Monday, 13th May 2024

ಅಗ್ರಸ್ಥಾನ ಅಲಂಕರಿಸಿದ ಕೊಲ್ಕತ್ತಾ ನೈಟ್ ರೈಡರ್ಸ್

ಬೆಂಗಳೂರು: ಪಾಯಿಂಟ್ಸ್ ಟೇಬಲ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್​ ಅಗ್ರಸ್ಥಾನ ಅಲಂಕರಿಸಿದರೆ, ಮುಂಬೈ ಇಂಡಿಯನ್ಸ್ ಕೊನೆಯ ಸ್ಥಾನದಲ್ಲಿದೆ.

ಐಪಿಎಲ್​ನ ಮೊದಲ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವು ದಾಖಲಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಒಟ್ಟು 6 ಅಂಕಗಳನ್ನು ಸಂಪಾದಿಸಿದೆ.

ಅಲ್ಲದೆ +2.518 ನೆಟ್​ ರನ್ ಹೊಂದುವ ಮೂಲಕ ಆರ್​ಆರ್​ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿ ಯಾಗಿದೆ.

ರಾಜಸ್ಥಾನ್ ರಾಯಲ್ಸ್ ತಂಡವು ಇದುವರೆಗೆ ಮೂರು ಪಂದ್ಯಗಳನ್ನಾಡಿದ್ದು, ಮೂರು ಮ್ಯಾಚ್​ನಲ್ಲೂ ಜಯ ಸಾಧಿಸಿದೆ. ಈ ಮೂಲಕ ಒಟ್ಟು 6 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್​ ರನ್​ ರೇಟ್ +1.249.

ನಾಲ್ಕು ಪಂದ್ಯಗಳಲ್ಲಿ 2 ಜಯ ಹಾಗೂ 2 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂರನೇ ಸ್ಥಾನದಲ್ಲಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ. ಸನ್​ರೈಸರ್ಸ್ ಹೈದರಾಬಾದ್ ತಂಡವು 4 ಪಂದ್ಯಗಳಲ್ಲಿ 2 ಜಯ ಸಾಧಿಸಿದ್ದು, ಇದೀಗ 4 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಎಸ್​ಆರ್​ಹೆಚ್ ತಂಡದ ನೆಟ್ ರನ್ ರೇಟ್ +0.409

ಪಂಜಾಬ್ ಕಿಂಗ್ಸ್ ತಂಡವು 6ನೇ ಸ್ಥಾನದಲ್ಲಿದ್ದು, ಆಡಿರುವ 4 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 4 ಅಂಕಗಳನ್ನು ಸಂಪಾದಿಸಿದೆ.

ಆಡಿರುವ ನಾಲ್ಕು ಮ್ಯಾಚ್​ಗಳಲ್ಲಿ 2 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 4 ಅಂಕಗಳನ್ನು ಹೊಂದಿದ್ದು, ಈ ಮೂಲಕ 7ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.580. ನಾಲ್ಕು ಮ್ಯಾಚ್​ಗಳಲ್ಲಿ 3 ರಲ್ಲಿ ಸೋತಿರುವ ಆರ್​ಸಿಬಿ ಈ ಬಾರಿ 8ನೇ ಸ್ಥಾನದಲ್ಲಿದೆ

ಒಂದು ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -1.347 ನೆಟ್​ ರನ್​ ರೇಟ್​ನೊಂದಿಗೆ 2 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ 9ನೇ ಸ್ಥಾನದಲ್ಲಿದೆ.

ಮೂರು ಪಂದ್ಯಗಳಲ್ಲೂ ಸೋಲನುಭವಿಸಿರುವ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ

Leave a Reply

Your email address will not be published. Required fields are marked *

error: Content is protected !!