ಆರ್‌ಸಿಬಿ ನೀಡಿದ 213 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಕೊನೆಯ ಓವರ್‌ನಲ್ಲಿ ಗೆಲುವಿಗೆ 5 ರನ್‌ಗಳು ಬೇಕಾಗಿದ್ದವು. ಆಗ ಬೌಲಿಂಗ್ ಮಾಡಿದ ಆರ್‌ಸಿಬಿ ತಂಡದ ಹರ್ಷಲ್ ಪಟೇಲ್ ಎರಡು ವಿಕೆಟ್ ಪಡೆದು ರೋಮಾಂಚನ ಕಾರಿ ತಿರುವು ಕೊಟ್ಟಿದ್ದರು.
ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 213 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ನಿಕೋಲಸ್ ಪೂರನ್, ಆರ್‌ಸಿಬಿ ವಿರುದ್ಧ ತಮ್ಮ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮತ್ತೆ ಗೆಲು ವಿನ ಹಳಿಗೆ ತಂದು ನಿಲ್ಲಿಸಿದರು.
ನಿಕೋಲಸ್ ಪೂರನ್ ಕೇವಲ 15 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ಪೂರೈಸಿದರು.
2023ರ ಐಪಿಎಲ್‌ನಲ್ಲಿ ಅತಿ ವೇಗವಾಗಿ ಅರ್ಧಶತಕ ಗಳಿಸಿದ ಆಟಗಾರನಾದರೆ, ಇಂಡಿ ಯನ್ ಪ್ರೀಮಿಯರ್ ಲೀಗ್‌ನ ಇತಿಹಾಸದಲ್ಲಿ ಜಂಟಿ ಎರಡನೇ ವೇಗದ ಅರ್ಧಶತಕ ಗಳಿಸಿದ ಬ್ಯಾಟ್ಸ್‌ಮನ್ ಎನಿಸಿದರು.
ನಿಕೋಲಸ್ ಪೂರನ್ ಸದ್ಯ ಸುನಿಲ್ ನರೈನ್ ಮತ್ತು ಯೂಸುಫ್ ಪಠಾಣ್ ಅವರೊಂದಿಗೆ ಅತಿ ವೇಗದ ಅರ್ಧಶತಕಗಳ ಪಟ್ಟಿ ಯಲ್ಲಿ ಜಂಟಿ ಎರಡನೇ ಸ್ಥಾನ ಪಡೆದಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಮತ್ತು ಪ್ಯಾಟ್ ಕಮ್ಮಿನ್ಸ್ 14 ಎಸೆತಗಳಲ್ಲಿ ತಮ್ಮ ಅರ್ಧಶತಕ ಬಾರಿಸುವ ಮೂಲಕ ಮೊದಲೆರಡು ಸ್ಥಾನದಲ್ಲಿದ್ದಾರೆ.
ಆರ್‌ಸಿಬಿ ತಂಡದ ವೇಗಿಗಳು ಮತ್ತು ಸ್ಪಿನ್ನರ್‌ಗಳ ವಿರುದ್ಧ ದೊಡ್ಡ ಶಾಟ್‌ಗಳಿಗೆ ಮುಂದಾದ ನಿಕೋಲಸ್ ಪೂರನ್, 17ನೇ ಓವರ್ ನಲ್ಲಿ ಮೊಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಔಟಾಗುವ ಮುನ್ನ 19 ಎಸೆತಗಳಲ್ಲಿ 7 ಭರ್ಜರಿ ಸಿಕ್ಸರ್ ಮತ್ತು 4 ಬೌಂಡಿರಿಗಳ ಸಮೇತ 62 ರನ್ ಬಾರಿಸಿದರು.