ಬೆಂಗಳೂರು: ತವರಿನ ಚಿನ್ನಸ್ವಾಮಿ ಮೈದಾನದಲ್ಲೇ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಕೆ.ಎಲ್ ರಾಹುಲ್(KL Rahul) ಸೋಲಿನ ಬಳಿಕ ಪಿಚ್‌ಗೆ ತೆರಳಿ ವಿಶೇಷ ಗೌರವ(Touches Pitch) ಸಲ್ಲಿಸಿದ್ದಾರೆ. ರಾಹುಲ್ ಈ ನಡೆಗೆ ನೆಟ್ಟಿಗರು ವಿಭಿನ್ನ ಪ್ರತಿಕ್ರಿಯೆ ನೀಡಿದ್ದಾರೆ. ಬಹುತೇಕ ಜನರು ರಾಹುಲ್‌ಗೆ ಇದು ವಿದಾಯ ಪಂದ್ಯ ಎಂದು ಹೇಳಿದ್ದಾರೆ. ಇನ್ನು ಕೆಲವರು ಮುಂದಿನ ಆವೃತ್ತಿಯಲ್ಲಿ ರಾಹುಲ್ ಆರ್‌ಸಿಬಿ ಪರ ಆಡುವ ಕಾರಣ ಪಿಚ್‌ಗೆ ನಮಿಸಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
2024 ರಲ್ಲಿ ರಾಹುಲ್ ಐದು ಟೆಸ್ಟ್ ಪಂದ್ಯಗಳನ್ನಾಡಿ ಕ್ರಮವಾಗಿ 8, 86, 22, 16, 22*, 68, 0, 12 ರನ್ ಮಾತ್ರ ಕಲೆಹಾಕಿದ್ದಾರೆ. ಕಿವೀಸ್ ವಿರುದ್ಧದ ಉಳಿದ 2 ಪಂದ್ಯಗಳಿಗೆ ಪ್ರಕಟಿಸಿದ ತಂಡದಲ್ಲಿ ರಾಹುಲ್ ಸ್ಥಾನ ಉಳಿಸಿಕೊಂಡಿದ್ದರೂ ಕೂಡ ಅವರಿಗೆ ಆಡುವ ಬಳಗದಲ್ಲಿ ಅವಕಾಶ ಸಿಗುವುದು ಅನುಮಾನ. ವರ್ಷಾಂತ್ಯದಲ್ಲಿ ನಡೆಯುವ ಆಸ್ಟ್ರೇಲಿಯಾದಲ್ಲಿ ನಡೆಯುವ ಐದು ಪಂದ್ಯಗಳ ಟೆಸ್ಟ್ ಸರಣಿಗೂ ರಾಹುಲ್ ಆಯ್ಕೆಯಾಗುವುದು ಅನುಮಾನ. ಈಗಾಗಲೇ ಏಕದಿನ ಮತ್ತು ಟಿ20 ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ KL Rahul : ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಿದ ಕೆಎಲ್ ರಾಹುಲ್
ಕೆ.ಎಲ್ ರಾಹುಲ್ ಟೆಸ್ಟ್‌ನಲ್ಲಿ ಕೊನೆಯ ಬಾರಿಗೆ ಶತಕ ಬಾರಿಸಿದ್ದು 2023ರಲ್ಲಿ. ದಕ್ಷಿಣ ಆಫ್ರಿಕಾ ವಿರುದ್ಧ. ಇದಾದ ಬಳಿಕ ರಾಹುಲ್ ನಿರೀಕ್ಷತ ಪ್ರದರ್ಶನ ತೋರಿಲ್ಲ. ಯುವ ಆಟಗಾರರ ಪೈಪೋಟಿ ಮಧ್ಯೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಲು ವಿಫಲರಾಗುತ್ತಿದ್ದಾರೆ. ಹೀಗೆ ಮುಂದುವರಿದರೆ ಏಕದಿನ ಮತ್ತು ಟಿ20 ತಂಡದಿಂದ ಹೊರಬಿದ್ದಂತೆ ಟೆಸ್ಟ್‌ನಲ್ಲಿಯೂ ಸ್ಥಾನ ಕಳೆದುಕೊಳ್ಳುವುದು ಖಚಿತ.
ಸೋತ ಬೆನ್ನಲ್ಲೇ ಭಾರತ ತಂಡ ಉಳಿದಿರುವ ಎರಡು ಟೆಸ್ಟ್ ಪಂದ್ಯಗಳಿಗೆ ತಂಡದಲ್ಲಿ ಕೆಲ ಬದಲಾವಣೆ ಮಾಡಿದೆ. ಚೆನ್ನೈಯ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ತಂಡಕ್ಕೆ ಸರ್ಪಡೆಗೊಳಿಸಲಾಗಿದೆ. ವಾಷಿಂಗ್ಟನ್ ಸುಂದರ್(washington sundar) ಅವರು ಎರಡನೇ ಟೆಸ್ಟ್‌ಗೆ ಮುಂಚಿತವಾಗಿ ಪುಣೆಯಲ್ಲಿ ತಂಡದೊಂದಿಗೆ ಸೇರಿಕೊಳ್ಳುತ್ತಾರೆ ಎಂದು ಬಿಸಿಸಿಐ(BCCI) ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಭಾರತ ತಂಡ
ರೋಹಿತ್ ಶರ್ಮ (ನಾಯಕ), ಜಸ್‌ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಆಕಾಶ್ ದೀಪ್, ವಾಷಿಂಗ್ಟನ್ ಸುಂದರ್.