Saturday, 14th December 2024

ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ: ಕೆಎಲ್ ರಾಹುಲ್’ಗೆ ಉಪ ನಾಯಕ ಪಟ್ಟ

K L Rahul
ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಬಿಸಿಸಿಐ ರೋಹಿತ್ ಬದಲು ಕೆಎಲ್ ರಾಹುಲ್ ಅವರನ್ನು ಉಪ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.

K L rahulದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ನೂತನ ಉಪ ನಾಯಕ ರೋಹಿತ್ ಶರ್ಮಾ ಹೊರಗುಳಿ ದಿದ್ದಾರೆ. ಮುಂಬೈನ ಬಾಂದ್ರ ಕುರ್ಲಾ ಕಾಂಪ್ಲೆಕ್ಸ್ ಮೈದಾನದಲ್ಲಿ ಅಭ್ಯಾಸ ನಡೆಸುವಾಗ ಶರ್ಮಾಗೆ ಗಂಭೀರವಾಗಿ ಗಾಯವಾಗಿ ಇಂಜುರಿಗೆ ತುತ್ತಾಗಿದ್ದರು. ಹೀಗಾಗಿ ಭಾರತ ಎ ತಂಡದ ನಾಯಕ ಪ್ರಿಯಾಂಕ್ ಪಾಂಚಾಲ್ ಟೆಸ್ಟ್ ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಬದಲು ಕೆಎಲ್ ರಾಹುಲ್ ಅವರನ್ನು ಉಪ ನಾಯಕನಾಗಿ ಆಯ್ಕೆ ಮಾಡಲಾಗಿದೆಯಂತೆ. ಸದ್ಯದಲ್ಲೇ ಬಿಸಿಸಿಐ (BCCI) ಅಧಿಕೃತವಾಗಿ ಈ ಮಾಹಿತಿ ಹೊರಹಾಕಲಿದೆಯಂತೆ.

ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಕೆಎಲ್ ರಾಹುಲ್​ಗೆ ಉಪ ನಾಯಕನ ಸ್ಥಾನ ನೀಡಿದ್ದೇವೆ” ಎಂದು ಬಿಸಿಸಿಐ ಖಚಿತ ಮೂಲಗಳು ತಿಳಿಸಿವೆ.

ದಕ್ಷಿಣ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ ಶುರುವಾಗಲಿದ್ದು, ಎರಡನೇ ಟೆಸ್ಟ್ ಜನವರಿ 3 ರಿಂದ ಆರಂಭವಾಗಲಿದೆ. ಹಾಗೆಯೇ ಮೂರನೇ ಟೆಸ್ಟ್ ಜನವರಿ 11 ರಿಂದ 15 ವರೆಗೆ ನಡೆಯಲಿದೆ. ಏಕದಿನ ಸರಣಿ ಜನವರಿ 19 ರಿಂದ ಆರಂಭವಾಗಲಿದೆ. ವೈಟ್ ಬಾಲ್ ಕ್ರಿಕೆಟ್​ಗೆ ಹೊಸ ನಾಯಕ ರೋಹಿತ್ ಶರ್ಮಾ ಈ ಹೊತ್ತಿಗೆ ಸ್ನಾಯುಸೆಳೆತದ ಗಾಯದಿಂದ ರಿಕವರಿ ಆಗದಿದ್ದರೆ ತಂಡದ ನಾಯಕತ್ವ ಕೆಎಲ್ ರಾಹುಲ್ ಹೊರುವ ಸಾಧ್ಯತೆ ಇದೆ ಎನ್ನಲಾಗಿದೆ.

ಭಾರತದ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್.ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಪ್ರಿಯಾಂಕ್ ಪಾಂಚಾಲ್.