Jasprit Bumrah update: ಇಂದು ಬುಮ್ರಾ ಫಿಟ್‌ನೆಸ್ ಅಂತಿಮ ವರದಿ ಪ್ರಕಟ!
Jasprit Bumrah: ಒಂದು ವೇಳೆ ಬುಮ್ರಾ ಫಿಟ್ ಆಗದೇ ಹೋದರೆ ಅವರ ಜಾಗದಲ್ಲಿ ವರುಣ್ ಚಕ್ರವರ್ತಿ ಅಥವಾ ಹರ್ಷಿತ್ ರಾಣಾ ಆಡುವ ಸಾಧ್ಯತೆಯಿದೆ. ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಬದಲಾವಣೆ ಗಳಿದ್ದರೆ ತಿಳಿಸಲು ಫೆ. 12 ಅಂತಿಮ ಗಡುವಾಗಿದೆ.
![ಇಂದು ಬುಮ್ರಾ ಫಿಟ್‌ನೆಸ್ ಅಂತಿಮ ವರದಿ ಪ್ರಕಟ!](https://cdn-vishwavani-prod.hindverse.com/media/original_images/Jasprit_Bumrah_19.jpg)
Jasprit Bumrah
![Profile](https://vishwavani.news/static/img/user.png)
ಬೆಂಗಳೂರು: ಬಾರ್ಡರ್-ಗಾವಸ್ಕರ್ ಟ್ರೋಫಿ ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬೆನ್ನುನೋವಿನ ಗಾಯಕ್ಕೆ ತುತ್ತಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೇಗಿ ಜಸ್‌ಪ್ರೀತ್ ಬುಮ್ರಾ ಅವರ ತಪಾಸಣೆ, ಸ್ಕ್ಯಾನಿಂಗ್ ಪ್ರಕ್ರಿಯೆ ಸಂಪೂರ್ಣ ಮುಗಿದಿದ್ದು ಇಂದು(ಶನಿವಾರ) ಬಿಸಿಸಿಐ ವೈದ್ಯಕೀಯ ತಂಡ ಅವರ ಫಿಟ್‌ನೆಸ್ ವರದಿಯನ್ನು ಪರಿಶೀಲಿಸಿ ಚಾಂಪಿಯನ್ಸ್ ಟ್ರೋಫಿಗೆ ಬುಮ್ರಾ ಆಯ್ಕೆ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
2021ರಲ್ಲಿ ದುಬೈನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ವೇಳೆಯೂ ಬುಮ್ರಾ ಬೆನ್ನುನೋವಿಗೆ ಸಿಲುಕಿ ಟೂರ್ನಿಗೆ ಅಲಭ್ಯರಾಗಿದ್ದರು. ಈ ವೇಳೆ ಭಾರತ ಲೀಗ್ ಹಂತದಲ್ಲೇ ಮುಗ್ಗರಿಸಿತ್ತು. ಅದರಲ್ಲೂ ಪಾಕಿಸ್ತಾನ ವಿರುದ್ಧ 10 ವಿಕೆಟ್ ಅಂತರದ ಹೀನಾಯ ಸೋಲು ಕಂಡಿತ್ತು. ಈ ಬಾರಿಯೂ ಬುಮ್ರಾ ಇಲ್ಲದಿದ್ದರೆ ಭಾರತಕ್ಕೆ ದೊಡ್ಡ ಹಿನ್ನಡೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಹೀಗಾಗಿ ಭಾರತ ಚಾಂಪಿಯನ್ಸ್ ಟ್ರೋಫಿ ಗೆಲ್ಲಬೇಕಾದರೆ ಬುಮ್ರಾ ಅವರ ಫಿಟ್‌ನೆಸ್ ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ.
ಒಂದು ವೇಳೆ ಬುಮ್ರಾ ಫಿಟ್ ಆಗದೇ ಹೋದರೆ ಅವರ ಜಾಗದಲ್ಲಿ ವರುಣ್ ಚಕ್ರವರ್ತಿ ಅಥವಾ ಹರ್ಷಿತ್ ರಾಣಾ ಆಡುವ ಸಾಧ್ಯತೆಯಿದೆ. ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಬದಲಾವಣೆ ಗಳಿದ್ದರೆ ತಿಳಿಸಲು ಫೆ. 12 ಅಂತಿಮ ಗಡುವಾಗಿದೆ.
ಇದನ್ನೂ ಓದಿ Champions Trophy Anthem Song: ಚಾಂಪಿಯನ್ಸ್ ಟ್ರೋಫಿಯ ಅಧಿಕೃತ ಥೀಮ್ ಸಾಂಗ್ ಬಿಡುಗಡೆ
ಜಸ್‌ಪ್ರೀತ್ ಬುಮ್ರಾ(Jasprit Bumrah) ಆಡಿದ್ದರೆ ಭಾರತದ ಬಲ ಕಡಿಮೆ ಆಗಲಿದ್ದು, ಗೆಲ್ಲುವ ಸಾಧ್ಯತೆ ಕ್ಷೀಣಿಸಲಿದೆ ಎಂದು ಭಾರತದ ಮಾಜಿ ಕೋಚ್ ರವಿ ಶಾಸ್ತ್ರಿ ಕೆಲ ದಿನಗಳ ಹಿಂದೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಬುಮ್ರಾ ಆಡದೇ ಇದ್ದರೆ ಭಾರತ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಸಾಧ್ಯತೆ ಶೇ.30-35ರಷ್ಟು ಕಡಿಮೆಯಾಗಬಹುದು ಎಂದು ಹೇಳಿದ್ದರು.
ಭಾರತ(India vs Pakistan) ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಭಾರತ ಫೈನಲ್ ಪ್ರವೇಶಿಸಿದೆ ಈ ಪಂದ್ಯವನ್ನು ಕೂಡ ದುಬೈನಲ್ಲೇ ಆಡಲಿದೆ. ಭಾರತ ಫೈನಲ್ ತಲುಪದಿದ್ದರೆ ಲಾಹೋರ್‌ನಲ್ಲಿ ಫೈನಲ್ ನಡೆಯಲಿದೆ.