ಬೆಂಗಳೂರು: ʼದುಲೀಪ್ ಟ್ರೋಫಿ’(Duleep Trophy) ಚತುರ್ದಿನ ಕ್ರಿಕೆಟ್ ಪಂದ್ಯಾವಳಿ ಇಂದು (ಗುರುವಾರ) ಬೆಂಗಳೂರು ಮತ್ತು ಅನಂತಪುರದಲ್ಲಿ ಏಕಕಾಲಕ್ಕೆ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಇಂಡಿಯಾ ʼಎʼ ಮತ್ತು ಇಂಡಿಯಾ ʼಬಿʼ; ಅನಂತಪುರದಲ್ಲಿ ಇಂಡಿಯಾ ʼಸಿ’ ಮತ್ತು ಇಂಡಿಯಾ ʼಡಿʼ ತಂಡಗಳು ಎದುರಾಗಲಿವೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವಕಾಶಕ್ಕಾಗಿ ಎದುರುನೋಡುತ್ತಿದ್ದ ಇಶಾನ್ ಕಿಶನ್(Ishan Kishan) ಮಂಡಿರಜ್ಜು ಗಾಯದಿಂದ ಮೊದಲ ಸುತ್ತಿನ ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಇವರ ಸ್ಥಾನಕ್ಕೆ ಕೇರಳದ ಸ್ಟಂಪರ್ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲಾಗಿದೆ.
ಬುಚ್ಚಿಬಾಬು ಕ್ರಿಕೆಟ್(Buchi Babu tournament) ಕೂಟದ ಪಂದ್ಯದಲ್ಲಿ ಇಶಾನ್ ಕಿಶನ್ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು. ಇಶಾನ್ ಈ ಟೂರ್ನಿಯಲ್ಲಿ ಒಂದು ಶತಕ ಕೂಡ ಬಾರಿಸಿ ಮಿಂಚಿದ್ದರು. ಇಶಾನ್ ಕಿಶನ್‌ಗೂ ಮುನ್ನ ಸೂರ್ಯಕುಮಾರ್ ಯಾದವ್ ಕೂಡ ಗಾಯದಿಂದಾಗಿ ಮೊದಲ ಸುತ್ತಿನ ಪಂದ್ಯಾವಳಿಯಿಂದ ಹೊರಗುಳಿದಿದ್ದರು. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ಸೆಪ್ಟೆಂಬರ್ 19 ರಿಂದ ಆರಂಭವಾಗುವ ಕಾರಣ ಇಶನ್‌ಗೆ ಈ ಸರಣಿಯಲ್ಲಿ ಅವಕಾಶ ಸಿಗುವುದು ಅನುಮಾನ. ಇಶಾನ್ ಇಂಡಿಯಾ ʼಡಿʼ ತಂಡದಲ್ಲಿ ಸ್ಥಾನ ಪಡೆದಿದ್ದರು.
ಕಳೆದ ವರ್ಷ ನವೆಂಬರ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಸಂದರ್ಭದಲ್ಲಿ ಕಿಶನ್ ಕೊನೆಯದಾಗಿ ಭಾರತಕ್ಕಾಗಿ ಆಡಿದ್ದರು. ನಂತರದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾಗಿದ್ದರೂ ಕೂಡ ಅಂತಿಮ ಹಂತದಲ್ಲಿ ವೈಯಕ್ತಿಕ ಕಾರಣಗಳಿಂದಾಗಿ ಟೆಸ್ಟ್ ಸರಣಿಯಿಂದ ಹೊರಗುಳಿದರು. ಸ್ವಲ್ಪ ವಿರಾಮವನ್ನು ತೆಗೆದುಕೊಂಡ ಇಶಾನ್ಗೆ ಅಂದಿನ ಕೋಚ್ ದ್ರಾವಿಡ್ ಮತ್ತು ಆಯ್ಕೆ ಸಮಿತಿ ರಣಜಿ ಟ್ರೋಫಿ ಪಂದ್ಯಗಳಲ್ಲಿ ಆಡುವಂತೆ ಸೂಚನೆ ನೀಡಿತ್ತು. ಆದರೆ ಇದನ್ನು ಇಶಾನ್ ಕಡೆಗಣಿಸಿದ್ದರು. ಈ ಕಾರಣದಿಂದ ಬಿಸಿಸಿಐ ಅವರನ್ನು ಕೇಂದ್ರೀಯ ಗುತ್ತಿಗೆಯಿಂದಲೂ ಕೈಬಿಟ್ಟಿತ್ತು.
ಮಾನಸಿಕ ಒತ್ತಡದದಿಂದ ಬಳಲುತ್ತಿರುವುದಾಗಿ ಸುಳ್ಳು ಕಾರಣ ನೀಡಿ ಮುಕೇಶ್ ಅಂಬಾನಿ(Mukesh Ambani) ಪುತ್ರ ಅನಂತ್ ಅಂಬಾನಿ(Anant Ambani) ಹಾಗೂ ರಾಧಿಕಾ ಮರ್ಚೆಂಟ್ (Radhika Merchant) ಅವರ ವಿವಾಹಪೂರ್ವ(Anant Ambani wedding) ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ದುಬೈನಲ್ಲಿಯೂ ಪಾರ್ಟಿ ಮಾಡಿ ಸಿಕ್ಕಿಬಿದ್ದಿದ್ದರು. ಇದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿತ್ತು.
ಭಾರತ ‘ಎ’ ತಂಡ
ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.
ಭಾರತ ‘ಬಿ’ ತಂಡ
ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿ.ಕೀ), ಮುಷೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ (ಫಿಟ್‌ನೆಸ್ ಟೆಸ್ಟ್ ಅವಲಂಬನೆ), ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಆವಸ್ತಿ, ಎನ್ ಜಗದೀಸನ್ (ವಿ.ಕೀ)
ಭಾರತ ‘ಸಿ’ ತಂಡ
ಋತುರಾಜ್ ಗಾಯಕ್ವಾಡ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಗೌರವ್ ಯಾದವ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಂಡೆ, ಆರ್ಯನ್ ಜುಯೆಲ್ (ವಿ.ಕೀ), ಸಂದೀಪ್ ವಾರಿಯರ್.
ಭಾರತ ‘ಡಿ’ ತಂಡ
ಶ್ರೇಯಸ್ ಅಯ್ಯರ್ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ (ವಿಕೆಟ್ ಕೀಪರ್), ಸೌರಭ್ ಕುಮಾರ್.