ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಟಿ20 ವಿಶ್ವಕಪ್‌ಗೆ ಭಾರತ ತಂಡದ ಪ್ಲೇಯಿಂಗ್‌ XI ಆರಿಸಿದ ಇರ್ಫಾನ್‌ ಪಠಾಣ್

T20 World Cup: ರಿಂಕು ಸಿಂಗ್‌ ಅವರು ತನಗೆ ಸಿಕ್ಕ ಅವಕಾಶಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಪಾಂಡ್ಯ ಅವರಿಗೆ ತಂಡದಲ್ಲಿ ಸ್ಥಾನ ನೀಡಿದ ಪರಿಣಾಮ ಅವರನ್ನು ತಂಡದಿಂದ ಕೈಬಿಡಬೇಕಾಯಿತು. ಇದು ದುರದೃಷ್ಟಕರ ಸಂಗತಿ ಎಂದು ಪಠಾಣ್‌ ಹೇಳಿದ್ದಾರೆ.

ಟಿ20 ವಿಶ್ವಕಪ್‌ಗೆ ಭಾರತ ತಂಡದ ಪ್ಲೇಯಿಂಗ್‌ XI ಆರಿಸಿದ ಇರ್ಫಾನ್‌ ಪಠಾಣ್

-

Abhilash BC
Abhilash BC Dec 7, 2025 11:05 AM

ಮುಂಬಯಿ, ಡಿ.7: ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್‌(T20 World Cup) ಫೆಬ್ರವರಿ 7ರಿಂದ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ನಾಲ್ಕು ಗುಂಪುಗಳಾಗಿ ಒಟ್ಟು 20 ತಂಡಗಳು ಭಾಗವಹಿಸಲಿವೆ. ಈ ನಡುವೆ ಟೀಮ್‌ ಇಂಡಿಯಾದ ಮಾಜಿ ಆಟಗಾರ ಇರ್ಫಾನ್‌ ಪಠಾಣ್‌(Irfan Pathan) ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಹಾರ್ದಿಕ್‌ ಪಾಂಡ್ಯ(Hardik Pandya) ಎಕ್ಸ್‌ ಫ್ಯಾಕ್ಟರ್‌ ಆಗಿರುತ್ತಾರೆ ಎಂದು ಹೇಳಿದ್ದಾರೆ. ಇತ್ತೀಚಿಗೆ ಗಾಯದಿಂದ ಬಳಲುತ್ತಿರುವ ಹಾರ್ದಿಕ್‌ ಪಾಂಡ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಐ ಸರಣಿಯಲ್ಲಿ ತಂಡಕ್ಕೆ ಮರಳಲಿದ್ದಾರೆ. ಸದ್ಯ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಪಾಂಡ್ಯ ದಕ್ಷಿಣ ಆಫ್ರಿಕಾ ಟಿ20ಯಲ್ಲಿ ಕಣಕ್ಕಿಳಿಯಲಿದ್ದಾರೆ.

ಈ ಕುರಿತು ಮಾತನಾಡಿರುವ ಟೀಮ್‌ ಇಂಡಿಯಾ ಮಾಜಿ ಆಟಗಾರ ಇರ್ಫಾನ್‌ ಪಠಾಣ್‌, "ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಹಾರ್ದಿಕ್ ಪಾಂಡ್ಯ ಅವರ ಪಾತ್ರ ಅತ್ಯಂತ ನಿರ್ಣಾಯಕವಾಗಲಿದೆ. ಅವರು ಭಾರತ ಮತ್ತೊಮ್ಮೆ ಟ್ರೋಫಿಯನ್ನು ಎತ್ತಿ ಹಿಡಿಯುವುದರಲ್ಲಿ ಅತಿದೊಡ್ಡ ಪ್ರಭಾವ ಬೀರುತ್ತಾರೆ" ಎಂದು ಹೇಳಿದ್ದಾರೆ.

ಹಾರ್ದಿಕ್‌ ಪಾಂಡ್ಯ ತಂಡಕ್ಕೆ ಮರಳಿದ ಕಾರಣ ರಿಂಕು ಸಿಂಗ್‌ ಅವರನ್ನು ತಂಡದಿಂದ ಹೊರಗಿಡಲಾಯಿತು. ಆದರೆ, ರಿಂಕು ಸಿಂಗ್‌ ಅವರು ತನಗೆ ಸಿಕ್ಕ ಅವಕಾಶಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಪಾಂಡ್ಯ ಅವರಿಗೆ ತಂಡದಲ್ಲಿ ಸ್ಥಾನ ನೀಡಿದ ಪರಿಣಾಮ ಅವರನ್ನು ತಂಡದಿಂದ ಕೈಬಿಡಬೇಕಾಯಿತು. ಇದು ದುರದೃಷ್ಟಕರ ಸಂಗತಿ ಎಂದು ಪಠಾಣ್‌ ಹೇಳಿದ್ದಾರೆ.

ಇದನ್ನೂ ಓದಿ ಕೇಕ್‌ ತಿನ್ನಿಸಲು ಬಂದ ಜೈಸ್ವಾಲ್‌ಗೆ ಖಡಕ್‌ ಎಚ್ಚರಿಕೆ ನೀಡಿದ ರೋಹಿತ್‌; ವೈರಲ್‌ ವಿಡಿಯೊ ಇಲ್ಲಿದೆ

ಇರ್ಫಾನ್‌ ಪಠಾಣ್‌ ಆರಿಸಿರುವ ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ಸಂಜು ಸ್ಯಾಮ್ಸನ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷ್‌ದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್‌ ಸುಂದರ್‌.

ಟಿ20 ವಿಶ್ವಕಪ್ 2026 ಭಾರತದ ವೇಳಾಪಟ್ಟಿ

ಫೆಬ್ರವರಿ 7: ಭಾರತ vs ಯುಎಸ್​​ಎ

ಫೆಬ್ರವರಿ 12: ಭಾರತ vs ನಮೀಬಿಯಾ

ಫೆಬ್ರವರಿ 15: ಭಾರತ vs ಪಾಕಿಸ್ತಾನ್

ಫೆಬ್ರವರಿ 18: ಭಾರತ vs ನೆದರ್​ಲೆಂಡ್ಸ್

ಈ ಗುಂಪು ಹಂತದ ನಾಲ್ಕು ಪಂದ್ಯಗಳ ಬಳಿಕ 4 ಗುಂಪುಗಳ ಅಂಕ ಪಟ್ಟಿಯಲ್ಲಿ ಪ್ರತಿ ಗುಂಪಿನಿಂದ ಮೊದಲೆರಡು ಸ್ಥಾನ ಗಳಿಸಿರುವ ತಂಡಗಳು ಸೂಪರ್‌-8 ಸುತ್ತನಲ್ಲಿ ಆಡಲಿವೆ. ಅದರಂತೆ ಮೊದಲ ಸುತ್ತಿನ ಬಳಿಕ ಸೂಪರ್-8 ಹಂತದ ಮುಖಾಮುಖಿ ಶುರುವಾಗಲಿದೆ. ಸೂಪರ್-8 ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ನಾಲ್ಕು ತಂಡಗಳು ಸೆಮಿಫೈನಲ್​​ಗೆ ಅರ್ಹತೆ ಪಡೆಯಲಿದೆ.