ಭವಿಷ್ಯದ ತಮ್ಮ ನೆಚ್ಚಿನ ಐವರು ಸ್ಟಾರ್ ಕ್ರಿಕೆಟಿಗರನ್ನು ಹೆಸರಿಸಿದ ಕೇನ್ ವಿಲಿಯಮ್ಸನ್!
ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಹಾಗೂ ದಿಗ್ಗಜ ಬ್ಯಾಟ್ಸ್ಮನ್ ಕೇನ್ ವಿಲಿಯಮ್ಸನ್ ಅವರು, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭವಿಷ್ಯದ ಐವರು ಫ್ಯಾಬ್ ಕ್ರಿಕೆಟಿಗರನ್ನು ಆರಿಸಿದ್ದಾರೆ. ಇದರಲ್ಲಿ ಅವರು ಇಬ್ಬರು ಭಾರತೀಯರಿಗೆ ಸ್ಥಾನವನ್ನು ಕಲ್ಪಿಸಿದ್ದಾರೆ. ಯಶಸ್ವಿ ಜೈಸ್ವಾಲ್ ಹಾಗೂ ಶುಭಮನ್ ಗಿಲ್ ಈ ಪಟ್ಟಿಯಲ್ಲಿ ಸ್ಥಾನವನ್ನು ಪಡೆದಿದ್ದಾರೆ. ನ್ಯೂಜಿಲೆಂಡ್ ತಂಡದ ರಚಿನ್ ರವೀಂದ್ರ, ಇಂಗ್ಲೆಂಡ್ ತಂಡ ಹ್ಯಾರಿ ಬ್ರೂಕ್ ಹಾಗೂ ಆಸ್ಟ್ರೇಲಿಯಾ ತಂಡದ ಕ್ಯಾಮೆರಾನ್ ಗ್ರೀನ್ ಅವರನ್ನು ಕೂಡ ಅವರು ಆಯ್ಕೆ ಮಾಡಿದ್ದಾರೆ.

Kane Williamson


ಕೇನ್ ವಿಲಿಯಮ್ಸನ್ ಹೇಳಿದ್ದೇನು?
ಬಾಂಬೆ ಸ್ಪೋರ್ಟ್ ಎಕ್ಸ್ಚೇಂಜ್ ಪಾಡ್ಕಾಸ್ಟ್ನಲ್ಲಿ ಮಾತನಾಡಿದ ಕೇನ್ ವಿಲಿಯಮ್ಸನ್, "ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭವಿಷ್ಯದ ಐವರು ಫ್ಯಾಬ್ ಆಟಗಾರರ ಎಂದಾಗ ನನಗೆ, ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಚಿನ್ ರವೀಂದ್ರ, ಹ್ಯಾರಿ ಬ್ರೂಕ್ ಹಾಗೂ ಕ್ಯಾಮೆರಾನ್ ಗ್ರೀನ್ ಅವರ ಹೆಸರುಗಳು ನೆನಪಾಗುತ್ತದೆ,"ಎಂದು ಹೇಳಿದ್ದಾರೆ.

ಯಶಸ್ವಿ ಜೈಸ್ವಾಲ್
ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿ ಕೆಲವೇ ವರ್ಷಗಳಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ. ಭಾರತ ಟೆಸ್ಟ್ ತಂಡದ ಪರ ಆರಂಭಿಕ ಬ್ಯಾಟ್ ಮಾಡುವ ಅವರು, ಭಾರತ ಟಿ20ಐ ತಂಡದಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ.

ಶುಭಮನ್ ಗಿಲ್
ಭಾರತ ತಂಡದ ಮತ್ತೊಬ್ಬ ಬ್ಯಾಟ್ಸ್ಮನ್ ಶುಭಮನ್ ಗಿಲ್ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಭರವಸೆ ಮೂಡಿಸಿದ್ದಾರೆ. ಇವರು ಭಾರತದ ಪರ ಮೂರೂ ಸ್ವರೂಪದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ. 32 ಟೆಸ್ಟ್ ಪಂದ್ಯಗಳಿಂದ 1893 ರನ್, 55 ಏಕದಿನ ಪಂದ್ಯಗಳಿಂದ 2775 ರನ್ಗಳಿದ್ದಾರೆ ಹಾಗೂ 21 ಪಂದ್ಯಗಳಿಂದ 578 ರನ್ ಗಳಿಸಿದ್ದಾರೆ.

ರಚಿನ್ ರವೀಂದ್ರ
ನ್ಯೂಜಿಲೆಂಡ್ ಪರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಆರಂಭದಲ್ಲಿಯೇ ರಚಿನ್ ರವೀಂದ್ರ ದೊಡ್ಡ ಹೆಸರು ಮಾಡಿದ್ದಾರೆ. ತವರಿನಲ್ಲಿ ಮಾತ್ರವಲ್ಲದೆ, ವಿದೇಶಿ ಕಂಡೀಷನ್ಸ್ನಲ್ಲಿಯೂ ಅಬ್ಬರಿಸಬಲ್ಲ ಸಾಮರ್ಥ್ಯವನ್ನು ರಚಿನ್ ರವೀಂದ್ರ ಹೊಂದಿದ್ದಾರೆ. 2023ರ ಏಕದಿನ ವಿಶ್ವಕಪ್ ಟೂರ್ನಿ ಸೇರಿದಂತೆ ಐಸಿಸಿ ಟೂರ್ನಿಗಳಲ್ಲಿ ಅವರು ಮಿಂಚಿದ್ದಾರೆ.

ಹ್ಯಾರಿ ಬ್ರೂಕ್
ಇಂಗ್ಲೆಂಡ್ ತಂಡದ ಯುವ ಬ್ಯಾಟ್ಸ್ಮನ್ ಹ್ಯಾರಿ ಬ್ರೂಕ್ ಅವರು ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಅವರು ಟೆಸ್ಟ್, ಏಕದಿನ ಹಾಗೂ ಟಿ20 ಮೂರೂ ಸ್ವರೂಪದಲ್ಲಿ ಇಂಗ್ಲೆಂಡ್ ತಂಡಕ್ಕೆ ಹ್ಯಾರಿ ಬ್ರೂಕ್ ಕೀ ಬ್ಯಾಟ್ಸ್ಮನ್ ಆಗಿದ್ದಾರೆ.

ಕ್ಯಾಮೆರಾನ್ ಗ್ರೀನ್
ಆಸ್ಟ್ರೇಲಿಯಾ ತಂಡದ ಆಲ್ರೌಂಡರ್ ಕ್ಯಾಮೆರಾನ್ ಗ್ರೀನ್ ಅವರು ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ತಮ್ಮ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಗಮನವನ್ನು ಸೆಳೆದಿದ್ದಾರೆ. ಟೆಸ್ಟ್, ಏಕದಿನ ಹಾಗೂ ಟಿ20 ಮೂರೂ ಸ್ವರೂಪದಲ್ಲಿ ಕ್ಯಾಮೆರಾನ್ ಗ್ರೀನ್ ಆಸ್ಟ್ರೇಲಿಯಾ ತಂಡಕ್ಕೆ ಕ್ಯಾಮೆರಾನ್ ಗ್ರೀನ್ ಕೀ ಆಟಗಾರ.