ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿಗ್ಗಜ ಧೋನಿ ದಾಖಲೆ ಮೇಲೆ ಕಣ್ಣಿಟ್ಟ ಇಶಾನ್‌ ಕಿಶನ್‌; 10 ರನ್‌ ಅಗತ್ಯ

Ishan Kishan: ಭಾರತ ಪರ ಅತ್ಯಧಿಕ ಟಿ20 ರನ್‌ ಗಳಿಸಿದ ದಾಖಲೆ ರೋಹಿತ್‌ ಶರ್ಮಾ ಹೆಸರಿನಲ್ಲಿದೆ. ರೋಹಿತ್‌ 4231 ರನ್‌ ಬಾರಿಸಿದ್ದಾರೆ. ವಿರಾಟ್‌ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದು 4188 ರನ್‌ ಗಳಿಸಿದ್ದಾರೆ. ಸೂರ್ಯಕುಮಾರ್‌ ಯಾದವ್‌(3272), ಹಾರ್ದಿಕ್‌ ಪಾಂಡ್ಯ(2288) ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ.

ishan kishan

ನವದೆಹಲಿ, ಸೆ.11: ಪ್ರಚಂಡ ಬ್ಯಾಟಿಂಗ್‌ ಫಾರ್ಮ್‌ನಲ್ಲಿರುವ ಎಡಗೈ ಬ್ಯಾಟರ್‌ ಇಶಾನ್‌ ಕಿಶನ್‌ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ. ಈ ಪಂದ್ಯದಲ್ಲಿ ಅವರಿಗೆ ದಿಗ್ಗಜ ಮಹೇಂದ್ರ ಸಿಂಗ್‌ ಧೋನಿಯ ಮಹತ್ವದ ದಾಖಲೆಯೊಂದನ್ನು ಮುರಿಯುವ ಅವಕಾಶವಿದೆ.

ಇಶಾನ್‌ ಕಿಶನ್‌ ಆಫ್ಘಾನ್‌ ಸರಣಿಯಲ್ಲಿ ಆಡುವ ಅವಕಾಶ ಪಡೆದು 10 ರನ್‌ ಗಳಿಸಿದರೆ ಎಂ.ಎಸ್ ಧೋನಿ ಅವರನ್ನು ಹಿಂದಿಕ್ಕಿ ಟಿ20 ಐಗಳಲ್ಲಿ ಭಾರತದ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನವನ್ನು ತಲುಪುತ್ತಾರೆ. ಕಿಶನ್ ಇದುವರೆಗೆ 55 ಟಿ20ಐ ಗಳಲ್ಲಿ 29.77 ಸರಾಸರಿಯಲ್ಲಿ 1,608 ರನ್ ಗಳಿಸಿದ್ದಾರೆ. ಪ್ರಸ್ತುತ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿರುವ ಧೋನಿ ಟಿ20 ಐಗಳಲ್ಲಿ ಒಟ್ಟು 1,617 ರನ್ ಗಳಿಸಿದ್ದಾರೆ.

ಭಾರತ ಪರ ಅತ್ಯಧಿಕ ಟಿ20 ರನ್‌ ಗಳಿಸಿದ ದಾಖಲೆ ರೋಹಿತ್‌ ಶರ್ಮಾ ಹೆಸರಿನಲ್ಲಿದೆ. ರೋಹಿತ್‌ 4231 ರನ್‌ ಬಾರಿಸಿದ್ದಾರೆ. ವಿರಾಟ್‌ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದು 4188 ರನ್‌ ಗಳಿಸಿದ್ದಾರೆ. ಸೂರ್ಯಕುಮಾರ್‌ ಯಾದವ್‌(3272), ಹಾರ್ದಿಕ್‌ ಪಾಂಡ್ಯ(2288) ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇಶಾನ್ ಕಿಶನ್ ಭಾರತ ತಂಡಕ್ಕೆ ಮರಳಿದಾಗಿನಿಂದ ನಿರಂತರ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. 2026ರ ಟಿ20 ವಿಶ್ವಕಪ್ ಗೆಲುವಿನಲ್ಲೂ ಅವರು ಪ್ರಮುಖ ಪಾತ್ರ ವಹಿಸಿದ್ದರು. ದೇಶೀಯ ಟೂರ್ನಿಯಲ್ಲಿ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ತೋರಿದ್ದರು. ಗುರುವಾರ ಮುಕ್ತಾಯ ಕಂಡಿದ್ದ ದುಲೀಪ್‌ ಟ್ರೋಫಿಯ ಫೈನಲ್‌ನ ಮೊದಲ ಇನಿಂಗ್ಸ್‌ನಲ್ಲಿ ದ್ವೀಶತಕ ಹಾಗೂ ಎರಡನೇ ಇನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿದ್ದರು.

'ರಾಹುಲ್ ದ್ರಾವಿಡ್ ತಂಡದ ಮಾಲೀಕರಂತೆ ವರ್ತಿಸುತ್ತಿದ್ದಾರೆ': ಯುರೋಪಿಯನ್ ತಂಡದ ಕೋಚ್ ಅಚ್ಚರಿಯ ಹೇಳಿಕೆ

ಅಫ್ಘಾನಿಸ್ತಾನ ಮತ್ತು ಭಾರತ ನಡುವಿನ ಮೂರು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ (T20I) ಸರಣಿಯು ಸೆಪ್ಟೆಂಬರ್ 13 ರಿಂದ ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ. ಈ ಮೂರೂ ಪಂದ್ಯಗಳು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಶುಕ್ರವಾರ ಬೆಳಗ್ಗೆ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಮಾರ್ಗದರ್ಶನದಲ್ಲಿ ಆಟಗಾರರು ತಾಲೀಮು ನಡೆಸಿ ಆ ಬಳಿಕ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಅಭ್ಯಾಸ ನಡೆಸಿದರು.

ಭಾರತ ತಂಡ

ಶ್ರೇಯಸ್ ಅಯ್ಯರ್(ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್(ವಿ.ಕೀ.) , ಇಶಾನ್ ಕಿಶನ್(ವಿ.ಕೀ.), ತಿಲಕ್ ವರ್ಮಾ, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಯಶ್ ಠಾಕೂರ್.

ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಜದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿ.ಕೀ.), ಅಬ್ದುಲ್ಲಾ ಅಹ್ಮದ್‌ಜೈ, ಅಜ್ಮತುಲ್ಲಾ ಒಮರ್ಜಾಯ್, ದರ್ವಿಶ್ ರಸೂಲಿ, ಫಝಲ್ಹಕ್ ಫಾರೂಕಿ, ಗುಲ್ಬದಿನ್ ನೈಬ್, ಮೊಹಮ್ಮದ್ ನಬಿ, ಮುಜೀಬ್ ಉರ್ ರೆಹಮಾನ್, ನಂಗೆಯಾಲಿಯಾ ಖರೋಟೆ, ನವೀನ್-ಉಲ್-ಹಕ್, ನೂರ್ ಅಹ್ಮದ್, ನೂರ್ ಉಲ್-ರಹಮಾನ್, ರಶೀದ್ ಖಾನ್, ಸೇದಿಕುಲ್ಲಾ ಅಟಲ್.