ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದಿಗ್ಗಜ ಜಾವಗಲ್ ಶ್ರೀನಾಥ್‌ ಟೆಸ್ಟ್‌ ದಾಖಲೆ ಹಿಂದಿಕ್ಕಿದ ಜಸ್‌ಪ್ರೀತ್‌ ಬುಮ್ರಾ

Jasprit Bumrah: ನವೆಂಬರ್ 2025ರಲ್ಲಿ ಭಾರತಕ್ಕಾಗಿ ಕೊನೆಯ ಬಾರಿಗೆ ಟೆಸ್ಟ್ ಪಂದ್ಯವನ್ನಾಡಿದ್ದ ಬುಮ್ರಾ, ಪ್ರಸ್ತುತ ನಡೆಯುತ್ತಿರುವ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಸೇರಿ ಕನಿಷ್ಠ ಒಂಬತ್ತು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರೆ, ಅವರು ಚಂದ್ರಶೇಖರ್ ಅವರ ದಾಖಲೆಯನ್ನು ಹಿಂದಿಕ್ಕಿ, ಭಾರತದ ಪರ ಅತಿ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನಕ್ಕೆ ಏರಲಿದ್ದಾರೆ.

Jasprit Bumrah

ವೆಲ್ಲಿಂಗ್ಟನ್‌, ನ.19: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬೂಮ್ರಾ ಭಾರತದ ವೇಗದ ಬೌಲಿಂಗ್ ದಾಳಿಯ ನೇತೃತ್ವ ವಹಿಸಿದ್ದಾರೆ. ಗುರುವಾರ (ನವೆಂಬರ್ 19) ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್‌ನಲ್ಲಿ ಆರಂಭಗೊಂಡ ಪಂದ್ಯದ ಮೊದಲ ದಿನವೇ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಪಂದ್ಯದ ಮೂರನೇ ಎಸೆತದಲ್ಲೇ ನ್ಯೂಜಿಲೆಂಡ್ ನಾಯಕ ಟಾಮ್ ಲ್ಯಾಥಮ್ (0) ಅವರನ್ನು ಕ್ಲೀನ್ ಬೌಲ್ ಮಾಡಿದರು. ನಂತರ ಊಟದ ವಿರಾಮಕ್ಕೂ ಮುನ್ನ ಡೇರಿಲ್ ಮಿಚೆಲ್ (1) ಅವರ ವಿಕೆಟ್ ಪಡೆದರು. ಇದಾದ ಬಳಿಕ ಬ್ಲಂಡೆಲ್(5) ವಿಕೆಟ್‌ ಕಿತ್ತರು.

ಬ್ಲಂಡೆಲ್ ಅವರ ವಿಕೆಟ್ ಪಡೆಯುವ ಮೂಲಕ ಅವರು ಭಾರತಕ್ಕಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ 237ನೇ ವಿಕೆಟ್ ಪಡೆದ ಸಾಧನೆ ಮಾಡಿದರು. ಇದರೊಂದಿಗೆ ಅವರು ಜವಾಗಲ್ ಶ್ರೀನಾಥ್ ಅವರ ದಾಖಲೆಯನ್ನು ಹಿಂದಿಕ್ಕಿದರು. ಅವರಿಗಿಂತ ಒಂದು ವಿಕೆಟ್ ಹೆಚ್ಚು ಪಡೆದಂತಾಗಿದೆ. ಶ್ರೀನಾಥ್ ಅವರು 1991 ರಿಂದ 2002 ರವರೆಗೆ ಭಾರತಕ್ಕಾಗಿ 67 ಟೆಸ್ಟ್ ಪಂದ್ಯಗಳನ್ನು ಆಡಿ 236 ವಿಕೆಟ್‌ಗಳನ್ನು ಕಬಳಿಸಿದ್ದರು.

ʻಎಂಎಸ್‌ ಧೋನಿಯಲ್ಲಿ ವಿಶೇಷ ಪ್ರತಿಭೆ ಕಂಡಿದ್ದೆʼ: ಎಂಎಸ್‌ಡಿಗೆ ಸಚಿನ್ ತೆಂಡೂಲ್ಕರ್ ಭಾವುಕ ಸಂದೇಶ!

ನವೆಂಬರ್ 2025ರಲ್ಲಿ ಭಾರತಕ್ಕಾಗಿ ಕೊನೆಯ ಬಾರಿಗೆ ಟೆಸ್ಟ್ ಪಂದ್ಯವನ್ನಾಡಿದ್ದ ಬುಮ್ರಾ, ಪ್ರಸ್ತುತ ನಡೆಯುತ್ತಿರುವ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಸೇರಿ ಕನಿಷ್ಠ ಒಂಬತ್ತು ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರೆ, ಅವರು ಚಂದ್ರಶೇಖರ್ ಅವರ ದಾಖಲೆಯನ್ನು ಹಿಂದಿಕ್ಕಿ, ಭಾರತದ ಪರ ಅತಿ ಹೆಚ್ಚು ಟೆಸ್ಟ್ ವಿಕೆಟ್‌ಗಳನ್ನು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನಕ್ಕೆ ಏರಲಿದ್ದಾರೆ.

ಸದ್ಯ ಈಗ ಬುಮ್ರಾ ಟೆಸ್ಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದಾರೆ. ಭಾರತದ ಮಾಜಿ ಟೆಸ್ಟ್ ನಾಯಕ ಅನಿಲ್ ಕುಂಬ್ಳೆ, ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್ ಆಗಿದ್ದಾರೆ. ಕುಂಬ್ಳೆ 1990 ರಿಂದ 2008 ರವರೆಗೆ ಭಾರತಕ್ಕಾಗಿ 132 ಟೆಸ್ಟ್ ಪಂದ್ಯಗಳನ್ನು ಆಡಿ, 619 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ರವಿಚಂದ್ರನ್ ಅಶ್ವಿನ್ 537 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಕಪಿಲ್ ದೇವ್ 434 ವಿಕೆಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಹರ್ಭಜನ್ ಸಿಂಗ್ ತಮ್ಮ ಟೆಸ್ಟ್ ವೃತ್ತಿಜೀವನವನ್ನು 417 ವಿಕೆಟ್‌ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ. ರವೀಂದ್ರ ಜಡೇಜಾ ಇದುವರೆಗೆ 356 ವಿಕೆಟ್‌ಗಳನ್ನು ಪಡೆದಿದ್ದಾರೆ. ಭಾರತಕ್ಕಾಗಿ ಕ್ರಮವಾಗಿ 92 ಮತ್ತು 105 ಟೆಸ್ಟ್ ಪಂದ್ಯಗಳನ್ನು ಆಡಿರುವ ಜಹೀರ್ ಖಾನ್ ಮತ್ತು ಇಶಾಂತ್ ಶರ್ಮಾ ತಲಾ 311 ವಿಕೆಟ್‌ಗಳನ್ನು ತಮ್ಮ ಖಾತೆಯಲ್ಲಿ ಹೊಂದಿದ್ದಾರೆ. ಇವರ ನಂತರದ ಸ್ಥಾನಗಳಲ್ಲಿ ಬಿಷನ್ ಸಿಂಗ್ ಬೇಡಿ (266) ಮತ್ತು ಭಾಗವತ್ ಚಂದ್ರಶೇಖರ್ (242) ಇದ್ದಾರೆ.