ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೀಡಾ ಕ್ಷೇತ್ರದ ಸಾಧಕರಿಗೆ ಉದ್ಯೋಗ ನೀಡುತ್ತಿರುವುದು ಹೆಮ್ಮೆಯ ಸಂಗತಿ : ಮಂಚನಬಲೆ ಶ್ರೀನಿವಾಸ್

ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಸರಕಾರಿ ಉದ್ಯೋಗಳಲ್ಲಿ ಮೀಸಲಾತಿ ನೀಡುತ್ತಿರು ವುದು ಒಳ್ಳೆಯ ಬೆಳವಣಿಗೆ. ಈ ಅವಕಾಶವನ್ನು ಗ್ರಾಮೀಣ ಭಾಗದ ಕ್ರೀಡಾ ಸಾಧಕರು ಕ್ರೀಡಾಕೂಟ ಗಳಲ್ಲಿ ಉತ್ತಮ ಸಾಧನೆ ದಾಖಲಿಸಿ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಅಸ್ಮಿತ ಕ್ರೀಡಾಕೂಟಕ್ಕೆ ಜಿಲ್ಲೆಯಾದ್ಯಂತ ನೂರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದು, ಈ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಚಿನ್ನ, ಬೆಳ್ಳಿ, ಕಂಚು ಪದಕಗಳು ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.

ಕ್ರೀಡಾ ಕ್ಷೇತ್ರದ ಸಾಧಕರಿಗೆ ಉದ್ಯೋಗ ನೀಡುತ್ತಿರುವುದು ಹೆಮ್ಮೆಯ ಸಂಗತಿ  ಎಂದು ಅಂತರಾಷ್ಟ್ರೀಯ ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್ ಹೇಳಿದರು.

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರಕಾರ(Central Government headed by Prime Minister Narendra Modi) ಇದೇ ಮೊಟ್ಟ ಮೊದಲ ಬಾರಿಗೆ ಅಸ್ಮಿತ ಎಂಬ ವಿನೂತನ ಕ್ರೀಡಾಕೂಟಕ್ಕೆ ಚಾಲನೆ ನೀಡಿದ್ದಾರೆ. ದೇಶದ ಎಲ್ಲಾ ಜಿಲ್ಲೆಗಳಲ್ಲಿ ಈ ಕ್ರೀಡಾಕೂಟ ಗಳನ್ನು ಹಮ್ಮಿಕೊಳ್ಳಲು ಕರೆ ನೀಡಿದ್ದಾರೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನ, ಬೆಳ್ಳಿ, ಕಂಚು ಪದಕಗಳನ್ನು ಪಡೆದ ಕ್ರೀಡಾಪಟುಗಳಿಗೆ ತಹಶೀಲ್ದಾರ್, ಸಬ್‌ಇನ್‌ ಸ್ಪೆಕ್ಟರ್ ಹುದ್ದೆ ಗಳನ್ನು ನೇರವಾಗಿ ನೀಡುತ್ತಿರುವುದು ಹೆಮ್ಮೆಯ ವಿಚಾರ ಎಂದು ಅಥ್ಲೆಟಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾದ ಮಂಚನಬಲೆ ಶ್ರೀನಿವಾಸ್ ತಿಳಿಸಿದರು.

ಸರ್ ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ೧೪, ೧೬ ವರ್ಷ ವಯೋಮಿತಿಯ ಅಸ್ಮಿತ ಕ್ರೀಡಾಕೂಟದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಸರಕಾರಿ ಉದ್ಯೋಗಳಲ್ಲಿ ಮೀಸಲಾತಿ ನೀಡುತ್ತಿರು ವುದು ಒಳ್ಳೆಯ ಬೆಳವಣಿಗೆ. ಈ ಅವಕಾಶವನ್ನು ಗ್ರಾಮೀಣ ಭಾಗದ ಕ್ರೀಡಾ ಸಾಧಕರು ಕ್ರೀಡಾಕೂಟ ಗಳಲ್ಲಿ ಉತ್ತಮ ಸಾಧನೆ ದಾಖಲಿಸಿ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: Chikkaballapur News: ಎಚ್.ಐ.ವಿ ಸೋಂಕು ಹರಡುವಿಕೆ ತಡೆಗಟ್ಟಲು ಜಾಗೃತಿ ಮೂಡಿಸಿ: ನ್ಯಾ.ಟಿ.ಪಿ.ರಾಮಲಿಂಗೇಗೌಡ

ಅಸ್ಮಿತ ಕ್ರೀಡಾಕೂಟಕ್ಕೆ ಜಿಲ್ಲೆಯಾದ್ಯಂತ ನೂರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದು, ಈ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಚಿನ್ನ, ಬೆಳ್ಳಿ, ಕಂಚು ಪದಕಗಳು ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.

ಈ ಕ್ರೀಡಾಕೂಟದ ಉದ್ಘಾಟಕರಾಗಿ ಜಿಲ್ಲಾ ಪೊಲೀಸ್ ಉಪ ಅಧೀಕ್ಷಕ ನಾಗೇಂದ್ರ ಪ್ರಸಾದ್ ಭಾಗವಹಿಸಿದ್ದು, ಎಲ್ಲಾ ತಾಲ್ಲೂಕುಗಳ ಸಬ್‌ಇನ್ಸ್ಪೆಕ್ಟರ್‌ಗಳು ದೆಹಲಿಯಿಂದ ಬಂದಿದ್ದ ವೀಕ್ಷಕರು ಕ್ರೀಡಾಕೂಟ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್‌ನ ಎಲ್ಲಾ ಪದಾಧಿಕಾರಿ ಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಕಾರ್ಯದರ್ಶಿಗಳಾದ ಆನಂದ ಕುಮಾರ್, ಉಮೇಶ್, ವಿಜಯಪುರದ ಪ್ರೌಢಶಾಲೆಯ ದೈಹಿಕ ಶಿಕ್ಷಕಿಯಾದ ಸುಮಿತ್ರ, ಚಿಂತಾಮಣಿಯ ಶೇಖರ್, ಬಿಜಿಎಸ್‌ನ ಮೋಹನ್‌ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಾಗೇಂದ್ರ ಪ್ರಸಾದ್, ಪ್ರಸನ್ನಕುಮಾರ್, ಸುಧಾ ರವರನ್ನು ಸನ್ಮಾನಿಸಲಾಯಿತು ಹಾಗೂ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಗೌರವ ಸಲ್ಲಿಸಲಾಯಿತು.