KL Rahul: ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಹುಲ್ ಕಣಕ್ಕೆ
ಒತ್ತಡ ರಹಿತವಾಗಿ ಬ್ಯಾಟಿಂಗ್ ನಡೆಸುವ ಸಲುವಾಗಿಯೇ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವ ಜವಾಬ್ದಾರಿಯನ್ನು ತಿರಸ್ಕರಿಸಿದ್ದರು. ಕಳೆದ ಮೂರು ಸೀಸನ್ ಗಳಲ್ಲಿ ಕೆ ಎಲ್ ರಾಹುಲ್ ಅವರು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದರು. ಮೊದಲೆರಡು ಸೀಸನ್ ಗಳಲ್ಲಿ ಲಕ್ನೋ ಪ್ಲೇ ಆಫ್ ಪ್ರವೇಶಿಸಿತ್ತು. ಕಳೆದ ಸೀಸನ್ ನಲ್ಲಿ ತಂಡ ಆರನೇ ಸ್ಥಾನಿಯಾಗಿತ್ತು.

ನವದೆಹಲಿ: ಕನ್ನಡಿಗ ಕೆ.ಎಲ್ ರಾಹುಲ್(KL Rahul) ಅವರು ಯಾವಾಗ ಡೆಲ್ಲಿ ಕ್ಯಾಪಿಟಲ್ಸ್(Delhi Capitals) ತಂಡ ಸೇರಲಿದ್ದಾರೆ ಎಂದು ಭಾರೀ ಕುತೂಹಲದಿಂದ ಕಾಯುತ್ತಿದ್ದ ಅವರ ಅಭಿಮಾನಿಗಳಿಗೆ ಇದೀಗ ಸಿಹಿ ಸುದ್ದಿ ಸಿಕ್ಕಿದೆ. ರಾಹುಲ್ ಭಾನುವಾರ ನಡೆಯುವ ಸನ್‌ರೈಸರ್ಸ್ ಹೈದರಾಬಾದ್(Sunrisers Hyderabad) ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ಮಾಹಿತಿ ನೀಡಿದೆ. ರಾಹುಲ್ ಅವರ ಪತ್ನಿ ಅಥಿಯಾ ಶೆಟ್ಟಿ ಕಳೆದ ಸೋಮವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಹೀಗಾಗಿ ರಾಹುಲ್ ಮಡದಿಯೊಂದಿಗಿರುವ ಸಲುವಾಗಿ ಲಕ್ನೋ ಪಂದ್ಯದಲ್ಲಿ ಆಡದೆ ಮನೆಗೆ ವಾಪಸ್ ಆಗಿದ್ದರು.
ರಾಹುಲ್ ಅಲಭ್ಯತೆಯಲ್ಲಿಯೂ ಡೆಲ್ಲಿ ತಂಡ ಲಕ್ನೋ ವಿರುದ್ಧ ಅಸಾಮಾನ್ಯ ಬ್ಯಾಟಿಂಗ್ ಪ್ರದರ್ಶನದ ಮೂಲಕ ರೋಚಕ ಒಂದು ವಿಕೆಟ್ ಅಂತರದ ಗೆಲುವು ಸಾಧಿಸಿತ್ತು. ರಾಹುಲ್ ತಂಡ ಸೇರಿದರೆ ಡೆಲ್ಲಿಯ ಬ್ಯಾಟಿಂಗ್ ಬಲ ಇನ್ನಷ್ಟು ಬಲಿಷ್ಠವಾಗಲಿದೆ. ಲಕ್ನೋ ಸೂಪರ್ ಜೈಂಟ್ಸ್ (LSG) ರಾಹುಲ್ ಅವರನ್ನು ಬಿಡುಗಡೆ ಮಾಡಿದ ನಂತರ ಕಳೆದ ವರ್ಷ ನಡೆದಿದ್ದ ಮೆಗಾ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 14 ಕೋಟಿ ರೂ.ಗೆ ಖರೀದಿಸಿತ್ತು
ಇನಿಂಗ್ಸ್ ಆರಂಭಿಸಲು ಫಾಫ್ ಡು ಪ್ಲೆಸಿಸ್ ಮತ್ತು ಜೇಕ್ ಫ್ರೇಸರ್ ಮೆಗರ್ಕ್ ಇರುವುದರಿಂದ ರಾಹುಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಸಲು ಡೆಲ್ಲಿ ಫ್ರಾಂಚೈಸಿ ನಿರ್ಧರಿಸಿದೆ. ಜತೆಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನೂ ವಹಿಸಲಿದೆ ಎಂದು ತಿಳಿದುಬಂದಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ರಾಹುಲ್ ಮಧ್ಯಮ ಕ್ರಮಾಂಕದ ಜತೆಗೆ ಕೀಪಿಂಗ್‌ನಲ್ಲಿಯೂ ಮಿಂಚಿದ್ದರು.
ಇದನ್ನೂ ಓದಿ IPL 2025 Points Table: ಕೆಕೆಆರ್ ಗೆಲುವಿನ ಬಳಿಕ ಅಂಕಪಟ್ಟಿ ಹೇಗಿದೆ?