IPL Points Table 2026: ರಾಜಸ್ಥಾನ್ ರಾಯಲ್ಸ್ ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಪಂಜಾಬ್
PBKS vs CSK: ಶನಿವಾರ ಎರಡು ಪಂದ್ಯಗಳು ನಡೆಯಲಿವೆ. ದಿನದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖೀಯಾದರೆ, ರಾತ್ರಿಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಸೆಣಸಾಟ ನಡೆಸಲಿದೆ.
Yuzvendra Chahal -
ಚೆನ್ನೈ, ಎ.4: ಹಾಲಿ ಆವೃತ್ತಿಯ ಐಪಿಎಲ್(IPL 2026) ಟೂರ್ನಿಯಲ್ಲಿ ಸತತ ಎರಡನೇ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್(PBKS vs CSK) ತಂಡ ಅಂಕಪಟ್ಟಿ(IPL Points Table 2026)ಯಲ್ಲಿ ಅಗ್ರಸ್ಥಾನಕ್ಕೇರಿದೆ. ಶುಕ್ರವಾರ ನಡೆದಿದ್ದ ಪಂದ್ಯದಲ್ಲಿ ಪಂಜಾಬ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್ ಅಂತರದ ಗೆಲುವು ಸಾಧಿಸಿತ್ತು.
ಇದಕ್ಕೂ ಮುನ್ನ ಅಗ್ರಸ್ಥಾನಿಯಾಗಿದ್ದ ರಾಜಸ್ಥಾನ್ ರಾಯಲ್ಸ್ ತಂಡ ಎರಡನೇ ಸ್ಥಾನಕ್ಕೆ ಕುಸಿಯಿತು. ಆರ್‌ಸಿಬಿ ಮೂರನೇ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕನೇ ಸ್ಥಾನಿಯಾಗಿದೆ. ಸತತ ಎರಡು ಸೋಲು ಕಂಡ ಚೆನ್ನೈ ತಂಡ ಕೊನೆಯ ಸ್ಥಾನದಲ್ಲೇ ಮುಂದುವರೆಯಿತು.
ಶುಕ್ರವಾರ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಚೆನ್ನೈ 207 ರನ್ ಬಾರಿಸಿತು. ಗುರಿಯನ್ನು ಹಿಂಬಾಲಿಸಿದ ಪಂಜಾಬ್ ಕಿಂಗ್ಸ್ ತಂಡ, ಅದ್ಭುತ ಬ್ಯಾಟಿಂಗ್ ಪ್ರದರ್ಶನವನ್ನು ತೋರಿತು. ಅಗ್ರ ಕ್ರಮಾಂಕದ ನಾಲ್ವರು ಬ್ಯಾಟ್ಸ್‌ಮನ್‌ಗಳ ಆಟದ ನೆರವಿನಿಂದ 18.4 ಓವರ್‌ಗಳಿಗೆ 5 ವಿಕೆಟ್‌ಗಳ ನಷ್ಟಕ್ಕೆ 210 ರನ್‌ಗಳಿಸಿ ಗೆದ್ದು ಬೀಗಿತು. ಇನ್ನು 200ಕ್ಕೂ ಅಧಿಕ ರನ್‌ಗುರಿ ನೀಡಿದರೂ ಸಿಎಸ್‌ಕೆ ಬೌಲಿಂಗ್ ವೈಫಲ್ಯದಿಂದ ಸೋಲು ಒಪ್ಪಿಕೊಂಡಿತು.
ಚೇಸಿಂಗ್ ವೇಳೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಶ್ರೇಯಸ್ ಅಯ್ಯರ್ 29 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 4 ಬೌಂಡರಿಗಳೊಂದಿಗೆ 50 ರನ್ ಗಳಿಸಿದರು. ಆ ಮೂಲಕ ಪಂಜಾಬ್ ಕಿಂಗ್ಸ್‌ನ ಚೇಸಿಂಗ್‌ನಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದರು.
ಇಂದಿನ ಪಂದ್ಯ
ಶನಿವಾರ ಎರಡು ಪಂದ್ಯಗಳು ನಡೆಯಲಿವೆ. ದಿನದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖೀಯಾದರೆ, ರಾತ್ರಿಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಸೆಣಸಾಟ ನಡೆಸಲಿದೆ.
IPL 2026: 2 ಬಾರಿ ಬ್ಯಾಟ್ ಟೆಸ್ಟ್‌ನಲ್ಲಿ ವಿಫಲರಾದ ಆಯುಷ್ ಮ್ಹಾತ್ರೆ! ಮುಂದೇನಾಯ್ತು ಗೊತ್ತೆ?
ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ತಂಡವು ಈ ಋತುವಿನ ತಮ್ಮ ಮೊದಲ ತವರು ಪಂದ್ಯವನ್ನು ಆಡಲಿದೆ. ಕಳೆದ ಪಂದ್ಯದಲ್ಲಿ ಗೋಲ್ಡನ್ ಡಕ್ ಆಗಿ ನಿರಾಸೆ ಮೂಡಿಸಿದ್ದ ಕೆ.ಎಲ್ ರಾಹುಲ್ ಈ ಪಂದ್ಯದಲ್ಲಿ ಅವರ ಅಭಿಮಾನಿಗಳನ್ನು ಖುಷಿ ಪಡಿಸಲಿದ್ದಾರಾ ಎಂದು ಕಾದು ನೋಡಬೇಕಿದೆ. ಯುವ ಆಟಗಾರರಾದ ಸಮೀರ್ ರಿಜ್ವಿ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಮೇಲೆ ಈ ಪಂದ್ಯದಲ್ಲಿಯೂ ತಂಡ ಹೆಚ್ಚಿನ ನಂಬಿಕೆ ಇಟ್ಟಿದೆ.
ಏತನ್ಮಧ್ಯೆ, ಮುಂಬೈ ಇಂಡಿಯನ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತವರಿನಲ್ಲಿ ತಮ್ಮ ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದ ಜೋಶ್‌ನಲ್ಲಿದೆ. ಇತ್ತಂಡಗಳ ಮುಖಾಮುಖಿ ದಾಖಲೆ ನೋಡುವಾಗ ಮುಂಬೈ ತಂಡ ಮುಂದಿದೆ. ಇತ್ತಂಡಗಳು ಈವರೆಗೆ 37 ಬಾರಿ ಪರಸ್ಪರ ಸೆಣಸಾಟ ನಡೆಸಿದ್ದು ಮುಂಬೈ 21 ಪಂದ್ಯ ಗೆದ್ದಿದ್ದರೆ, ಡೆಲ್ಲಿ 16 ಪಂದ್ಯ ಜಯಿಸಿದೆ.