Wednesday, 11th December 2024

ಮಾಜಿ ನಾಯಕ ಕಪಿಲ್ ದೇವ್ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ನವದೆಹಲಿ: ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಗುಣಮುಖ ರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸದ್ಯ ಕಪಿಲ್ ದೇವ್ ಗುಣಮುಖರಾಗಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡು ಗಡೆಯಾಗಿದ್ದಾರೆ ಎಂದು ಪೋರ್ಟಿಸ್ ಎಸ್ಕಾರ್ಟ್ಸ್ ಹಾರ್ಟ್ ಇನ್ ಸ್ಟಿಟ್ಯೂಟ್ ನ ಕಾರ್ಡಿಯಾಲಜಿ ವಿಭಾಗದ ನಿರ್ದೇಶಕರು ಹೇಳಿದ್ದಾರೆ.

61 ವರ್ಷದ ಲೆಜೆಂಡ್ ಆಲ್ರೌಂಡರ್ ಕಪಿಲ್ ದೇವ್ ಅವರಿಗೆ ಶುಕ್ರವಾರ ಹೃದಯಾಘಾತವಾಗಿತ್ತು. ಅವರನ್ನು ದೆಹಲಿಯ ಪೋರ್ಟಿಸ್ ಆಸ್ಪತ್ರೆಯಲ್ಲಿ ಆಯಂಜಿಯೋಪ್ಲಾಸ್ಟ್ ಶಸ್ತ್ರಚಿಕಿತ್ಸೆ ಮಾಡಲಾ ಗಿತ್ತು.

ಭಾರತ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾದ ಕಪಿಲ್ ದೇವ್ 131 ಟೆಸ್ಟ್ ಹಾಗೂ 225 ಏಕದಿನ ಪಂದ್ಯಗಳನ್ನು ಆಡಿದ್ದಾರೆ. 1983ರ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಮುನ್ನಡೆಸಿ ಭಾರತಕ್ಕೆ ಚೊಚ್ಚಲ ವಿಶ್ವಕಪ್ ಗೆದ್ದಿದ್ದರು. ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು ಸಾಧಿಸಿತ್ತು.