Monday, 16th September 2024

ಗೆಲುವಿನ ಹುಡುಕಾಟದಲ್ಲಿ ಕಿಂಗ್ಸ್‌ ಇಲೆವನ್ ಪಂಜಾಬ್

ದುಬೈ: ರನ್‌ಗಳ ಹೊಳೆ ಹರಿಸುವ ಬ್ಯಾಟಿಂಗ್ ಪಡೆ ಇರುವ ಕಿಂಗ್ಸ್‌ ಇಲೆವನ್ ಪಂಜಾಬ್ ತಂಡವು ಬೌಲಿಂಗ್‌ನಲ್ಲಿ ಎಡವುತ್ತಿದೆ. ಇದೇ ಹಾದಿಯಲ್ಲಿ ಗುರುವಾರ ಸನ್‌ರೈಸರ್ಸ್‌ ಹೈದರಾ ಬಾದ್ ತಂಡವನ್ನು ಎದುರಿಸಲಿದೆ.

ಕೆ.ಎಲ್. ರಾಹುಲ್ ನಾಯಕತ್ವದ ಕಿಂಗ್ಸ್ ತಂಡವು ಐದು ಪಂದ್ಯಗಳನ್ನಾಡಿ ನಾಲ್ಕರಲ್ಲಿ ಸೋತಿದೆ. ಡೇವಿಡ್ ವಾರ್ನರ್ ನಾಯ ಕತ್ವದ ಸನ್‌ರೈಸರ್ಸ್‌ ಐದು ಪಂದ್ಯಗಳಲ್ಲಿ ಆಡಿ ಎರಡ ರಲ್ಲಿ ಗೆದ್ದು, ಮೂರರಲ್ಲಿ ಸೋತಿದೆ. ಇದೀಗ ತನ್ನ ಅನುಭವಿ ಬೌಲರ್ ಭುವನೇಶ್ವರ್ ಕುಮಾರ್ ಸ್ನಾಯುಸೆಳೆತದ ಕಾರಣ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಕಿಂಗ್ಸ್‌ ತಂಡದ ಕನ್ನಡಿಗರಾದ ರಾಹುಲ್, ಮಯಂಕ್ ಅಗರವಾಲ್ ಜೋಡಿಯು ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿರು ವವರ ಪಟ್ಟಿಯ ಮೊದಲೆರಡು ಸ್ಥಾನಗಳಲ್ಲಿದ್ದಾರೆ. ಇಬ್ಬರೂ ತಲಾ ಒಂದು ಶತಕ ಬಾರಿಸಿದ್ದಾರೆ. ನಿಕೊಲಸ್ ಪೂರನ್ ಕೂಡ ಉತ್ತಮ ಲಯದಲ್ಲಿದ್ದಾರೆ. ಇದುವರೆಗೆ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಅವರಿಗೆ ಕಣಕ್ಕಿಳಿಯುವ ಅವಕಾಶವನ್ನೇ ತಂಡವು ಕೊಡದಿರುವುದು ಅಚ್ಚರಿ ಮೂಡಿಸಿದೆ.

ಸನ್‌ರೈಸರ್ಸ್ ತಂಡದಲ್ಲಿ ಡೇವಿಡ್ ವಾರ್ನರ್, ಕೇನ್ ವಿಲಿಯಮ್ಸನ್, ಜಾನಿ ಬೇಸ್ಟೊ ಮತ್ತು ಮನೀಷ್ ಪಾಂಡೆ ಅವರೇ ಬ್ಯಾಟಿಂಗ್ ಬೆನ್ನೆಲುಬು. ಮುಂಬೈ ಎದುರಿನ ಪಂದ್ಯ ದಲ್ಲಿ ಟಿ. ನಟರಾಜನ್, ಸಂದೀಪ್ ಶರ್ಮಾ ಮತ್ತು ಸಿದ್ಧಾರ್ಥ್ ಕೌಲ್ ಹೆಚ್ಚು ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. ಕಿಂಗ್ಸ್‌ ಇಲೆವನ್‌ ಪಂಜಾಬ್‌ ತಂಡದ ಬ್ಯಾಟಿಂಗ್ ಬಲವನ್ನು ನಿಯಂತ್ರಿಸಲು ಬೌಲರ್‌ಗಳು ಯೋಜನೆಯೊಂದಿಗೆ ಕಣಕ್ಕಿಳಿಯಬೇಕಾಗಬಹುದು.

Leave a Reply

Your email address will not be published. Required fields are marked *