಿದ ನಂತರ ರಾಯ್‌ಪುರ್ ಈ ಬಾರಿ ಐಪಿಎಲ್ ಪಂದ್ಯಗಳನ್ನು ಆಯೋಜಿಸುತ್ತಿದೆ. ಇಲ್ಲಿ ನಡೆದ ಕಳೆದ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಮುಂಬೈ ಮುಖಾಮುಖಿಯಾಗಿದ್ದವು. ನಿಧಾನಗತಿಯ ಈ ಪಿಚ್‌ನಲ್ಲಿ ಕನಿಷ್ಠ 150 ರನ್‌ಗಳನ್ನು ಚೇಸಿಂಗ್ ನೆಡೆಸುವುದು ಕೂಡ ಕಷ್ಟಕರ. ಹೊಸ ಚೆಂಡಿನಲ್ಲಿ ವೇಗಿಗಳು ಸಂಪೂರ್ಣವಾಗಿ ಹಿಡಿತ ಸಾಧಿಸಬಹುದು. ಮೊದಲ ಕೆಲವು ಓವರ್‌ಗಳಲ್ಲಿ ಚೆಂಡು ಸ್ವಲ್ಪ ಪುಟಿಯುವಿಕೆ ಮತ್ತು ಚಲನೆಯನ್ನು ನಿರೀಕ್ಷಿಸಬಹುದು. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಪ್ರಮುಖ ಪಾತ್ರ ವಹಿಸಿದರೂ ರನ್ ಗಳಿಕೆ ಸುಲಭವಲ್ಲ.
ಹವಾಮಾನ ವರದಿ
ಅಕ್ಯೂವೆದರ್ ಪ್ರಕಾರ, ಪಂದ್ಯಕ್ಕೆ ಮಳೆ ಭೀತಿ ಇಲ್ಲ. ನಗರದಲ್ಲಿ ಗರಿಷ್ಠ 39° ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 24° ಸೆಲ್ಸಿಯಸ್‌ನಲ್ಲಿರುತ್ತದೆ ಎನ್ನಲಾಗಿದೆ. ಆದರೆ ಸ್ಥಳೀಯ ವರದಿಗಳ ಪ್ರಕಾರ ರಾಯ್‌ಪುರದಲ್ಲಿ ಬುಧವಾರ ಮೋಡ ಕವಿದ ವಾತಾವರಣವಿದ್ದು, ಬಲವಾದ ಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
RCB vs KKR: ಕೆಕೆಆರ್‌ಗೆ ಮಾಡು ಇಲ್ಲವೇ ಮಡಿ ಪಂದ್ಯ; ಆರ್‌ಸಿಬಿಗೆ ಪ್ಲೇ-ಆಫ್ ಪ್ರವೇಶಿಸುವ ಇರಾದೆ
ಮುಖಾಮುಖಿ
ಇತ್ತಂಡಗಳು ಈವರೆಗಿನ ಐಪಿಎಲ್ ಟೂರ್ನಿ ಇತಿಹಾಸದಲ್ಲಿ ಒಟ್ಟು 36 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಕೆಕೆಆರ್ ಗರಿಷ್ಠ 20 ಪಂದ್ಯಗಳನ್ನು ಗೆದ್ದರೆ, ಆರ್‌ಸಿಬಿ 15 ಪಂದ್ಯಗಳಲ್ಲಿ ಜಯಿಸಿದೆ. ಒಂದು ಪಂದ್ಯ ಟೈಗೊಂಡಿದೆ.
ಸಂಭಾವ್ಯ ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ವಿರಾಟ್ ಕೊಹ್ಲಿ, ಜಾಕೋಬ್ ಬೆಥೆಲ್/ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿ.ಕೀ.), ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ, ರಸಿಖ್ ಸಲಾಮ್ ದಾರ್.
ಇಂಪ್ಯಾಕ್ಟ್ ಪ್ಲೇಯರ್: ದೇವದತ್ ಪಡಿಕ್ಕಲ್.
IPL 2026: ಪಂಜಾಬ್ ವಿರುದ್ಧ ಆಲ್‌ರೌಂಡರ್ ಪ್ರದರ್ಶನ ನೀಡಿದ ಮಾಧವ್ ತಿವಾರಿ ಯಾರು?
ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್): ಅಜಿಂಕ್ಯ ರಹಾನೆ (ನಾಯಕ), ಆಂಗ್‌ಕ್ರಿಶ್ ರಘುವಂಶಿ (ವಿ.ಕೀ.), ಕ್ಯಾಮೆರಾನ್ ಗ್ರೀನ್, ರೋವ್ಮನ್ ಪೊವೆಲ್, ಮನೀಶ್ ಪಾಂಡೆ, ರಿಂಕು ಸಿಂಗ್, ಸುನಿಲ್ ನರೈನ್, ಅನುಕುಲ್ ರಾಯ್, ಕಾರ್ತಿಕ್ ತ್ಯಾಗಿ, ವೈಭವ್ ಅರೋರಾ, ವರುಣ್ ಚಕ್ರವರ್ತಿ.
ಇಂಪ್ಯಾಕ್ಟ್ ಪ್ಲೇಯರ್: ಫಿನ್ ಅಲೆನ್.
ಪಂದ್ಯ ಆರಂಭ: ರಾತ್ರಿ 7.30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್, ಜಿಯೊ ಹಾಟ್‌ಸ್ಟಾರ್.