ಮುಂಬಯಿ: ಅಕ್ಟೋಬರ್ 1ರಿಂದ 5ರವರೆಗೆ ನಡೆಯಲಿರುವ ಇರಾನಿ ಕಪ್(Irani Cup) ಪಂದ್ಯಕ್ಕೆ ಶೇಷ ಭಾರತ ತಂಡ ಪ್ರಕಟಗೊಂಡಿದೆ. ಋತುರಾಜ್ ಗಾಯಕ್ವಾಡ್(Ruturaj Gaikwad) ಶೇಷ ತಂಡವನ್ನು(Rest of India squad) ಮುನ್ನಡೆಸಲಿದ್ದಾರೆ. ಅಭಿಮನ್ಯು ಈಶ್ವರನ್ ತಂಡದ ಉಪನಾಯಕರಾಗಿ ನೇಮಕಗೊಂಡಿದ್ದಾರೆ. ಕನ್ನಡಿಗರಾದ ಎಡಗೈ ಬ್ಯಾಟರ್ ದೇವದತ್ ಪಡಿಕ್ಕಲ್(Devdutt Padikkal) ಮತ್ತು ವೇಗಿ ಪ್ರಸಿದ್ಧ ಕೃಷ್ಣ(Prasidh Krishna) ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇಶಾನ್ ಕಿಶನ್(Ishan Kishan) ಮೊದಲ ಆಯ್ಕೆಯ ಕೀಪರ್ ಆಗಿ ಸ್ಥಾನ ಪಡೆದಿದ್ದಾರೆ. ರಣಜಿ ಚಾಂಪಿಯನ್ ಮುಂಬೈ ವಿರುದ್ಧ ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ. ಮುಂಬೈ ತಂಡ ಅನುಭವಿ ಅಜಿಂಕ್ಯಾ ರಹಾನೆ ಸಾರಥ್ಯದಲ್ಲಿ ಕಣಕ್ಕಿಳಿಯಲಿದೆ.
ಸಂಜು ಸ್ಯಾಮ್ಸನ್ ಆಯ್ಕೆಯಾದಗ ಕಾರಣ ಅವರು ಬಾಂಗ್ಲಾದೇಶ ವಿರುದ್ಧ ಅಕ್ಟೋಬರ್ 6 ರಿಂದ ಆರಂಭಗೊಳ್ಳಲಿರುವ ಟಿ20 ಸರಣಿಗೆ ಆಯ್ಕೆಯಾಗುವುದು ಖಚಿತವಾಗಿದೆ. ಇಶಾನ್ ಕಿಶನ್‌ಗೆ ಮತ್ತೆ ನಿರಾಸೆಯಾಗಿದೆ. ಅವರು ಭಾರತ ತಂಡಕ್ಕೆ ಮರಳಬೇಕಾದರೆ ಇನ್ನಷ್ಟು ದೇಶೀಯ ಟೂರ್ನಿ ಆಡುವ ಅಗತ್ಯವಿದ್ದಂತೆ ತೋರುತ್ತಿದೆ.
ಇದನ್ನೂ ಓದಿ IND vs BAN: ದ್ವಿತೀಯ ಟೆಸ್ಟ್‌ಗೆ ಭಾರೀ ಮಳೆ ಎಚ್ಚರಿಕೆ; ಪಂದ್ಯ ನಡೆಯುವುದು ಅನುಮಾನ
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ತಂಡದ ಭಾಗವಾಗಿರುವ ವಿಕೆಟ್ ಕೀಪರ್-ಬ್ಯಾಟರ್ ಧ್ರುವ ಜುರೆಲ್ ಮತ್ತು ವೇಗಿ ಯಶ್ ದಯಾಳ್ ಕೂಡ ಶೇಷ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕಾನ್ಪುರದಲ್ಲಿ ನಡೆಯಲಿರುವ ಬಾಂಗ್ಲಾ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಆಡುವ 11ರ ಬಳಗದಲ್ಲಿ ಸ್ಥಾನ ಪಡೆಯದಿದ್ದರೆ ಇವರಿಬ್ಬರು ಇರಾನಿ ಕಪ್ನಲ್ಲಿ ಆಡಲಿದ್ದಾರೆ. ಪಂತ್‌ಗೆ ಗಾಯಗೊಂಡರೂ, ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ನಿರ್ವಹಿಸಬಲ್ಲವರು . ಹೀಗಾಗಿ ಜುರೇಲ್ ಮತ್ತು ದಯಾಳ್ ಅವರನ್ನು ಭಾರತ ತಂಡದಿಂದ ಕೈಬಿಡುವ ಸಾಧ್ಯತೆ ಅಧಿಕವಾಗಿದೆ. ಸರ್ಫರಾಜ್ ಖಾನ್ ಕೂಡ ಮುಂಬೈ ಪರ ಕಣಕ್ಕಿಳಿಯಬಹುದು.
ಶೇಷ ಭಾರತ ತಂಡ
ಋತುರಾಜ್ ಗಾಯಕ್ವಾಡ್ (ನಾಯಕ), ಅಭಿಮನ್ಯು ಈಶ್ವರನ್ (ಉಪನಾಯಕ), ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ ಜುರೆಲ್ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ಮಾನವ್ ಸುಥರ್, ಸಾರಾಂಶ್ ಜೈನ್, ಪ್ರಸಿದ್ಧ ಕೃಷ್ಣ, ಮುಕೇಶ್ ಕುಮಾರ್, ಯಶ್ ದಯಾಳ್, ರಿಕಿ ಭುಯಿ, ಶಾಶ್ವತ್ ರಾವತ್, ಖಲೀಲ್ ಅಹ್ಮದ್, ರಾಹುಲ್ ಚಹರ್.
ಅಜಿಂಕ್ಯ ರಹಾನೆ ಇರಾನಿ ಕಪ್ನಲ್ಲಿ ಮುಂಬೈ ತಂಡವನ್ನು ಮುನ್ನಡೆಸಲಿದ್ದಾರೆ. ಇದನ್ನು ಈಗಾಗಲೇ ಮುಂಬಯಿ ಕ್ರಿಕೆಟ್ ಮಂಡಳಿ (ಎಂಸಿಎ) ತಿಳಿಸಿದೆ. ವೇಗಿ ಶಾರ್ದೂಲ್ ಠಾಕೂರ್ ಗಾಯದಿಂದ ಚೇತರಿಸಿಕೊಂಡು ಮರಳಿ ಕಣಕ್ಕಿಳಿಯಲಿದ್ದಾರೆ. ಜತೆಗೆ ಶ್ರೇಯಸ್ ಅಯ್ಯರ್, ಪೃಥ್ವಿ ಶಾ, ಮುಶೀರ್ ಖಾನ್, ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್ ಸಹಿತ ಪ್ರಮುಖ ಆಟಗಾರರೆಲ್ಲ ಆಡಲಿದ್ದಾರೆ.